ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲು

Twitter
Facebook
LinkedIn
WhatsApp
ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನೆಲೆ ಬಿಜೆಪಿ (BJP) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಯತ್ನಾಳ್, ರಾಹುಲ್ ಗಾಂಧಿ ಹಾಗೂ ಧರ್ಮಗಳ ಬಗ್ಗೆ ಅವಹೇಳನ ಮಾಡಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ವೇಳೆ ಅವಹೇಳನಕಾರಿ ಪದ ಬಳಸಿದ್ದಾರೆ. ಹೀಗಾಗಿ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನೋಹರ್ ದೂರು ನೀಡಿದ್ದಾರೆ.

ಈ ದೂರಿನ ಆಧಾರದ ಮೇಲೆ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 

ನನ್ನದು ಅಂಜುವ ಕುಲವಲ್ಲ, ಆಂಜನೇಯನ ಕುಲ – ಯತ್ನಾಳ್‌ ಕಿಡಿ

ಸಿದ್ದರಾಮಯ್ಯನವರ (Siddaramaiah) ಸರ್ಕಾರ ನನ್ನ ಮೇಲೆ ಪ್ರಕರಣ ದಾಖಲಿಸಿ ನನ್ನನ್ನು ಭಯಪಡಿಸಬಹುದು ಎಂದು ಅಂದುಕೊಂಡರೆ ಅವರ ಮೂರ್ಖತನ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಹೇಳಿದ್ದಾರೆ.

ಈವರೆಗೂ ಕಾಂಗ್ರೆಸ್ ಸರ್ಕಾರ ನನ್ನ ವಿರುದ್ಧ ದಾಖಲಿಸಿದ ಬಹುತೇಕ ಪ್ರಕರಣಗಳಲ್ಲಿ ಸರ್ಕಾರ ಸೋಲು ಒಪ್ಪಿಕೊಂಡು ಹೈಕೋರ್ಟ್ ಆದೇಶಕ್ಕೆ ಮಂಡಿಯೂರಿದೆ. ನನ್ನದು ಅಂಜುವ ಕುಲವಲ್ಲ, ಆಂಜನೇಯನ ಕುಲ ಎಂದು ಎಕ್ಸ್‌ನಲ್ಲಿ ಯತ್ನಾಳ್‌ ಬರೆದುಕೊಂಡಿದ್ದಾರೆ.

ರಾಹುಲ್ ಗಾಂಧಿ (Rahul Gandhi) ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನೆಲೆ ಬಿಜೆಪಿ (BJP) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಯತ್ನಾಳ್, ರಾಹುಲ್ ಗಾಂಧಿ ಹಾಗೂ ಧರ್ಮಗಳ ಬಗ್ಗೆ ಅವಹೇಳನ ಮಾಡಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ವೇಳೆ ಅವಹೇಳನಕಾರಿ ಪದ ಬಳಸಿದ್ದಾರೆ. ಹೀಗಾಗಿ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನೋಹರ್ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ

ರಾಮನಗರ, ಸೆ.19: ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಮಾಡಿರುವ ಕೇಸ್‌ನಲ್ಲಿ ಬಿಜೆಪಿ ಶಾಸಕ ಮುನಿರತ್ನ (Munirathna) ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಅವರ ವಿರುದ್ಧ ಒಕ್ಕಲಿಗ, ದಲಿತ ಸಂಘಟನೆಗಳು ಸರಣಿ ಪ್ರತಿಭಟನೆ ಮಾಡ್ತಿವೆ. ಕಾಂಗ್ರೆಸ್‌ಗೆ ಈ ಪ್ರಕರಣ ಅಸ್ತ್ರವಾಗಿ ಸಿಕ್ಕಿದೆ. ಆದರೆ ಇದೀಗ ಇದರ ನಡುವೆ ಮುನಿರತ್ನಗೆ ಮತ್ತೊಂದು ಕಂಟಕ ಎದುರಾಗಿದೆ. ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ರು ಮುನಿರತ್ನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ದೂರು ದಾಖಲಿಸಿದ್ದಾರೆ.

R.R​.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪದಡಿ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಡಿವೈಎಸ್‌ಪಿ ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಹಾಜರಾಗಿ ಸಂತ್ರಸ್ತೆ 2 ಗಂಟೆಗೂ ಹೆಚ್ಚು ಕಾಲ ವಿವರಣೆ ನೀಡಿದ್ದಾರೆ. ಇಂದು ಸಂತ್ರಸ್ತೆ ಜೊತೆ ಪೊಲೀಸರು ಸ್ಥಳಮಹಜರು ನಡೆಸಲಿದ್ದಾರೆ. ಘಟನೆ ಸಂಬಂಧ ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ FIR ದಾಖಲಾಗಿದೆ. ಆರ್​.ಆರ್​.ನಗರ ಬಿಜೆಪಿ ಶಾಸಕ ಮುನಿರತ್ನ, ವಿಜಯ್​ ಕುಮಾರ್​, ಕಿರಣ್​​, ಲೋಹಿತ್​​, ಮಂಜುನಾಥ್​, ಲೋಕಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಖಾಸಗಿ ರೆಸಾರ್ಟ್​ನಲ್ಲಿ ಅತ್ಯಾಚಾರ ಮಾಡಿರುವುದಾಗಿ DySP ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಮಹಿಳೆ ಆರೋಪ ಮಾಡಿ ಹೇಳಿಕೆ ನೀಡಿದ್ದಾರೆ.

ವಿಚಾರಣಾಧೀನ ಕೈದಿಯಾಗಿರೋ ಮುನಿರತ್ನಗೆ ಗುತ್ತಿಗೆದಾರ ಚಲುವರಾಜು ದಾಖಲಿಸಿದ್ದ ವಂಚನೆ ಪ್ರಕರಣದಲ್ಲಿ ರಿಲೀಫ್ ಸಿಕ್ಕಿದೆ. ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆದ್ರೆ ಜಾತಿ ನಿಂದನೆ ಕೇಸ್‌ನಲ್ಲಿ ಬಿಜೆಪಿ ಶಾಸಕ ಮುನಿರತ್ನ ಸಲ್ಲಿಸಿರುವ ಜಾಮೀನು ಅರ್ಜಿ ಭವಿಷ್ಯ ಇಂದು ನಿರ್ಧಾರವಾಗಲಿದೆ. ಕೋರ್ಟ್‌ನಲ್ಲಿ ವಾದ-ಪ್ರತಿವಾದ ಆಲಿಸಿದ ಕೋರ್ಟ್ ಆದೇಶ ಕಾಯ್ದಿರಿಸಿದ್ದು, ಇಂದು ಆದೇಶ ಪ್ರಕಟಿಸಲಿದೆ. ಜಾಮೀನು ಸಿಗದಿದ್ರೆ ಮುನಿರತ್ನೆಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist