ಬುಧವಾರ, ಏಪ್ರಿಲ್ 24, 2024
ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆ; ಕೆಎಸ್ ಈಶ್ವರಪ್ಪ-ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ..!-ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ.!-ಅಂಪೈರ್ ತೀರ್ಪಿಗೆ ಗರಂ ಆಗಿ ವಾಗ್ವಾದಕ್ಕಿಳಿದ ವಿರಾಟ್ ಕೊಹ್ಲಿಗೆ ಬಿಸಿಸಿಐಯಿಂದ ಬಿತ್ತು ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫಿಫಾ ವಿಶ್ವಕಪ್:ಮೆಸ್ಸಿ ಮ್ಯಾಜಿಕ್, ಮರಡೋನಾ ದಾಖಲೆ ಉಡೀಸ್..! ಮೆಕ್ಸಿಕೋ ವಿರುದ್ಧ ಅರ್ಜೆಂಟಿನಾಗೆ ಗೆಲುವು

Twitter
Facebook
LinkedIn
WhatsApp
ಫಿಫಾ ವಿಶ್ವಕಪ್: ಮೆಸ್ಸಿ ಮ್ಯಾಜಿಕ್, ಮರಡೋನಾ ದಾಖಲೆ ಉಡೀಸ್..! ಮೆಕ್ಸಿಕೋ ವಿರುದ್ಧ ಅರ್ಜೆಂಟಿನಾಗೆ ಗೆಲುವು

ಫಿಫಾ ವಿಶ್ವಕಪ್ ಫುಟ್ಬಾಲ್ ಟೂರ್ನಿ ದಿನಕ್ಕೊಂದು ರೋಚಕತೆ ಪಡೆಯುತ್ತಿದ್ದು, ಈ ಹಿಂದೆ ಸೌದಿ ಅರೇಬಿಯಾ ವಿರುದ್ಧ ಸೋತು ಟೂರ್ನಿಯಿಂದ ಬಹುತೇಕ ಔಟ್ ಆಗಿದ್ದ ಹಾಲಿ ಚಾಂಪಿಯನ್ ಅರ್ಜೆಂಟಿನಾ ಇಂದು ನಡೆದ ಮೆಕ್ಸಿಕೋ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಕಮ್ ಬ್ಯಾಕ್ ಮಾಡಿದೆ.

ಮೆಕ್ಸಿಕೋ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಲಿಯೋನಲ್ ಮೆಸ್ಸಿ ನೇತೃತ್ವದ ಅರ್ಜೆಂಟಿನಾ ತಂಡ 2-0 ಅಂತರದ ಗೋಲುಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಮೂಲಕ ಅರ್ಜೆಂಟಿನಾ ತಂಡದ ವಿಶ್ವಕಪ್ ಅಭಿಯಾನ ಜೀವಂತವಾಗಿದ್ದು, ರೌಂಡ್-16 ಹಂತಕ್ಕೇರಲು ಅರ್ಜೆಂಟಿನಾ ತಂಡ ತನ್ನ ಮುಂದಿನ ಪಂದ್ಯಗಳನ್ನೂ ಗೆಲ್ಲಬೇಕಿದೆ.

ಫಿಫಾ ವಿಶ್ವಕಪ್: ಮೆಸ್ಸಿ ಮ್ಯಾಜಿಕ್, ಮರಡೋನಾ ದಾಖಲೆ ಉಡೀಸ್..! ಮೆಕ್ಸಿಕೋ ವಿರುದ್ಧ ಅರ್ಜೆಂಟಿನಾಗೆ ಗೆಲುವು

ಈ ಪಂದ್ಯದಲ್ಲಿ ಮೆಕ್ಸಿಕೊವನ್ನು ಸೋಲಿಸಿದ ಅರ್ಜೆಂಟೀನಾ ವಿಶ್ವಕಪ್​ ಪ್ರಯಾಣವನ್ನು ಜೀವಂತವಾಗಿರಿಸಿಕೊಂಡರೆ, ಈ ಗೆಲುವಿನಲ್ಲಿ ನಾಯಕ ಮೆಸ್ಸಿ ವಿಶೇಷ ದಾಖಲೆಯೊಂದನ್ನು ಸರಿಗಟ್ಟಿದರು. ಫಿಫಾ ವಿಶ್ವಕಪ್ ಇತಿಹಾಸದಲ್ಲಿ ಅರ್ಜೆಂಟೀನಾ ಪರವಾಗಿ ಮರಡೋನಾ ಹೆಸರಿನಲ್ಲಿದ್ದ ದಾಖಲೆಯನ್ನು ಮೆಸ್ಸಿ ಸರಿಗಟ್ಟಿದರು.

ಮೆಸ್ಸಿ, ಮೊದಲು ಮೆಕ್ಸಿಕೋ ವಿರುದ್ಧ ಮೈದಾನಕ್ಕಿಳಿಯುವ ಮೂಲಕ ಅರ್ಜೆಂಟೀನಾ ಪರ 21 ವಿಶ್ವಕಪ್ ಪಂದ್ಯಗಳನ್ನು ಆಡಿದ ಮರಡೋನಾ ಅವರ ದಾಖಲೆಯನ್ನು ಸರಿಗಟ್ಟಿದರು. ಇದರ ನಂತರ, ಅವರು ಅದೇ ಪಂದ್ಯದಲ್ಲಿ ತಮ್ಮ 8 ನೇ ವಿಶ್ವಕಪ್ ಗೋಲು ಗಳಿಸಿದರು. ಇದಕ್ಕೂ ಮುನ್ನ ಡಿಯಾಗೋ ಮರಡೋನಾ ಅರ್ಜೆಂಟೀನಾ ಪರ 8 ವಿಶ್ವಕಪ್ ಗೋಲು ಗಳಿಸಿದ್ದ ಸಾಧನೆ ಮಾಡಿದ್ದರು.

ಫಿಫಾ ವಿಶ್ವಕಪ್: ಮೆಸ್ಸಿ ಮ್ಯಾಜಿಕ್, ಮರಡೋನಾ ದಾಖಲೆ ಉಡೀಸ್..! ಮೆಕ್ಸಿಕೋ ವಿರುದ್ಧ ಅರ್ಜೆಂಟಿನಾಗೆ ಗೆಲುವು

ಪಂದ್ಯದ ದ್ವಿತೀಯಾರ್ಧದಲ್ಲಿ ಮೆಕ್ಸಿಕೋ ವಿರುದ್ಧ ಗೋಲು ಗಳಿಸುವ ಮೂಲಕ ಮೆಸ್ಸಿ ತಂಡಕ್ಕೆ ಮೊದಲ ಮುನ್ನಡೆ ತಂದುಕೊಟ್ಟರು. ಪಂದ್ಯದ ಮೊದಲಾರ್ಧದಲ್ಲಿ ಎರಡೂ ತಂಡಗಳು ಯಾವುದೇ ಗೋಲು ಗಳಿಸಿರಲಿಲ್ಲ. ಆದರೆ ದ್ವಿತೀಯಾರ್ಧದ 64ನೇ ನಿಮಿಷದಲ್ಲಿ ಮೆಸ್ಸಿ ಗೋಲು ಬಾರಿಸಿದ್ದರಿಂದ ಅರ್ಜೆಂಟೀನಾ 1-0 ಇಂದ ಮುನ್ನಡೆ ಸಾಧಿಸಿತು. 2022ರಲ್ಲಿ ಅರ್ಜೆಂಟೀನಾ ಪರ ಮೆಸ್ಸಿ ಗಳಿಸಿದ 13ನೇ ಗೋಲು ಇದಾಗಿದೆ.

ಪಂದ್ಯದ ದ್ವಿತೀಯಾರ್ಧದ 64ನೇ ನಿಮಿಷದಲ್ಲಿ ಮೆಸ್ಸಿ ಗೋಲು ಬಾರಿಸಿದರೆ, 87ನೇ ನಿಮಿಷದಲ್ಲಿ ಎಂಜೊ ಫೆರ್ನಾಂಡಿಸ್ ಗೋಲು ಬಾರಿಸುವುದರೊಂದಿಗೆ ತಂಡದ ಮುನ್ನಡೆಯನ್ನು 2-0ಗೆ ಏರಿಸಿದರು. ಈ ವಿಶ್ವಕಪ್‌ನಲ್ಲಿ ಫೆರ್ನಾಂಡಿಸ್ ಅವರ ಮೊದಲ ಗೋಲು ಇದಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ