ಬಂಟ್ವಾಳ : ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ಕಾರ್ಯಕರ್ತ ಹೃದಯಾಘಾತದಿಂದ ಸಾವು!
Twitter
Facebook
LinkedIn
WhatsApp

ಮನೆ, ಮನೆ ಚುನಾವಣಾ ಪ್ರಚಾರಕ್ಕೆಂದು ತೆರಳಿದ್ದ ಬಿಜೆಪಿ ಕಾರ್ಯಕರ್ತರೋರ್ವರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮೇ.5ರ ಶುಕ್ರವಾರ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಲಾಯಿ ಎಂಬಲ್ಲಿ ಸಂಭವಿಸಿದೆ.
ವೃತ್ತಿಯಲ್ಲಿ ಛಾಯಾಗ್ರಾಹಕರಾಗಿರುವ ಇಲ್ಲಿನ ನಿವಾಸಿ ಪ್ರವೀಣ್ ನಾಯಕ್( 45) ಮೃತಪಟ್ಟವರಾಗಿದ್ದಾರೆ.
ಪ್ರವೀಣ್ ಮತ್ತು ತಂಡ ಅವರ ನಿವಾಸದ ಪರಿಸರದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪರ ಮನೆ ಮನೆಗೆ ತೆರಳಿ ಮತಯಾಚನೆ ನಡೆಸುತ್ತಿದ್ದಾಗ ಮಧ್ಯಾಹ್ನ ಸುಮಾರು 1.30 ಗಂಟೆಯ ಹೊತ್ತಿಗೆ ಎದೆನೋವೆಂದು ಕುಸಿದು ಬಿದ್ದಿದ್ದರು. ತತ್ ಕ್ಷಣ ಅವರನ್ನು ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರಕ್ಕೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು.
ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಮುಲ್ಕಾಜೆ ಮಾಡದಲ್ಲಿ ಪ್ರವೀಣ್ ಡಿಜಿಟಲ್ ಸ್ಟುಡಿಯೋ ನಡೆಸುತ್ತಿದ್ದ ಅವರು ಸೌಮ್ಯ ವ್ಯಕ್ತಿತ್ವದಿಂದ ಜನಾನುರಾಗಿಯಾಗಿದ್ದರು.