ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಶಸ್ತಿಯೊಂದಿಗೆ ವಿದಾಯ ಹೇಳ್ತಾರ ಎಂಎಸ್​ಡಿ?

Twitter
Facebook
LinkedIn
WhatsApp
CSK vs GT, IPL 2023 Final: ಐಪಿಎಲ್ 2023 ರಲ್ಲಿಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು ಅಂತಿಮ ಫೈನಲ್ ಪಂದ್ಯ ನಡೆಯಲಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿ ಆಗಲಿದೆ. ಈ ಪಂದ್ಯ ಅನೇಕ ವಿಶೇಷ ಘಟನೆಗಳಿಗೆ ಸಾಕ್ಷಿಯಾಗಲಿದೆ.

ಇಂದಿನ ಪಂದ್ಯದಲ್ಲಿ ಸಿಎಸ್​ಕೆ ಚಾಂಪಿಯನ್ ಆದರೆ 5ನೇ ಬಾರಿ ಟ್ರೋಫಿ ಎತ್ತಿ ಹಿಡಿದ ಸಾಧನೆ ಮಾಡಲಿದೆ. ಜಿಟಿ ಗೆದ್ದರೆ ಸತತ ಎರಡನೇ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳಲಿದೆ. ಇದರ ನಡುವೆ ಎಂಎಸ್ ಧೋನಿ, ಶುಭ್​ಮನ್ ಗಿಲ್ ಐತಿಹಾಸಿಕ ದಾಖಲೆ ಬರೆಯಲೂ ಸಜ್ಜಾಗಿದ್ದಾರೆ.

ಹೀಗಿರುವಾಗ ಮಹೇಂದ್ರ ಸಿಂಗ್ ಧೋನಿ ಇಂದು ನಿವೃತ್ತಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಐಪಿಎಲ್ 2023 ಆರಂಭವಾದಾಗಿನಿಂದ ಧೋನಿ ನಿವೃತ್ತಿ ವಿಚಾರ ಭಾರೀ ಚರ್ಚೆಯಲ್ಲಿದೆ. ಈ ಬಗ್ಗೆ ಧೋನಿ ಸೇರಿದಂತೆ ಯಾರುಕೂಡ ಈ ವರೆಗೆ ಖಚಿತ ಮಾಹಿತಿ ಹೊರಹಾಕಿಲ್ಲ.

ಟಾಸ್ ವೇಳೆ ಅಥವಾ ಪೋಸ್ಟ್ ಮ್ಯಾಚ್ ಸಂದರ್ಭ ಧೋನಿ ಬಳಿ ನಿವೃತ್ತಿಗೆ ಸಂಬಂಧಿಸಿದಂತೆ ಹಲವಾರು ಬಾರಿ ಪ್ರಶ್ನೆಗಳನ್ನು ಕೇಳಿದರೂ ಇದರ ಬಗ್ಗೆ ಮಾತನಾಡದೇ ಮೌನವಾಗಿದ್ದರು. ಇಂದು ಫೈನಲ್ ಪಂದ್ಯ ಆಗಿರುವುದರಿಂದ ನಿವೃತ್ತಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ನಿವೃತ್ತಿ ಬಳಿಕ ಧೋನಿ ಸಿಎಸ್​ಕೆ ತಂಡದ ಕೋಚ್ ಆಗುವ ಸಾಧ್ಯತೆ ಇದೆ. ಮೊನ್ನೆಯಷ್ಟೆ ಧೋನಿ, ನಿವೃತ್ತಿ ಬಗ್ಗೆ ತೀರ್ಮಾನ ಕೈಗೊಳ್ಳಲು ನನಗಿನ್ನೂ 8ರಿಂದ 9 ತಿಂಗಳ ಸಮಯವಿದೆ. ನಾನು ಯಾವಾಗಲೂ ಚೆನ್ನೈ ಸೂಪರ್ ಕಿಂಗ್ಸ್ ಪರ ಇರುತ್ತೇನೆ, ಅದು ಆಡುವಾಗಾದರೂ ಸರಿ ಅಥವಾ ತಂಡದಿಂದ ಹೊರಗಿದ್ದಾದರೂ ಸರಿ ಎಂದು ಹೇಳಿದ್ದರು.

ಈ ಮೂಲಕ ಧೋನಿ ಇನ್ನೂ ಎಂಟರಿಂದ ಒಂಬತ್ತು ತಿಂಗಳ ಸಮಯವಿದ್ದು, ಆಟಗಾರನಾಗಿ ಇರ್ತೀನೋ ಅಥವಾ ಕೋಚ್ ಆಗಿ ಇರ್ತೀನೋ ಗೊತ್ತಿಲ್ಲ, ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿಯೇ ಇರುತ್ತೇನೆ ಎಂದು ಪರೋಕ್ಷವಾಗಿ ಇದೇ ತನ್ನ ಕೊನೆಯ ಐಪಿಎಲ್ ಎಂದು ತಿಳಿಸಿದ್ದರು.

ಎಂಎಸ್ ಧೋನಿ ಸದ್ಯ ಮೊಣಕಾಲು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರ ಮಧ್ಯೆಯೂ ಐಪಿಎಲ್ ಆಡುತ್ತಿರುವುದು ವಿಶೇಷ. ಐಪಿಎಲ್ ಮುಗಿದ ಬೆನ್ನಲ್ಲೆ ಚಿಕಿತ್ಸೆಗೆ ಒಳಗಾಗಲಿದ್ದಾರೆ. ಧೋನಿ ಇಂದು ನಿವೃತ್ತಿ ಘೋಷಣೆ ಮಾಡಿದರೆ ಚೆನ್ನೈ ಗೆಲುವಿನ ವಿದಾಯ ಹೇಳುತ್ತಾ ಎಂಬುದು ನೋಡಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ