ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಫ್ರಾನ್ಸ್​ನಲ್ಲೂ ಭುಗಿಲೆದ್ದ ಹಿಜಾಬ್ ಚರ್ಚೆ; ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರ ಸ್ಕಾರ್ಫ್ ಬ್ಯಾನ್ ಮಾಡುವುದಾಗಿ ಅಧ್ಯಕ್ಷೀಯ ಅಭ್ಯರ್ಥಿ ಘೋಷಣೆ!

Twitter
Facebook
LinkedIn
WhatsApp
ಫ್ರಾನ್ಸ್​ನಲ್ಲೂ ಭುಗಿಲೆದ್ದ ಹಿಜಾಬ್ ಚರ್ಚೆ; ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರ ಸ್ಕಾರ್ಫ್ ಬ್ಯಾನ್ ಮಾಡುವುದಾಗಿ ಅಧ್ಯಕ್ಷೀಯ ಅಭ್ಯರ್ಥಿ ಘೋಷಣೆ!

ಫ್ರಾನ್ಸ್​ನ ಬಲಪಂಥೀಯ ಅಧ್ಯಕ್ಷೀಯ ಅಭ್ಯರ್ಥಿ ಮರೀನ್ ಲೆ ಪೆನ್ ಅವರು ಸಾರ್ವಜನಿಕವಾಗಿ ಹಿಜಾಬ್ ಧರಿಸುವ ಮುಸ್ಲಿಮರಿಗೆ ದಂಡ ವಿಧಿಸುವುದಾಗಿ ಇಂದು ಪ್ರತಿಜ್ಞೆ ಮಾಡಿದ್ದಾರೆ.

ಕರ್ನಾಟಕದಲ್ಲಿ ಇತ್ತೀಚೆಗೆ ಹಿಜಾಬ್ (Hijab Row) ಗಲಾಟೆ ಭುಗಿಲೆದ್ದು, ದೇಶಾದ್ಯಂತ ಸುದ್ದಿಯಾಗಿತ್ತು. ಕರ್ನಾಟಕದಲ್ಲಿ ಶಾಲೆ ಯೂನಿಫಾರ್ಮ್​ ಹಾಕಿಕೊಳ್ಳಬೇಕು ಮತ್ತು ಶಾಲೆ ಒಳಗೆ ಹಿಜಾಬ್ ಹಾಕುವಂತಿಲ್ಲ ಎಂದು ಕೋರ್ಟ್​ ತೀರ್ಪು ನೀಡಿತ್ತು. ಇದೀಗ ಫ್ರಾನ್ಸ್​ನಲ್ಲಿ (France) ಕೂಡ ಹಿಜಾಬ್​ ಚರ್ಚೆಗಳು ಶುರುವಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಬ್ಯಾನ್​ ಮಾಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಫ್ರಾನ್ಸ್​ನ ಬಲಪಂಥೀಯ ಅಧ್ಯಕ್ಷೀಯ ಅಭ್ಯರ್ಥಿ ಮರೀನ್ ಲೆ ಪೆನ್ ಅವರು ಸಾರ್ವಜನಿಕವಾಗಿ ಹಿಜಾಬ್ ಧರಿಸುವ ಮುಸ್ಲಿಮರಿಗೆ ದಂಡ ವಿಧಿಸುವುದಾಗಿ ಇಂದು ಪ್ರತಿಜ್ಞೆ ಮಾಡಿದ್ದಾರೆ. ಮೊದಲ ಹಂತದ ಚುನಾವಣೆ ಬೆನ್ನಲ್ಲೇ ಅಭ್ಯರ್ಥಿಗಳು ಕೊನೆಯ ಹಂತದ ಪ್ರಚಾರ ನಡೆಸಿದ್ದಾರೆ.
ಫ್ರಾನ್ಸ್​ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರು ಈ ಬಾರಿಯೂ ಗೆಲ್ಲುವ ಸಾಧ್ಯತೆಯಿದ್ದರೂ ಅಂತಿಮ ಹಂತದಲ್ಲಿ ಲೆ ಪೆನ್ ಭಾರೀ ಪೈಪೋಟಿ ನೀಡುವ ಸಾಧ್ಯತೆಯಿದೆ. ಫ್ರಾನ್ಸ್‌ನ ಸಾಂಪ್ರದಾಯಿಕ ಬಲ- ಮತ್ತು ಎಡ-ಪಂಥೀಯ ಪಕ್ಷಗಳು ಚುನಾವಣಾ ಸಮರವನ್ನು ಎದುರಿಸುತ್ತಿರುವಾಗ, ತೀವ್ರ-ಎಡಪಂಥೀಯ ಅಭ್ಯರ್ಥಿ ಜೀನ್-ಲುಕ್ ಮೆಲೆನ್‌ಚೋನ್ ಮೂರನೇ ಸ್ಥಾನಕ್ಕೆ ತೃಪ್ತಿಪಡಬೇಕಾದ ಸಾಧ್ಯತೆಯಿದೆ.

ಇಂದು ಆರ್‌ಟಿಎಲ್ ರೇಡಿಯೊದೊಂದಿಗೆ ಮಾತನಾಡಿದ ಲೆ ಪೆನ್, ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಶಿರಸ್ತ್ರಾಣವನ್ನು (ಹಿಜಾಬ್) ನಿಷೇಧಿಸುವ ನನ್ನ ಪ್ರತಿಜ್ಞೆಯನ್ನು ಕಾರ್ಯಗತಗೊಳಿಸಲಾಗುವುದು. ಕಾರ್‌ಗಳಲ್ಲಿ ಸೀಟ್‌ಬೆಲ್ಟ್ ಧರಿಸುವ ರೀತಿಯಲ್ಲಿಯೇ ರಸ್ತೆಗಳಲ್ಲಿ ಹಿಜಾಬ್ ಧರಿಸುವ ವಿಚಾರದಲ್ಲಿಯೂ ಪೊಲೀಸರು ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಮಾಡಲಾಗುವುದು. ಪೊಲೀಸರ ಮೂಲಕವೇ ಈ ಆದೇಶವನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.
“ನಿಮ್ಮ ಸೀಟ್ ಬೆಲ್ಟ್ ಧರಿಸದಿರುವುದು ಕಾನೂನುಬಾಹಿರವಾದ್ದರಿಂದ ಜನರಿಗೆ ದಂಡವನ್ನು ವಿಧಿಸಲಾಗುತ್ತದೆ. ಈ ಕ್ರಮವನ್ನು ಜಾರಿಗೊಳಿಸಲು ಪೊಲೀಸರು ತುಂಬಾ ಸಮರ್ಥರಾಗಿದ್ದಾರೆಂದು ನನಗೆ ಅನಿಸುತ್ತಿದೆ. ಅದೇ ರೀತಿಯಲ್ಲಿ ಮುಸ್ಲಿಮರು ಶಿರಸ್ತ್ರಾಣ ಧರಿಸದಂತೆಯೂ ಪೊಲೀಸರೇ ಎಚ್ಚರ ವಹಿಸುತ್ತಾರೆ” ಎಂದು ಅವರು ಹೇಳಿದ್ದಾರೆ.
ಎರಡನೇ ಸುತ್ತಿನ ಚುನಾವಣೆಯನ್ನು ಏಪ್ರಿಲ್ 24 ರಂದು ನಿಗದಿಪಡಿಸಲಾಗಿದೆ. ಸರಾಸರಿ ಸಮೀಕ್ಷೆಗಳ ಪ್ರಕಾರ ಮ್ಯಾಕ್ರನ್ ಶೇ. 54 ಮತ್ತು ಲೆ ಪೆನ್‌ ಶೇ. 46ರಷ್ಟು ಮುನ್ನಡೆ ಸಾಧಿಸಿದ್ದಾರೆ. ಲೆ ಪೆನ್ ತನ್ನ ಕೊನೆಯ ಪ್ರಚಾರ ರ್ಯಾಲಿಯನ್ನು  ದಕ್ಷಿಣದ ಭದ್ರಕೋಟೆಯಾದ ಪರ್ಪಿಗ್ನಾನ್‌ನಲ್ಲಿ ನಡೆಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist