ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಡಾಯ ಶಾಸಕರು ಬಯಸಿದರೆ ರಾಜೀನಾಮೆ ನೀಡಲು ಸಿದ್ಧ, ರಾಜೀನಾಮೆ ಪತ್ರ ರೆಡಿ ಇದೆ: ಉದ್ಧವ್‌ ಠಾಕ್ರೆ

Twitter
Facebook
LinkedIn
WhatsApp
ಬಂಡಾಯ ಶಾಸಕರು ಬಯಸಿದರೆ ರಾಜೀನಾಮೆ ನೀಡಲು ಸಿದ್ಧ, ರಾಜೀನಾಮೆ ಪತ್ರ ರೆಡಿ ಇದೆ: ಉದ್ಧವ್‌ ಠಾಕ್ರೆ

ಮುಂಬೈ(ಜೂ.22): ನನ್ನ ರಾಜೀನಾಮೆ ಪತ್ರ ಸಿದ್ಧವಿದೆ. ಶಾಸಕರು ಬಯಸಿದರೆ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ಯಾವುದೇ ಕ್ಷಣದಲ್ಲೂ ರಾಜೀನಾಮೆ ನೀಡಲು ಸಿದ್ಧ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಈ ಮೂಲಕ ಉದ್ಧವ್ ರಾಜೀನಾಮೆ ಸುಳಿವು ನೀಡಿದ್ದಾರೆ. ಸದ್ಯ ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ಕುರಿತು ಫೇಸ್‌ಬುಕ್‌ ಲೈವ್‌ ಮೂಲಕ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಘೋಷಣೆಯನ್ನು ಮಾಡಿದ್ದಾರೆ.

ನಾನು ಸಿಎಂ ಹುದ್ದೆ ತ್ಯಜಿಸಲು ಸಿದ್ಧನಿದ್ದೇನೆ. ಮತ್ತೊಬ್ಬ ಶಿವಸೇನೆ ನಾಯಕ ಸಿಎಂ ಆದರೆ ನನಗೆ ಸಂತೋಷ. ನಾನು ಏನು ತಪ್ಪು ಮಾಡಿದ್ದೇನೆ. ಬಂಡಾಯ ಶಾಸಕರು, ಟ್ವಿಟರ್, ಫೇಸ್‌ಬುಕ್ ಹಾಗೂ ಇತರ ಮಾಧ್ಯಮಗಳ ಮೂಲಕ ಹೇಳಿದರೆ ಸಾಧ್ಯವಿಲ್ಲ. ನೇರವಾಗಿ ನನ್ನ ಬಳಿ ಬಂದು ಮಾತನಾಡಲಿ. ಮಾತುಕತೆಗೆ ಬನ್ನಿ ಎಂದು ಬಂಡಾಯ ಶಾಸಕರಿಗೆ ಉದ್ಧವ್ ಆಹ್ವಾನ ನೀಡಿದ್ದಾರೆ. 

ಬಾಳಾಸಾಹೇಬ್‌ ಠಾಕ್ರೆ ಅವರ ಹಿಂದುತ್ವದಲ್ಲಿ ನಾನು ಇಲ್ಲ ಎಂದು ಹೇಳುತ್ತಿದ್ದಾರೆ. ಆದರೆ ನಾನು ಅವರದೇ ಹಿಂದುತ್ವದ ಸಿದ್ಧಾಂತದಲ್ಲಿ ಇದ್ದೇನೆ. ಅದೇ ನಮ್ಮ ಅಸ್ತಿತ್ವ. ಶಿವಸೇನೆ ಯಾವತ್ತೂ ಹಿಂದುತ್ವವನ್ನು ಬಿಟ್ಟಿಲ್ಲ. ಹಿಂದುತ್ವ ನಮ್ಮ ಸಿದ್ಧಾಂತ ಹಾಗೂ ಗುರುತು. ನಾನು ಹಿಂದುತ್ವದಕ್ಕೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ. ಆ ಮೂಲಕ ತಾನು ಈಗಲೂ ಹಿಂದುತ್ವದ ಪರವಾಗಿದ್ದೇನೆ ಎನ್ನುವ ಸಂದೇಶ ನೀಡಿದ್ದಾರೆ.

ನನ್ನ ಜನರೇ ನನ್ನ ವಿರುದ್ಧ ನಿಂತರು. ಇದು ನನಗೆ ಬೇಸರ ತರಿಸಿದೆ. ನಾನು ಮುಖ್ಯಮಂತ್ರಿಯಾಗಿ ಮುಂದುವರಿಯುವುದು ಬೇಡ ಎಂದು ಯಾರೇ ಒಬ್ಬ ಶಾಸಕ ಹೇಳಿದರೂ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ನಾನು ಕುರ್ಚಿಗಾಗಿ ಬಡಿದುಕೊಳ್ಳುವ ವ್ಯಕ್ತಿ ಅಲ್ಲ. ಮುಖ್ಯಮಂತ್ರಿ ಪದವಿ ರಾಜೀನಾಮೆ ನೀಡಲು ನಾನು ಈಗಲೂ ಸಿದ್ಧನಿದ್ದೇನೆ. ಈ ಬಗ್ಗೆ ರಾಜ್ಯಪಾಲರಿಗೂ ಮಾಹಿತಿ ನೀಡಿದ್ದೇನೆ. ನಾನು ನನ್ನ ರಾಜೀನಾಮೆ ಪತ್ರವನ್ನು ತಯಾರು ಮಾಡಿಟ್ಟುಕೊಂಡಿದ್ದೇನೆ. ನೀವು ಹೇಳಿದ ತಕ್ಷಣವೇ ರಾಜೀನಾಮೆ ನೀಡುತ್ತೇನೆ ಎಂದು ಬಂಡಾಯ ಶಾಸರಿಗೆ ಹೇಳಿದ್ದಾರೆ.

ನಾವು 25 ವರ್ಷಗಳಿಂದ ಕಾಂಗ್ರೆಸ್ ಹಾಗೂ ಎಸ್‌ಸಿಪಿಯನ್ನು ವಿರೋಧಿಸಿಕೊಂಡು ಬರುತ್ತಿದ್ದೇವೆ. ಆದರೆ ಕಳೆದ ಚುನಾವಣೆ ಬಳಿಕ ಸೋನಿಯಾ ಗಾಂಧಿ ಹಾಗೂ ಶರದ್ ಪವಾರ್ ನನ್ನ ಮೇಲೆ ನಂಬಿಕೆ ಇಟ್ಟು ಮಹತ್ತರ ಜವಾಬ್ದಾರಿ ನೀಡಿದ್ದಾರೆ. ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಿದ್ದೇನೆ ಎಂದು ಉದ್ಧವ್ ಹೇಳಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಸಂಖ್ಯೆಗಳೇ ಮಖ್ಯ. ಆದರೆ ಆ ಸಂಖ್ಯೆಗಳು ಹೇಗೆ ಬಂತು ಎನ್ನುವುದೂ ಕೂಡ ಮುಖ್ಯವಾಗುತ್ತದೆ. ನಾನು ರಾಜೀನಾಮೆ ನೀಡಲು ಸಿದ್ಧ. ಆದರೆ ಅದಕ್ಕೂ ಮುನ್ನ ಕಾರಣ ತಿಳಿಯಬಯಸುತ್ತೇನೆ ಎಂದು ಅವರು ಪುನಚ್ಛರಿಸಿದರು. ಈ ನಡುವೆ ಬಂಡಾಯ ಸಾರಿರುವ ಏಕನಾಥ ಶಿಂಧೆ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದು, ನನಗೆ 34 ಶಾಸಕರ ಬೆಂಬಲ ಇದೆ ಎಂದು ಹೇಳಿಕೊಂಡಿದ್ದಾರೆ. 34 ಶಾಸಕರ ಸಹಿ ಇರುವ ಪತ್ರವನ್ನು ಅವರು ರಾಜ್ಯಪಾಲರಿಗೆ ಗುವಾಹಟಿಯಿಂದಲೇ ರವಾನೆ ಮಾಡಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ