ಗುರುವಾರ, ಏಪ್ರಿಲ್ 18, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಿಯತಮೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ, ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ

Twitter
Facebook
LinkedIn
WhatsApp
Bagalkot District hospital

ಬಾಗಲಕೋಟೆ: ಪ್ರಿಯತಮೆ (Lover) ಮೇಲೆ ಪೆಟ್ರೋಲ್​​ (Petrol) ಸುರಿದು ಬೆಂಕಿ ಹಚ್ಚಿ, ನಂತರ ತಾನೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಾಗಲಕೋಟೆ (Bagalkot) ಜಿಲ್ಲೆ ಹುನಗುಂದ ತಾಲೂಕಿನ ಗುಡೂರು ಗ್ರಾಮದಲ್ಲಿ ನಡೆದಿದೆ. ಪ್ರಿಯತಮೆ ನೇತ್ರಾವತಿ ವಡ್ಡರ್​(21), ಅಫ್ಜಲ್ ಸೊಲ್ಲಾಪುರ (27) ಗಾಯಾಳುಗಳು. ನೇತ್ರಾವತಿ ವಡ್ಡರ ಅವರ ದೇಹ ಶೇ 70 ರಷ್ಟು ಸುಟ್ಟಿದ್ದು, ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಫ್ಜಲ್ ಸೊಲ್ಲಾಪುರ ಅವರನ್ನು ಹುಬ್ಬಳ್ಳಿ ಕಿಮ್ಸ್​ (Hubli Kims) ಆಸ್ಪತ್ರೆಗೆ ದಾಖಲಿಸಲಾಗಿದೆ.

ನೇತ್ರಾವತಿ ವಡ್ಡರ್ ಅವರನ್ನು, ಅಫ್ಜಲ್ ಸೊಲ್ಲಾಪುರ ಪ್ರೀತಿಸುತ್ತಿದ್ದರು. ಇತ್ತೀಚಿಗೆ ನೇತ್ರವಾತಿ ಬೇರೆ ಯುವಕನ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದರಿಂದ ಕ್ರೋದಿತನಾಗಿದ್ದ ಅಫ್ಜಲ್​, ಇಂದು (ಮಾ.27) ನೇತ್ರಾವತಿ ಕೋಳಿ ಫಾರಂಗೆ ತೆರಳುತ್ತಿದ್ದ ವೇಳೆ, ಎಳೆದೊಯ್ದು ಕೃತ್ಯ ಎಸಗಿದ್ದಾನೆ. ಇದನ್ನು ಕಂಡು ಸ್ಥಳಕ್ಕೆ ಧಾವಿಸಿದ ಸ್ಥಳಿಯರು ಇಬ್ಬರನ್ನೂ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ನೇತ್ರಾವತಿಯ ದೇಹ ಶೇ 70 ರಷ್ಟು ಸುಟ್ಟಿದೆ. ಘಟನಾ ಸ್ಥಳಕ್ಕೆ ಅಮೀನಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಾಂಸ ತರದ್ದಕ್ಕೆ ನಡೆದ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯ:
 

ಲಕ್ನೋ: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಪತ್ನಿ ಬರ್ಬರ ಕೊಲೆ (Husband Murdered Wife) ಯಲ್ಲಿ ಅಂತ್ಯವಾದ ಘಟನೆ ಉತ್ತಪ್ರದೇಶದ ಆಲಿಘರ್ ಜಿಲ್ಲೆಯಲ್ಲಿ ನಡೆದಿದೆ.

ಮೃತ ದುರ್ದೈವಿ ಪತ್ನಿಯನ್ನು ಗುಡ್ಡೋ(30) ಎಂದು ಗುರುತಿಸಲಾಗಿದೆ. ಈಕೆಯನ್ನು ಪತಿ ಸಾಗಿರ್ ಕೊಲೆಗೈದಿದ್ದಾನೆ. ಈ ದಂಪತಿಗೆ ಮೂವರು ಮಕ್ಕಳಿದ್ದಾರೆ.

ಇಂದು (ಸೋಮವಾರ) ಮಾಂಸ (Meat) ತರದಿದ್ದಕ್ಕೆ ಪತಿ ಹಾಗೂ ಪತ್ನಿ ನಡುವೆ ಜಗಳ ನಡೆದಿದೆ. ಮಾತಿಗೆ ಮಾತು ಬೆಳೆದು ಸಿಟ್ಟಿನಿಂದ ಸಾಗಿರ್, ಅಲ್ಲೇ ಇದ್ದ ಚಾಕು ತೆಗೆದುಕೊಂಡು ಮಕ್ಕಳ ಮುಂದೆಯೇ ಪತ್ನಿಯ ಕತ್ತು ಸೀಳಿದ್ದಾನೆ. ಇತ್ತ ಅಮ್ಮನನ್ನು ಕೊಲೆ ಮಾಡಿದ್ದರಿಂದ ಭಯಗೊಂಡ ಮಕ್ಕಳು ಜೋರಾಗಿ ಕಿರುಚಾಡಿವೆ. ಇದರಿಂದ ಅಕ್ಕಪಕ್ಕದ ನಿವಾಸಿಗಳು ಓಡಿಬಂದಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ.

ಅಲ್ಲದೆ ಆರೋಪಿ ಸಾಗಿರ್ ನ ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ಮೂವರು ಮಕ್ಕಳಲ್ಲಿ ಓರ್ವ ಮಗಳು, ಪೊಲೀಸರಿಗೆ ನಡೆದ ಘಟನೆಯನ್ನು ಎಳೆಎಳೆಯಾಗಿ ವಿವರಿಸಿದ್ದಾಳೆ.

ಈ ಸಂಬಂಧ ಎಸ್‍ಪಿ ಕುಲ್ದೀಪ್ ಮಾತನಾಡಿ, ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಅಲ್ಲದೆ ಆತ ಕೃತ್ಯಕ್ಕೆ ಬಳಸಿದ್ದ ಆಯುಧವನ್ನು ಕೂಡ ವಶಕ್ಕೆ ಪಡೆದುಕೊಳ್ಳಲಾಗಿದೆ. ಇನ್ನು ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ