ಬಂಟ್ವಾಳ: ರಸ್ತೆ ಮಧ್ಯೆಯೇ ಹೊತ್ತಿ ಉರಿದ ಕಾರು; ನಾಲ್ವರು ಪಾರು.!

ಬಂಟ್ವಾಳ: ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಇಂದು ಸೋಮವಾರ ದಕ್ಷಿಣ ಕನ್ನಡದ ಬಂಟ್ವಾಳ-ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ನಡೆದಿದೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಮಾಹಿತಿ ಪಡೆದ ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದರು. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಇಳಿದು ಪಾರಾಗಿದ್ದಾರೆ, ಯಾರಿಗೂ ಗಾಯಗಳಾಗಿಲ್ಲ. ಆದರೆ ಕಾರು ಸಂಪೂರ್ಣ ಹೊತ್ತಿ ಉರಿದಿದೆ.
ಘಟನೆಯಿಂದ ಸುಮಾರು ಒಂದು ತಾಸುಗಳ ಕಾಲ ಬಂಟ್ವಾಳ- ಮೂಡುಬಿದಿರೆ ರಸ್ತೆ ಬ್ಲಾಕ್ ಆಗಿತ್ತು ಎನ್ನಲಾಗಿದೆ. ಏಳಿಂಜೆಯ ಕೊಲ್ಲೆಟ್ಟು ನಿವಾಸಿ ಶರತ್ ಶೆಟ್ಟಿ ಅವರಿಗೆ ಸೇರಿದ ಕಾರು ಅದಾಗಿದ್ದು, ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ವೇಳೆ ಕಾರು ಬ್ರೇಕ್ ಹಾಕಿದರೂ ನಿಲ್ಲದೇ ಇದ್ದು, ಬಳಿಕ ಚಾಲಕನ ಸಮಯ ಪ್ರಜ್ಞೆಯಿಂದ ಕಾರು ನಿಂತಿದೆ.
ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದು, ಯಾರಿಗೂ ಯಾವುದೇ ಹಾನಿಯಾಗಿಲ್ಲ ಎಂದು ತೀಲಿದು ಬಂದಿದೆ.
ಹೋಟೆಲ್ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ
ಉಡುಪಿ: ಹೋಟೆಲೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬ, ತಾನಿರುವ ವಿಶ್ರಾಂತಿ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ರಾತ್ರಿ ಉಡುಪಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಕಾರ್ಮಿಕನನ್ನು ಹೇರೂರಿನ ಸಂತೋಷ ರಘುರಾಮ ಶೆಟ್ಟಿ ಎಂದು ಗುರುತಿಸಲಾಗಿದೆ.
ಇನ್ನು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ನಗರ ಪೋಲಿಸ್ ಠಾಣಾಧಿಕಾರಿ ಪುನೀತ್ ಕುಮಾರ್, ತನಿಖಾ ಸಹಾಯಕ ಮರಿ ಗೌಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಮೃತದೇಹವನ್ನು ಅಜ್ಜರಕಾಡಿನ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ರವಾನಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡುವರು ಸಹಕರಿಸಿದರು.