
ಮೈಸೂರು: ಬರುವ ವಿಧಾನಸಭೆ ಚುನಾವಣೆಯಲ್ಲಿ ಇವಿಎಂ ಯಂತ್ರಗಳ ಬಳಕೆಯನ್ನು ನಿಷೇಧಿಸಿ, ಮತಪತ್ರಗಳನ್ನು ಬಳಸಬೇಕು ಎಂದು ಒತ್ತಾಯಿಸಿ ಮಂಗಳವಾರ ನಗರದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಅಂಚೆ ಪತ್ರ ಚಳವಳಿ ನಡೆಸಿದವು.
ನಗರಪಾಲಿಕೆಯ ಕಚೇರಿ ಮುಂಭಾಗವಿರುವ ಅಂಚೆ ಡಬ್ಬದ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ನಾನಾ ಘೋಷಣೆಗಳನ್ನು ಕೂಗಿದರು. ಬಳಿಕ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳಿಗೆ ಬರೆದಿದ್ದ ಪೋಸ್ಟ್ ಕಾರ್ಡ್ಗಳನ್ನು ಡಬ್ಬಿಗೆ ಹಾಕಿದರು. ಇತ್ತೀಚೆಗೆ ಲಕ್ಷಾಂತರ ಇವಿಎಂ ಯಂತ್ರಗಳು ಕಾಣೆಯಾಗಿರುವ ವಿಚಾರ ರಾಜಸಭೆಯಲ್ಲಿ ಪ್ರಸ್ತಾಪವಾಗಿದೆ. ದೇಶದ್ಯಾಂತ ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಇವಿಎಂ ಯಂತ್ರಗಳ ದುರುಪಯೋಗವಾಗುತ್ತಿದೆ. ಸಾಫ್ಟವೇರ್ ದುರ್ಬಳಕೆ ಮಾಡಿಕೊಳ್ಳುವ ಅಧಿಕಾರ ದುರುಪಯೋಗಮಾಡಿಕೊಳ್ಳುತ್ತಿರುವುದು, ಚುನಾವಣಾ ಅಕ್ರಮ ವೆಸಗುತ್ತಿರುವುದು ಕಂಡು ಬರುತ್ತಿರುವ ಹಿನ್ನಲೆಯಲ್ಲಿ, ಇದಕ್ಕೆಲ್ಲಾ ಕಡಿವಾಣ ಹಾಕಲು ಕೂಡಲೇ ಚುನಾವಣಾ ಆಯೋಗ ಇವಿಎಂ ಯಂತ್ರಗಳ ಬಳಕೆ ನಿಷೇಧಿಸಿ ಮತಪತ್ರಗಳ ಬಳಕೆಯನ್ನು ಚುನಾವಣೆಯಲ್ಲಿ ಮತ್ತೆ ಜಾರಿಗೆ ತರಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ವೇಳೆ ಸಂವಿಧಾನ ಸಂರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ ಎನ್.ಭಾಸ್ಕರರಾವ್, ಮೈಸೂರು ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಕೆ.ಎಸ್.ಶಿವರಾಮು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಜರಿದ್ದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist