ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ: ಗ್ರಾಹಕರ ಸೋಗಿನಲ್ಲಿ ಬಂದು ಮಾಲಕಿಯ ಚಿನ್ನ ಸರ ಕಸಿದು ಪರಾರಿ

Twitter
Facebook
LinkedIn
WhatsApp
a

ಬಂಟ್ವಾಳ, ಮೇ 18 : ಹೊಟೇಲ್‌ ಮಾಲಕಿಯ 15 ಗ್ರಾಂ ತೂಕದ ಕರಿಮಣಿ ಸರವನ್ನು ಗ್ರಾಹಕರ ಸೋಗಿನಲ್ಲಿ ಬೈಕಿನಲ್ಲಿ ಆಗಮಿಸಿದ ಇಬ್ಬರು ಕಳ್ಳರು ದೋಚಿ ಪರಾರಿಯಾದ ಘಟನೆ ಮೇ 16ರಂದು ನಡೆದಿದೆ.

ಕಳ್ಳಿಗೆ ಗ್ರಾಮದ ಪಚ್ಚಿನಡ್ಕ ನಿವಾಸಿ ಆಶಾ ಅವರು ತಮ್ಮ ಪತಿಯ ಜತೆ ಸೇರಿ ಪಚ್ಚಿನಡ್ಕದಲ್ಲಿ ಹೊಟೇಲ್‌ ನಡೆಸುತ್ತಿದ್ದು, ಮೇ 16ರಂದು ಮುಂಜಾನೆ 5.20ರ ಸುಮಾರಿಗೆ ತಿಂಡಿ ತಯಾರಿಸುತ್ತಿದ್ದ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬೈಕಿನಲ್ಲಿ ಆಗಮಿಸಿದ್ದರು. ಅವರಲ್ಲಿ ಸಹಸವಾರ ಹೆಲ್ಮೆಟ್‌ ಧರಿಸಿ ಹೊಟೇಲಿಗೆ ಬಂದು ಆಶಾ ಅವರಲ್ಲಿ ಸಿಗರೇಟ್‌ ಕೇಳಿ ಪಡೆದು ಅದನ್ನು ಹೊರಗೆ ನಿಂತಿದ್ದ ಬೈಕ್‌ ಸವಾರನಿಗೆ ನೀಡಿದ್ದ.

ಬಳಿಕ ಮತ್ತೆ ಆಗಮಿಸಿ ಚುಯಿಂಗ್‌ ಗಮ್‌ ಹಾಗೂ ಸೋಡಾ ಕುಡಿಯಲು ಕೇಳಿ ಖಾಲಿ ಬಾಟಲಿಯನ್ನು ಟೇಬಲ್‌ನಲ್ಲಿ ಇರಿಸಿ, ಪಕ್ಕದಲ್ಲೇ ನಿಂತಿದ್ದ ಆಶಾ ಅವರ ಕುತ್ತಿಗೆಗೆ ಕೈಹಾಕಿ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಬಲಾತ್ಕಾರವಾಗಿ ಎಳೆದುಕೊಂಡು ಬೈಕಿನಲ್ಲಿ ಕುಳಿತು ಪರಾರಿಯಾಗಿದ್ದಾನೆ.

ಸುಮಾರು 15 ಗ್ರಾಂ ತೂಕದ ಕರಿಮಣಿ ಸರದ ಮೌಲ್ಯ 75 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ