ಭಾನುವಾರ, ಮಾರ್ಚ್ 16, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಫೆಬ್ರವರಿಯಲ್ಲಿ ರಾಜ್ಯ ಬಜೆಟ್‌: ಸಿಎಂ ಬಸವರಾಜ ಬೊಮ್ಮಾಯಿ

Twitter
Facebook
LinkedIn
WhatsApp
ಫೆಬ್ರವರಿಯಲ್ಲಿ ರಾಜ್ಯ ಬಜೆಟ್‌: ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ:  ಫೆಬ್ರವರಿ ತಿಂಗಳಲ್ಲಿ ರಾಜ್ಯ ಬಜೆಟ್‌ ಮಂಡಿಸಲಾಗುವುದು. ಈಗಾಗಲೇ ಹಣಕಾಸು ಇಲಾಖೆಯೊಂದಿಗೆ ಎರಡು ಸುತ್ತಿನ ಚರ್ಚೆ ನಡೆಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶಿಗ್ಗಾಂವಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಬೆಳಗಾವಿ ಅಧಿವೇಶನ ಮುಗಿದ ನಂತರ ಎಲ್ಲ ಇಲಾಖೆಗಳು, ಸಂಘ-ಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು. ಜನವರಿ ತಿಂಗಳಿನಿಂದ ಬಜೆಟ್‌ ಪೂರ್ವಭಾವಿ ಸಿದ್ಧತೆಗಳನ್ನು ಮಾಡಲಾಗುವುದು ಎಂದು ತಿಳಿಸಿದರು.

ಕೊರೋನಾ ನಿಯಂತ್ರಣ ಕ್ರಮಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಐಎಲ್‌ಐ ಮತ್ತು ಸಾರಿ ಪ್ರಕರಣಗಳ ಪರೀಕ್ಷೆ ಹೆಚ್ಚಿಸಲಾಗುವುದು. ಜತೆಗೆ ಬೂಸ್ಟರ್‌ ಡೋಸ್‌ ನೀಡುವಿಕೆಯನ್ನು ಹೆಚ್ಚಿಸಲಾಗುವುದು. ಆಸ್ಪತ್ರೆಗಳಲ್ಲಿ ಆಕ್ಸಿಜನ್‌, ಬೆಡ್‌ಗಳು ಸೇರಿದಂತೆ ಮೂಲಭೂತ ಸೌಕರ್ಯ, ತಂತ್ರಜ್ಞಾನ ಅಳವಡಿಸಲಾಗುವುದು. ಐಸಿಯು ಘಟಕಗಳನ್ನು ಸಿದ್ಧಪಡಿಸಿಕೊಳ್ಳುವುದು. ಮಾಸ್‌್ಕ ಧರಿಸಬೇಕು ಹಾಗೂ ಅಂತರ ಕಾಯ್ದುಕೊಳ್ಳಬೇಕು. ಏರ್‌ಪೋರ್ಟ್‌ಗಳಲ್ಲಿ ಹಾಗೂ ಬಸ್‌ ನಿಲ್ದಾಣಗಳಲ್ಲಿ ನಿಗಾ ಇಡಲು ಸೂಚನೆ ನೀಡಿದ್ದೇವೆ. ಮೊದಲು ಪಾಲಿಸುತ್ತಿದ್ದ ನಿಯಂತ್ರಣಾ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದರು.

ಸಾಹಿತ್ಯ ಸಮ್ಮೇಳನದಲ್ಲಿ ಮುಂಜಾಗ್ರತಾ ಕ್ರಮ: ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊರೋನಾತಂಕದ ಕುರಿತು ಪ್ರತಿಕ್ರಿಯೆ ನೀಡಿ, ಸಮ್ಮೇಳನ ಬಯಲು ಪ್ರದೇಶದಲ್ಲಿ ಆಗುವುದರಿಂದ ತೊಂದರೆಯ ಸಾಧ್ಯತೆ ಇಲ್ಲ. ಆದರೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಮಾರ್ಗಸೂಚಿಗಳನ್ನು ಸೂಚಿಸಲಾಗುವುದು ಎಂದರು.

ಬಿಬಿಎಂಪಿಯ 2023-24ನೇ ಸಾಲಿನ ಆಯವ್ಯಯ ಸಿದ್ಧತೆ ಕುರಿತು ಪೂರ್ವ ತಯಾರಿ ಪ್ರಕ್ರಿಯೆಗೆ ಹಣಕಾಸು ವಿಭಾಗದ ಚಾಲನೆ ನೀಡಿದ್ದು, ಡಿಸೆಂಬರ್‌ ಅಂತ್ಯಕ್ಕೆ ವಿಭಾಗವಾರು ಬೇಡಿಕೆ ಸಲ್ಲಿಸುವಂತೆ ಪತ್ರ ಬರೆಯಲು ತೀರ್ಮಾನಿಸಿದೆ. 2022-23ನೇ ಆರ್ಥಿಕ ವರ್ಷ ಮುಕ್ತಾಯವಾಗಲು ಇನ್ನು ಮೂರೂವರೆ ತಿಂಗಳು ಮಾತ್ರ ಬಾಕಿ ಉಳಿದಿದೆ. 2023ರ ಮಾಚ್‌ರ್‍ 31ರೊಳಗೆ 2023-24ನೇ ಸಾಲಿನ ಬಜೆಟ್‌ ಸಿದ್ಧಪಡಿಸಿ ಮಂಡಿಸಬೇಕಿದೆ. ಹೀಗಾಗಿ ಈಗಿನಿಂದಲೇ ಬಜೆಟ್‌ ಸಿದ್ಧತೆ ಪಡಿಸಲು ಬಿಬಿಎಂಪಿ ಪೂರ್ವ ತಯಾರಿ ಆರಂಭಿಸಿದೆ.

ಬಿಬಿಎಂಪಿಯಲ್ಲಿ ವಿವಿಧ ವಿಭಾಗಗಳಲ್ಲಿ 2023-24ನೇ ಸಾಲಿನಲ್ಲಿ ಕೈಗೊಳ್ಳಲಿರುವ ಯೋಜನೆಗಳು, ನಿರ್ವಹಣೆಗೆ ಮಾಡಬೇಕಾದ ವೆಚ್ಚಗಳ ಮಾಹಿತಿ ನೀಡುವಂತೆ ಸೂಚಿಸಿ ಪತ್ರ ಬರೆಯುವುದಕ್ಕೆ ಬಿಬಿಎಂಪಿ ಹಣಕಾಸು ವಿಭಾಗ ಮುಂದಾಗಿದೆ. ಹಣಕಾಸು ವಿಭಾಗದ ಅಧಿಕಾರಿಗಳು ಈಗಾಗಲೆ ಅನೌಪಚಾರಿಕವಾಗಿ ಮಾತುಕತೆ ನಡೆಸಿದ್ದಾರೆ. ಇನ್ನೊಂದು ವಾರದಲ್ಲಿ ಬಜೆಟ್‌ ಸಿದ್ಧತೆಯ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಈ ವೇಳೆ ಬಜೆಟ್‌ ಗಾತ್ರ ಕುರಿತು ಚರ್ಚೆಗಳು ನಡೆಯುವ ಸಾಧ್ಯತೆಗಳಿವೆ. ಜನವರಿ ಅಂತ್ಯದೊಳಗೆ ಎಲ್ಲ ವಿಭಾಗಗಳಿಂದ 2023-24ನೇ ಸಾಲಿನಲ್ಲಿ ಬೇಕಾಗುವ ಅನುದಾನ ಮತ್ತು ಯೋಜನೆಗಳ ಕುರಿತು ಮಾಹಿತಿ ಸಂಗ್ರಹಿಸಲಿದೆ. ಅದರ ಜತೆಗೆ ಹಂತಹಂತವಾಗಿ ವಿಭಾಗವಾರು ಸಭೆಯನ್ನೂ ನಡೆಸಲಿದ್ದಾರೆ.

2022-23ನೇ ಸಾಲಿನ ಬಜೆಟ್‌ನಲ್ಲಿ ವಿಭಾಗಕ್ಕೆ ನೀಡಲಾದ ಅನುದಾನ, ಅದರಲ್ಲಿ ಮಾಡಲಾದ ಖರ್ಚಿನ ವಿವರವನ್ನೂ ಪಡೆಯಲಾಗುತ್ತದೆ. ಅದಕ್ಕಾಗಿ ಅನ್‌ಲೈನ್‌ ವ್ಯವಸ್ಥೆ ಮಾಡಲಾಗುತ್ತಿದ್ದು, ವಿಭಾಗವಾರು ಅಧಿಕಾರಿಗಳು ಆನ್‌ಲೈನ್‌ ಮೂಲಕವೇ ಮಾಹಿತಿಯನ್ನು ಹಣಕಾಸು ವಿಭಾಗಕ್ಕೆ ನೀಡಬೇಕಿದೆ. ಆ ಮಾಹಿತಿ ಪ್ರಕಾರ ಅನುದಾನ ಉಳಿದಿದ್ದರೆ, ಅದನ್ನು 2023-24ನೇ ಸಾಲಿಗೆ ಬಳಕೆ ಮಾಡುವ ಕುರಿತಂತೆ ಹೊಸ ಬಜೆಟ್‌ನಲ್ಲಿ ಸೇರಿಸಲಾಗುತ್ತದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist