ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಫಾರ್ಮಾ ಕಂಪನಿಯಲ್ಲಿ ಸ್ಫೋಟ; ಇಬ್ಬರು ಸಾವು, ಮತ್ತಿಬ್ಬರಿಗೆ ಗಾಯ

Twitter
Facebook
LinkedIn
WhatsApp
ಫಾರ್ಮಾ ಕಂಪನಿಯಲ್ಲಿ ಸ್ಫೋಟ; ಇಬ್ಬರು ಸಾವು, ಮತ್ತಿಬ್ಬರಿಗೆ ಗಾಯ

ವಲ್ಸಾದ್:  ಗುಜರಾತ್ ನ ವಲ್ಸಾದ್ ಜಿಲ್ಲೆಯಲ್ಲಿ ಔಷಧ ಕಂಪನಿಯೊಂದರಲ್ಲಿ ಕಳೆದ ರಾತ್ರಿ ಹಠಾತ್ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಜಿಲ್ಲೆಯ ಸಾರಿಗಾಮ್ ಸಿಐಡಿಸಿ ರಾಸಾಯನಿಕ ವಲಯದಲ್ಲಿರುವ ವ್ಯಾನ್ ಪೆಟ್ರೋಕೆಮ್ ಫಾರ್ಮಾ ಕಂಪನಿಯಲ್ಲಿ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. 

ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.  ಘಟನೆ ಬಗ್ಗೆ ಮಾಹಿತಿ ಪಡೆದ ನಂತರ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಆದಾಗ್ಯೂ, ಯಾವ ರಾಸಾಯನಿಕ ಎಂಬುದು ತಿಳಿಯದೆ ಬೆಂಕಿ ನಂದಿಸಲು ನೀರನ್ನು ಬಳಸಲಿಲ್ಲ.

ಇಲ್ಲಿಯವರೆಗೂ ಎರಡು ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಇಬ್ಬರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಘಟನಾ ಸ್ಥಳಕ್ಕೆ ತೆರಳಿದಾಗ ಯಾವುದೇ ಭದ್ರತಾ ಸಿಬ್ಬಂದಿ ಇರಲಿಲ್ಲ. ಯಾವ ರಾಸಾಯನಿಕ ಎಂಬುದು ತಿಳಿಯದೆ ಅಗ್ನಿ ನಿಯಂತ್ರಣ ಕಾರ್ಯಾಚರಣೆಯನ್ನು ಆರಂಭಿಸಲಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ರಾಹುಲ್ ಮುರಾರಿ ತಿಳಿಸಿದ್ದಾರೆ. 

ರಕ್ಷಣಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದು, ಇಂದು ಮತ್ತೆ ಆರಂಭಿಸಲಾಗುತ್ತಿದೆ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ