ಶನಿವಾರ, ಮೇ 4, 2024
ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Eng vs Ind ಬಮಿಂಗ್‌ಹ್ಯಾಮ್‌ನಲ್ಲಿ ಭಾರತದ್ದೇ ಮೇಲುಗೈ

Twitter
Facebook
LinkedIn
WhatsApp
Eng vs Ind ಬಮಿಂಗ್‌ಹ್ಯಾಮ್‌ನಲ್ಲಿ ಭಾರತದ್ದೇ ಮೇಲುಗೈ

ಬರ್ಮಿಂಗ್‌ಹ್ಯಾಮ್‌ (ಜು.4): ಜಾನಿ ಬೇರ್‌ಸ್ಟೋವ್‌ (Jonny Bairstow) ಸ್ಫೋಟಕ ಶತಕದ ಹೊರತಾಗಿಯೂ ಆತಿಥೇಯ ಇಂಗ್ಲೆಂಡ್‌ (England) ವಿರುದ್ಧದ 5ನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ಮೇಲುಗೈ ಸಾಧಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 416 ರನ್‌ ಕಲೆ ಹಾಕಿದ್ದ ಭಾರತ (India), ಇಂಗ್ಲೆಂಡನ್ನು 284ಕ್ಕೆ ನಿಯಂತ್ರಿಸಿದ್ದು, 132 ರನ್‌ಗಳ ದೊಡ್ಡ ಮುನ್ನಡೆ ಪಡೆಯಿತು.
ತುಂಬು ಉತ್ಸಾಹದೊಂದಿಗೆ 2ನೇ ಇನ್ನಿಂಗ್ಸ್‌ ಆರಂಭಿಸಿರುವ ಟೀಂ ಇಂಡಿಯಾ 31 ಓವರಲ್ಲಿ 3 ವಿಕೆಟ್‌ಗೆ 84 ರನ್‌ ಗಳಿಸಿ 216 ರನ್‌ ಮುನ್ನಡೆ ಪಡೆಯಿತು. ಐತಿಹಾಸಿಕ ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿರುವ ಭಾರತ ಆತಿಥೇಯರಿಗೆ ದೊಡ್ಡ ಗುರಿ ನೀಡಿ ಪಂದ್ಯ ಗೆಲ್ಲುವ ಕಾತರದಲ್ಲಿದೆ. ಇನ್ನೂ ಎರಡು ದಿನಗಳ ಆಟ ಬಾಕಿ ಇರುವುದರಿಂದ ಫಲಿತಾಂಶ ಬರುವುದು ಬಹುತೇಕ ಖಚಿತವಾಗಿದೆ.
ಆರಂಭಿಕ ಬ್ಯಾಟರ್‌ ಶುಭ್‌ಮನ್‌ ಗಿಲ್‌(04)ರನ್ನು ಸತತ 2ನೇ ಇನ್ನಿಂಗ್ಸ್‌ನಲ್ಲೂ ಬಲಿ ಪಡೆದ ಆ್ಯಂಡರ್‌ಸನ್‌ ಭಾರತಕ್ಕೆ ಆರಂಭಿಕ ಆಘಾತ ನೀಡಿದರು. ತಂಡದ ಮೊತ್ತ 43 ರನ್‌ ಆಗುವಷ್ಟರಲ್ಲಿ 11 ರನ್‌ ಗಳಿಸಿದ್ದ ಹನುಮ ವಿಹಾರಿ, ಬ್ರಾಡ್‌ಗೆ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ಗೆ ಮರಳಿದರು. 3ನೇ ವಿಕೆಟ್‌ಗೆ ಜೊತೆಯಾಗಿರುವ ಚೇತೇಶ್ವರ ಪೂಜಾರ ಹಾಗೂ ವಿರಾಟ್‌ ಕೊಹ್ಲಿ ಭಾರತಕ್ಕೆ ದೊಡ್ಡ ಮುನ್ನಡೆ ಒದಗಿಸುವ ಭರವಸೆ ಒದಗಿಸಿದರು. ಆದರೆ ಕೊಹ್ಲಿ 20 ರನ್‌ ಗಳಿಸಿ ಸ್ಟೋಕ್ಸ್‌ಗೆ ವಿಕೆಟ್‌ ನೀಡಿ ಹೊರನಡೆದರು.

ಬೇರ್‌ಸ್ಟೋವ್‌ ಶತಕ: ಮೊದಲ ದಿನ 12 ರನ್‌ ಗಳಿಸಿದ್ದ ಬೇರ್‌ಸ್ಟೋವ್‌ 2ನೇ ದಿನ ಆರಂಭದಲ್ಲಿ ರಕ್ಷಣಾತ್ಮಕ ಆಟಕ್ಕೆ ಒತ್ತು ಕೊಟ್ಟರು. ಬೆನ್‌ ಸ್ಟೋಕ್ಸ್‌(25) ವಿಕೆಟ್‌ ಕಳೆದುಕೊಂಡ ಬಳಿಕ ಅಬ್ಬರಿಸಿದ ಅವರು ಭಾರತೀಯ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. 119 ಎಸೆತಗಳಲ್ಲಿ ಟೆಸ್ಟ್‌ನ ತಮ್ಮ 11ನೇ ಶತಕ ಪೂರ್ತಿಗೊಳಿಸಿದ ಅವರು 106 ರನ್‌ ಗಳಿಸಿ ನಿರ್ಗಮಿಸಿದರು. ಅವರ ಇನ್ನಿಂಗ್‌್ಸನಲ್ಲಿ 14 ಬೌಂಡರಿ, 2 ಸಿಕ್ಸರ್‌ ಒಳಗೊಂಡಿತ್ತು. ಆರಂಭಿಕ ಕುಸಿತ ಕಂಡಿದ್ದ ಭಾರತಕ್ಕೆ ಪಂತ್‌-ಜಡೇಜಾ ಜೊತೆಯಾಟದ ಮೂಲಕ ನೆರವಾಗಿದ್ದರೂ ಇಂಗ್ಲೆಂಡ್‌ ತಂಡದಿಂದ ಈ ರೀತಿ ಆಟ ಕಂಡುಬರಲಿಲ್ಲ. ಬೇರ್‌ಸ್ಟೋವ್‌ಗೆ ಸ್ಯಾಮ್‌ ಬಿಲ್ಲಿಂಗ್‌್ಸ(36) ಹೊರತುಪಡಿಸಿ ಉಳಿದವರಿಂದ ಸೂಕ್ತ ಬೆಂಬಲ ದೊರೆಯಲಿಲ್ಲ. ಇವರಿಬ್ಬರ ನಿರ್ಗಮನದ ಬಳಿಕ ತಂಡ ಬೇಗನೇ ಆಲೌಟ್‌ ಆಯಿತು.
ತಂಡದ ಎಲ್ಲಾ ವಿಕೆಟ್‌ಗಳು ವೇಗಿಗಳ ಪಾಲಾಯಿತು. ಮೊಹಮದ್‌ ಸಿರಾಜ್‌ 4, ಜಸ್‌ಪ್ರೀತ್‌ ಬೂಮ್ರಾ 3, ಶಮಿ 2 ಹಾಗೂ ಶಾರ್ದೂಲ್‌ ಠಾಕೂರ್‌ 1 ವಿಕೆಟ್‌ ಪಡೆದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ