ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ; ಓರ್ವ ಮೃತ್ಯು ಮೂವರಿಗೆ ಗಾಯ!

Twitter
Facebook
LinkedIn
WhatsApp
inbound1169227970565363796

ಬಂಟ್ವಾಳ:ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎ.7 ರಂದು ಶುಕ್ರವಾರ 11.30 ಗಂಟೆ ವೇಳೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಿಸಿರೋಡಿನಲ್ಲಿ ನಡೆದಿದೆ.

ನಂದರಬೆಟ್ಟು ನಿವಾಸಿ ಸದಾಶಿವ ಆಚಾರ್ಯ (77) ಮೃತಪಟ್ಟ ವ್ಯಕ್ತಿ.ಜೊತೆಗೆ ಸದಾಶಿವ ಅವರ ಮೊಮ್ಮಗ ಚಾಲಕ ಅಕಾಶ್, ಅಳಿಯ ಸುರೇಶ್ ಆಚಾರ್ಯ, ಮಗ ಗಣೇಶ್ ಆಚಾರ್ಯ ಅವರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

ಎರಿಟಿಗ ಕಾರಿನಲ್ಲಿ ಪುತ್ತೂರಿನಿಂದ ದೇವರ ಕಾರ್ಯದಲ್ಲಿ ಭಾಗಿಯಾಗಿ ವಾಪಾಸು ಮನೆಗೆ ಬರುವ ವೇಳೆ ಬಿಸಿರೋಡಿನ ಅಜ್ಜಿಬೆಟ್ಟು ಕ್ರಾಸ್ ಸಮೀಪದಲ್ಲಿ ಈ ಅವಘಡ ಸಂಭವಿಸಿದೆ. ಚಾಲಕನ ಅಜಾಗರೂಕತೆಯಿಂದ ಡಿವೈಡರ್ ಗೆ ಗುದ್ದಿದ ಕಾರು ಅ ಬಳಿಕ ಪಲ್ಟಿಯಾಗಿದೆ.ಕಾರಿನಲ್ಲಿ ಚಾಲಕ ಸೇರಿ ನಾಲ್ಕು ಜನ ಒಂದೇ ಮನೆಯವರು ಪ್ರಯಾಣಿಸುತ್ತಿದ್ದರು. ಪುತ್ತೂರು ಸಂಬಂಧಿಕರ ಮನೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಮನೆಗೆ ಇನ್ನೇನು ಕೇವಲ 5 ನಿಮಿಷಗಳ ಕಾಲದಲ್ಲಿ ಮುಟ್ಟುವ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಗಂಭೀರವಾಗಿ ತಲೆಗೆ ಗಾಯವಾಗಿದ್ದ ಸದಾಶಿವ ಅವರನ್ನು ಕೈಕಂಬ ಪರ್ಲಿಯಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಮೃತಪಟ್ಟ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ತಲೆಗೆ ಗಾಯವಾಗಿದ್ದ ಸದಾಶಿವ ಅವರನ್ನು ಕೈಕಂಬ ಪರ್ಲಿಯಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಮೃತಪಟ್ಟ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ