ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಫೀಸ್ ಕಟ್ಟಲು ಪರದಾಡುತ್ತಿದ್ದ ಶಾಲಾ ಮಕ್ಕಳ ನೆರವಿಗೆ ಧಾವಿಸಿದ ಕಿಚ್ಚ ಸುದೀಪ

Twitter
Facebook
LinkedIn
WhatsApp
ಫೀಸ್ ಕಟ್ಟಲು ಪರದಾಡುತ್ತಿದ್ದ ಶಾಲಾ ಮಕ್ಕಳ ನೆರವಿಗೆ ಧಾವಿಸಿದ ಕಿಚ್ಚ ಸುದೀಪ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸದ್ಯ ಬಹುನಿರೀಕ್ಷೆಯ ವಿಕ್ರಾಂತ್ ರೋಣ ಸಿನಿಮಾದ ರಿಲೀಸ್‌ನ ಬ್ಯುಸಿಯಲ್ಲಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿರುವ ವಿಕ್ರಾಂತ್ ರೋಣನ ಪ್ರಮೋಷನ್ ಕಾರ್ಯ ಭರ್ಜರಿಯಾಗಿ ನಡೆಯುತ್ತಿದೆ. ಬೇರೆ ಬೇರೆ ರಾಜ್ಯಗಳಿಗೆ ಭೇಟಿ ಮಾಡಿ ಸಿನಿಮಾ ಪ್ರಮೋಷನ್ ಮಾಡುತ್ತಿದ್ದಾರೆ.

ನಡುವೆಯೂ ಕಿಚ್ಚ ಸಾಮಾಜಿಕ ಕೆಲಸ ಬಿಟ್ಟಿಲ್ಲ, ಕಷ್ಟ ಎಂದವರಿಗೆ ಸಹಾಯ ಹಸ್ತ ಚಾಚಾವುದನ್ನು ನಿಲ್ಲಿಸಿಲ್ಲ. ಹೌದು, ಸುದೀಪ್ ಕಷ್ಟದಲ್ಲಿರೋರಿಗೆ ಸಹಾಯ ಮಾಡುತ್ತಾರೆ. ಚಿಕಿತ್ಸೆ ಸಿಗದೆ ಕಷ್ಟಪಡೋರಿಗೆ ಸುದೀಪ್ ಆಸ್ಪತ್ರೆಯ ಚಿಕಿತ್ಸೆಗೆ ನೆರವಾಗಿದ್ದಾರೆ. ಅದೆಷ್ಟೋ ಶಾಲಾ ಮಕ್ಕಳಿಗೆ ಕಿಚ್ಚ ಸಹಾಯ ಮಾಡಿದ್ದಾರೆ. ಇದೀಗ ಕಿಚ್ಚ ,ಸಿನಿಮಾ ಬಿಡುಗಡೆಯ ಬ್ಯುಸಿಯ ನಡುವೆಯೂ ಶಾಲೆಯ ಫೀಸ್ ಕಟ್ಟಲು ಪರದಾಡುತ್ತಿದ್ದ ಮಕ್ಕಳ ನೆರವಿಗೆ ಧಾವಿಸಿದ್ದಾರೆ.

ಹೌದು, ಇಬ್ಬರು ಮಕ್ಕಳ ವಿಧ್ಯಾಭ್ಯಾಸಕ್ಕೆ ಸುದೀಪ್ ಸಹಾಯ ಮಾಡಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆ ರಾಮಮಂದಿರ ಶಾಲೆಯ ಇಬ್ಬರು ವಿಧ್ಯಾರ್ಥಿಗಳಿಗೆ ನೆರವಿನ ಹಸ್ತ ಚಾಚಿದ್ದಾರೆ. ಈ ಶಾಲೆಯ ತರುಣ್ ಮತ್ತು ಸುದೀಪ್ ಎನ್ನುವ ಇಬ್ಬರು ಮಕ್ಕಳು ಶಾಲೆಯ ಕಟ್ಟಲಾಗದೆ ಪರದಾಡುತ್ತಿದ್ದರು. ಬಳಿಕ ಕಿಚ್ಚನ ಟೀಂ ಫೀಸ್ ಕಟ್ಟಿ ಮಕ್ಕಳನ್ನು ಮರಳಿ ಶಾಲೆಗೆ ಸೇರಿದ್ದಾರೆ.

ಈ ಇಬ್ಬರು ಮಕ್ಕಳು ಸ್ಕೂಲ್ ಫೀಜ್ ಕಟ್ಟಲು ಸಾಧ್ಯವಾಗದೆ ಶಾಲೆಗೆ ಹೋಗುತ್ತಿರಲಿಲ್ಲ. ಅಷ್ಟಕ್ಕೂ ಫೀಸ್ ಕಟ್ಟಿಲ್ಲ ಎನ್ನುವ ಕಾರಣಕ್ಕೆ ಶಾಲೆಯಲ್ಲಿ ಅಡ್ಮೀಷನ್ ಸಹ ಮಾಡಿಕೊಂಡಿರಲಿಲ್ಲ ಶಾಲೆ ಆಡಳಿತ ಮಂಡಳಿ. ಇದು ಸುದೀಪ್ ಚಾರಿಟೇಬಲ್ ಸೊಸೈಟಿ ಗಮನಕ್ಕೆ ಬಂದಿದೆ. ಬಳಿಕ ತಕ್ಷಣ ಸಹಾಯಕ್ಕೆ ಧಾವಿಸಿ ಇಬ್ಬರು ಮಕ್ಕಳ ಶಾಲೆಯ ಫೀಸ್ ಕಟ್ಟುವ ಮೂಲಕ ಮತ್ತೆ ಮಕ್ಕಳು ಶಾಲೆ ಮುಖ ನೋಡುವಂತೆ ಮಾಡಿದರು.

ಈ ಇಬ್ಬರು ಮಕ್ಕಳು ಚಾಮರಾಜನಗರದಲ್ಲಿರೋ ರಘು ಚಾರ್ಲಿ ಎನ್ನುವವರ ಮಕ್ಕಳು. .ರಘು ಚಾರ್ಲಿ ಕೂಡ ಕಲಾವಿದ. ಸಿನಿಮಾಗಳಲ್ಲಿ ಕೆಲಸವಿಲ್ಲದೆ ಮಕ್ಕಳ ವಿಧ್ಯಾಭ್ಯಾಸಕ್ಕೆ ಕಷ್ಟ ಪಡುತ್ತಿದ್ದರು. ಸುದೀಪ ಮಾಡಿದ ಸಹಾಯ ನೆನೆದು ರಘುಿ ಚಾರ್ಲಿ ಭಾವುಕರಾಗಿದರು. ಕಿಚ್ಚನ ಈ ಮಾನವೀಯ ಕೆಲಸಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಂದಹಾಗೆ ಸುದೀಪ್ ಸಹಾಯ ಮಾಡುತ್ತಿರುವುದು ಇದೇ ಮೊದಲಲ್ಲ. ಈ ಮೊದಲು ಸಹ ಅನೇಕ ವಿದ್ಯಾರ್ಥಿಗಳಿಗೆ ನೆರವಾಗಿದ್ದಾರೆ. ಅಳವಿನ ಅಂಚಿನಲ್ಲಿದ್ದ ಅನೇಕ ಸರ್ಕಾರಿ ಶಾಲೆಗಳಿಗೆ ಸಹಾಯ ಮಾಡಿದ್ದಾರೆ.

ಇನ್ನು ಸುದೀಪ್ ಸಿನಿಮಾ ಬಗ್ಗೆ ಹೇಳುವುದಾದರೆ ಕಿಚ್ಚನ ಬಹುನಿರೀಕ್ಷೆಯ ವಿಕ್ರಾಂತ್ ರೋಣ ಸಿನಿಮಾ ಜುಲೈ 28ರಂದು ಅದ್ದೂರಿಯಾಗಿ ತೆರೆಗೆ ಬರುತ್ತಿದೆ. ಕನ್ನಡ ಸೇರಿದಂತೆ ಅನೇಕ ಭಾಷೆಯಲ್ಲಿ ರಿಲೀಸ್ ಆಗುತ್ತಿದೆ. ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಬಿಡುಗಡೆಯಾಗುತ್ತಿದೆ. ವಿಕ್ರಾಂತ್ ರೋಣ ಈಗಾಗಲೇ ಹಾಡು ಮತ್ತು ಟ್ರೈಲರ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಈ ಸಿನಿಮಾದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ರಾ..ರಾ..ರಕ್ಕಮ್ಮ ಹಾಡಿಗೆ ಹೆಜ್ಜೆ ಹಾಕಿರುವ ಜಾಕ್ವೆಲಿನ್ ಹಾಡು ಸಿಕ್ಕಾಪಟ್ಟೆ ವೈರಲ್ ಆಗಿದೆ. ಇನ್ನು ಉಳಿದಂತೆ ಸಿನಿಮಾದಲ್ಲಿ ನಿರೂಪ್ ಭಂಡಾರಿ, ನೀತಾ ಅಕೋಶ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಅನೂಪ್ ಭಂಡಾರಿ ಸಾರಥ್ಯದಲ್ಲಿ ಮೂಡಿಬಂದಿರುವ ಸಿನಿಮಾಗೆ ಜಾಕ್ ಮೆಂಜು ನಿರ್ಮಾಣ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist