ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬರಹಗಾರ್ತಿ ವೈದೇಹಿಗೆ 2022ನೇ ಸಾಲಿನ ನೃಪತುಂಗ ಸಾಹಿತ್ಯ ಪ್ರಶಸ್ತಿ

Twitter
Facebook
LinkedIn
WhatsApp
ms 230223 policecom 2

ಬೆಂಗಳೂರು(ಫೆ.24): ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಹಯೋಗದಲ್ಲಿ  ನೀಡಲಾಗುತ್ತಿರುವ 2022ನೇ ಸಾಲಿನ ಪ್ರತಿಷ್ಠಿತ ʻಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೃಪತುಂಗ ಸಾಹಿತ್ಯ ಪ್ರಶಸ್ತಿʼ ಹಾಗೂ ʻಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿʼಯನ್ನು ಪ್ರಕಟಿಸಲಾಗಿದೆ. ಹಿರಿಯ ಬರಹಗಾರರಾದ ಉಡುಪಿಯ ವೈದೇಹಿಯವರನ್ನು ನೃಪತುಂಗ ಪ್ರಶಸ್ತಿಗೆ ಏಕಧ್ವನಿಯಲ್ಲಿ ಹಾಗೂ ಸರ್ವಾನುಮತದಲ್ಲಿ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ. 

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೃಪತುಂಗ ಸಾಹಿತ್ಯ ಪ್ರಶಸ್ತಿಯು 7 ಲಕ್ಷ ರೂ. ನಗದು ಹಾಗೂ ಪ್ರಮಾಣಪತ್ರದ ಜೊತೆ ಫಲತಾಂಬೂಲವನ್ನು ಒಳಗೊಂಡಿರುತ್ತದೆ. ಈ ಪ್ರಶಸ್ತಿಯು ಜ್ಞಾನಪೀಠ ಪ್ರಶಸ್ತಿಗೆ ಸರಿಸಮಾನವಾದ ಕನ್ನಡ ನಾಡಿನ ಪ್ರಶಸ್ತಿಯೆಂದು ಪ್ರಖ್ಯಾತವಾಗಿದೆ. ಈ ಬಾರಿ ಹಿರಿಯ ಬರಹಗಾರ್ತಿ ವೈದೇಹಿ ಅವರನ್ನು ಈ ಮೌಲಿಕ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ. ವೈದೇಹಿ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ  ಜಾನಕಿ ಶ್ರೀನಿವಾಸಮೂರ್ತಿ ಕನ್ನಡದ ಪ್ರಮುಖ ಲೇಖಕಿಯರಲ್ಲಿ ಒಬ್ಬರಾಗಿದ್ದು, ಸಣ್ಣಕತೆ, ಕಾವ್ಯ, ಕಾದಂಬರಿ, ನಾಟಕ, ಮಕ್ಕಳ ಸಾಹಿತ್ಯ, ಅನುವಾದ ಸಾಹಿತ್ಯ, ಪ್ರಬಂಧ ಹೀಗೆ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಹುಲುಸಾದ ಕೃಷಿ ಮಾಡಿದ್ದಾರೆ. ಇವರ ಜೀವಮಾನದ ಸಾಧನೆಯನ್ನು ಪರಿಗಣಿಸಿ ಈ ಮೌಲಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ನೃಪತುಂಗ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಮೃದ್ಧವಾದ ಹಾಗೂ ಮೌಲಿಕವಾದ ಕೊಡುಗೆ ನೀಡಿದ ಬರಹಗಾರರೊಬ್ಬರನ್ನು ಈ ಪ್ರಶಸ್ತಿಗೆ ಪರಿಗಣಿಸಬೇಕು ಎನ್ನುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಭಾಗದ ಸಾಹಿತಿಗಳ ಸಾಧನೆಯನ್ನು ಪರಿಗಣನೆಗೆ ತೆಗೆದುಕೊಂಡು ಒಬ್ಬರನ್ನು ಆಯ್ಕೆ ಮಾಡಲಾಗುತ್ತದೆ. ಈ ಪ್ರಶಸ್ತಿಯನ್ನು ಯಾವುದೇ ಒಂದು ಕೃತಿಗೆ ನೀಡದೆ ಬರಹಗಾರರು ಕನ್ನಡ ಸಾಹಿತ್ಯಕ್ಕೆ ಕೊಟ್ಟಿರುವ ಸಮಗ್ರ ಕೊಡುಗೆಯನ್ನು ಪರಿಗಣಿಸುವ ಮೂಲಕ ನೀಡಲಾಗುತ್ತದೆ ಎಂದು ಡಾ.ಮಹೇಶ ಜೋಶಿ ತಿಳಿಸಿದರು. 

ನೃಪತುಂಗ ಪ್ರಶಸ್ತಿಯ ಇತಿಹಾಸದಲ್ಲಿ ಈ ಬಾರಿ ಆಯ್ಕೆಗೊಂಡ ಶ್ರೀಮತಿ ವೈದೇಹಿ ಅವರು ಎರಡನೆಯ ಮಹಿಳಾ ಸಾಹಿತಿಯಾಗಿದ್ದಾರೆ. 2012 ರಲ್ಲಿ ಹಿರಿಯ ಬರಹಗಾರ್ತಿ ಸಾರಾ ಅಬುಬಕರ ಅವರನ್ನು ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಸಾಹಿತಿಯ ಸಮಗ್ರ ಸೇವೆಯನ್ನು ಪರಿಗಣಿಸಿ ನೃಪತುಂಗ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಈ ಪ್ರಶಸ್ತಿಯು ಕರ್ನಾಟಕದಲ್ಲಿಯೇ ಅತೀ ಹೆಚ್ಚು ನಗದು ಮೊತ್ತವನ್ನು ಒಳಗೊಂಡಿರುತ್ತದೆ ಎಂದು ಡಾ. ಮಹೇಶ ಜೋಶಿ ತಿಳಿಸಿದ್ದಾರೆ.   

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ. ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯ ಸಭೆಯಲ್ಲಿ ನೃಪತುಂಗ ಹಾಗೂ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ. 2022ನೇ ಸಾಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ  ಮಯೂರ ವರ್ಮ ಸಾಹಿತ್ಯ ಪ್ರಶಸ್ತಿಗೆ ಐವರನ್ನು ಆಯ್ಕೆ ಮಾಡಲಾಗಿದೆ. ಅವರೆಂದರೆ ಗದಗ ಜಿಲ್ಲೆಯ ಗಜೇಂದ್ರಗಡದ ಶ್ರೀ ಹನುಮಂತ ಸೋಮನಕಟ್ಟಿ, ವಿಜಯನಗರ ಜಿಲ್ಲೆಯ ಕೊಟ್ಟೂರಿನ ಶ್ರೀ ಗುಡ್ಡಪ್ಪ ಬೆಟಗೇರಿ, ತುಮಕೂರು ಜಿಲ್ಲೆಯ ಡಾ. ಸತ್ಯಮಂಗಲ ಮಹಾದೇವ, ಗಡಿಭಾಗ ಕಾಸರಗೋಡಿನ ಶ್ರೀಮತಿ ವಿದ್ಯಾರಶ್ಮಿ ಪೆಲ್ಲತಡ್ಕ ಹಾಗೂ ಹಾಸನದ ಶ್ರೀ ಬೇಲೂರು ರಘುನಂದನ ಅವರನ್ನು ಆಯ್ಕೆ ಮಾಡಲಾಗಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿಯು 25001 ರೂ. ಹಾಗೂ ಪ್ರಮಾಣಪತ್ರದ ಜೊತೆ ಫಲತಾಂಬೂಲ ಒಳಗೊಂಡಿರುತ್ತದೆ. ಈ ಮಯೂರ ವರ್ಮ ಪ್ರಶಸ್ತಿಯು 45 ವರ್ಷದೊಳಿಗ 5 ಜನ ಪ್ರತಿಭಾವಂತ ಸಾಧಕರಿಗೆ ಪ್ರದಾನ ಮಾಡಲಾಗುತ್ತದೆ. ಪ್ರತಿ ವರ್ಷ ಪುರಸ್ಕೃತರ ಆಯ್ಕೆಗಾಗಿ ಕನ್ನಡ ಸಾಹಿತ್ಯ ಪರಿಷತ್ತು, ಪರಿಷತ್ತಿನ ಅಧ್ಯಕ್ಷರ ನೇತ್ರತ್ವದಲ್ಲಿ  7 ಮಂದಿಯ ಆಯ್ಕೆ ಸಮಿತಿಯನ್ನು ರಚಿಸಿ ಕೂಲಂಕಶವಾಗಿ ಚರ್ಚಿಸಿ ಆಯ್ಕೆ ಮಾಡಲಾಗಿದೆ ಎಂದು ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ. 

ನಿಕಟಪೂರ್ವ ನೃಪತುಂಗ ಪ್ರಶಸ್ತಿ ಪುರಸ್ಕೃತರಾದ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ್, ಹಿರಿಯ ಸಾಹಿತಿ ಡಾ. ಎಸ್.ಆರ್.ಲೀಲಾ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ ಶ್ರೀ ಸತೀಶ್, ಕ.ರಾ,ರ.ಸಾ.ಸಂಸ್ಥೆಯ ಕನ್ನಡ ಕ್ರಿಯಾ ಸಂಸ್ಥೆಯ ರಾಜ್ಯಾಧ್ಯಕ್ಷ ಶ್ರೀ ವ.ಚ.ಚನ್ನೇಗೌಡ ಆಯ್ಕೆ ಸಮಿತಿ ಸಭೆಯಲ್ಲಿ ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist