ಬಸನಗೌಡ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ
ಬೆಂಗಳೂರು: ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಹಿಂದೂ ಹುಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ. ಯಾವ ಕ್ಷಣದಲ್ಲಾದರೂ ಶಾಸಕರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ತಬಸ್ಸುಮ್ ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ಬೆಂಗಳೂರಿನ 42ನೇ ACMM ಕೋರ್ಟ್ ಜಡ್ಜ್ ಕೆ.ಎನ್.ಶಿವಕುಮಾರ್ ಅವರು ಅಕ್ಟೋಬರ್ 16 ರಂದು ಬಸನಗೌಡ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.
ಟಬಸ್ಸುಮ್ ರಾವ್ ಸಲ್ಲಿಸಿದ್ದ ಖಾಸಗಿ ದೂರನ್ನು ಆಗಸ್ಟ್ 29 ರಂದು ಪುರಸ್ಕರಿಸಿದ್ದ ಕೋರ್ಟ್ ಅ.16 ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಯತ್ನಾಳ್ಗೆ ಸಮನ್ಸ್ ಜಾರಿಗೊಳಿಸಿತ್ತು. ಆದರೆ ಯತ್ನಾಳ್ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿದೆ.
ಸುದ್ದಿಗಾರರ ಜೊತೆಗೆ ಮಾತನಾಡುವಾಗ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರು, ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಅವರನ್ನು ಟೀಕಿಸಿದ್ದರು.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು ಬಿಜೆಪಿ ಕಾರ್ಯಕರ್ತನ ವಿಚಾರಣೆ ನಡೆಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರದಲ್ಲಿ ಏಪ್ರಿಲ್ 6 ರಂದು ಸುದ್ದಿಗಾರರ ಜತೆ ಮಾತನಾಡಿದ್ದ ಶಾಸಕ ಯತ್ನಾಳ್, ” ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ವಿವಾದಾತ್ಮಕ ಹೇಳಿಕೆ ” ನೀಡಿದ್ದರು. ಈ ಕುರಿತು ತಬಸುಮ್ ಅವರು ಯತ್ನಾಳ್ ವಿರುದ್ಧ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಜತೆಗೆ, ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಖಾಸಗಿ ದೂರು ದಾಖಲಿಸಿದ್ದರು.
ಈ ಹಿಂದೆ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪನ್ನು ರದ್ದು ಮಾಡುವಂತೆ ಕೋರಿ ಶಾಸಕ ಯತ್ನಾಳ್ ಪರ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದರು. ಆಗ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠವು ಹೇಳಿಕೆಯನ್ನು ಕೀಳು ಅಭಿರುಚಿ ಎಂದಿದ್ದರು.
ಜೆಪಿ.ನಡ್ಡಾ ಭೇಟಿಯಾದ ಸಚಿವ ದಿನೇಶ್ ಗುಂಡೂರಾವ್:
ಬೆಂಗಳೂರು: ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಭೇಟಿ ಮಾಡಿದ್ದು, ಕರ್ನಾಟಕದಲ್ಲಿ ಆರೋಗ್ಯ ಸೇವೆ ಹೆಚ್ಚಿಸುವಂತೆ ಮನವಿ ಮಾಡಿದರು.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಅಧಿಕಾರಿಗಳೊಂದಿಗೆ ಕೇಂದ್ರ ಆರೋಗ್ಯ ಸಚಿವ ಜೆಪಿ.ನಡ್ಡಾ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ ದಿನೇಶ್ ಗುಂಡೂರಾವ್ ಅವರು, ರಾಜ್ಯದ ವಿವಿಧ ಆರೋಗ್ಯ ಯೋಜನೆಗಳ ಕುರಿತು ಚರ್ಚೆ ನಡೆಸಿದರು.
ಪ್ರಸ್ತುತ ರಾಜ್ಯದಲ್ಲಿ 1 ಕೋಟಿ 15 ಲಕ್ಷ ಬಿಪಿಎಲ್ ಕಾರ್ಡುದಾರರಿದ್ದಾರೆ, ಬಿಪಿಎಲ್ ಹೊಂದಿದ ಎಲ್ಲರಿಗು ರಾಜ್ಯ ಸರ್ಕಾರ ಆಯುಷ್ಮಾನ್ ವಿಮೆಯಡಿ ಆರೋಗ್ಯ ಸೇವೆ ಒದಗಿಸುತ್ತಿದೆ. ಆದರೆ, ಕೇಂದ್ರ ಸರ್ಕಾರ ಯೋಜನೆಯಡಿ ರಾಜ್ಯದ 69 ಲಕ್ಷ ಫಲಾನುಭವಿಗಳನ್ನ ಮಾತ್ರ ಪರಿಗಣಿಸಿದೆ. ಉಳಿದ ಫಲಾನುಭವಿಗಳಿಗೆ ರಾಜ್ಯ ಸರ್ಕಾರವೇ ಅನುದಾನ ಭರಿಸುತ್ತಿದ್ದು, ಕೇಂದ್ರ ಸರ್ಕಾರ ಫಲಾನುಭವಿಗಳ ಸಂಖ್ಯೆ ಹೆಚ್ಚಿಸಿಕೊಡಬೇಕು ಎಂದು ಮನವಿ ಮಾಡಿದರು.
ಭೇಟಿಯ ವೇಳೆ ರಾಜ್ಯ ಆರೋಗ್ಯ ಇಲಾಖೆಯು ಕೈಗೊಂಡಿರುವ ಆರೋಗ್ಯ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿರುವ ಸಚಿವರು, ಹಠಾತ್ ಹೃದಯಾಘಾತ ತಡೆಯಲು ಹೃದಯ ಜ್ಯೋತಿ ಯೋಜನೆ, ಡಯಾಲಿಸಿಸ್ ಯಂತ್ರಗಳಲ್ಲಿ ಏಕ ಬಳಕೆಯ ಡಯಲೈಸರ್ ಗಳ ಬಳಕೆ, ಆರು ವರ್ಷದೊಳಗಿನ ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್‌ಗಳು, 10 ಬೆಡ್ ಗಳ ಟೆಲಿ-ಐಸಿಯು ಸ್ಥಾಪನೆ ಮತ್ತು ಶಾಲಾ ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ ಮತ್ತು ಮುಟ್ಟಿನ ಕಪ್‌ಗಳ ವಿತರಣೆ ಕುರಿತಾಗಿ ವಿವರಿಸಿದರು.
ಕಳೆದ ಎರಡು ವರ್ಷಗಳಿಂದ ಕ್ಷಯರೋಗದ ಔಷಧಿಗಳ ಅಸಮರ್ಪಕ ಪೂರೈಕೆಯನ್ನು ಎದುರಿಸುತ್ತಿದ್ದು, ವಿಶೇಷವಾಗಿ 4 FDC ಔಷಧಿಗಳ ಪೂರೈಕೆಯನ್ನು ವ್ಯವಸ್ಥಿತಗೊಳಿಸಲು ಮನವಿರಾಷ್ಟ್ರೀಯ ಆರೋಗ್ಯ ಮಿಷನ್ (NHM) ಮತ್ತು PM-ABHIM ಕಾರ್ಯಕ್ರಮಗಳ ಅಡಿಯಲ್ಲಿ ಅನುದಾನ ಮರುಹಂಚಿಕೆ ಮಾಡುವಂತೆ, ಗ್ರಾಮೀಣ ಭಾಗದಲ್ಲಿ ವೈದ್ಯರ ಕರ್ತವ್ಯ ನಿರ್ವಹಣೆಯನ್ನು ಪ್ರೋತ್ಸಾಹಿಸಲು NHM ಅಡಿಯಲ್ಲಿ ವೈದ್ಯರು ಮತ್ತು ಸ್ಟಾಫ್ ನರ್ಸ್‌ಗಳ ವೇತನವನ್ನು ಹೆಚ್ಚಿಸುವ ಪ್ರಸ್ತಾವನೆಗೆ ತ್ವರಿತವಾದ ಅನುಮತಿ ನೀಡುವಂತೆ, ರಾಜ್ಯ ಆಹಾರ ಸುರಕ್ಷತಾ ಆಯುಕ್ತರು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರಕ್ಕೆ (ಎಫ್‌ಎಸ್‌ಎಸ್‌ಎಐ) ಸಲ್ಲಿಸಿದ ವಾರ್ಷಿಕ ಕ್ರಿಯಾ ಯೋಜನೆಗೆ ತ್ವರಿತ ಅನುಮೋದನೆ ನೀಡುವಂತೆ ಹಾಗೂ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ (MoRTH) ಸಹಯೋಗದೊಂದಿಗೆ ರಸ್ತೆ ಅಪಘಾತ ಸಂತ್ರಸ್ತ ಯೋಜನೆಯ ತ್ವರಿತ ಆರಂಭ ಮಾಡುವಂತೆ ಮನವಿ. ಮನವಿ ಮಾಡಿದರು.
ಜಮೀರ್ ಮನೆಗೆ ಆಗಮಿಸಿದ ನಾಗೇಂದ್ರ:
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದ ಪ್ರಮುಖ ಆರೋಪಿ ಮಾಜಿ ಮಂತ್ರಿ ನಾಗೇಂದ್ರಗೆ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ. ಸೋಮವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು. ಇಂದು ಬೆಳಗ್ಗೆ ಜಾಮೀನಿನ ವಿಧಿವಿಧಾನಗಳನ್ನು ಪೂರೈಸಿದ ಮಾಜಿ ಮಂತ್ರಿ ನಾಗೇಂದ್ರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದರು.
ಜೈಲಿನಿಂದ ಬಿಡುಗಡೆಯಾಗಿ ನೇರವಾಗಿ ಸಚಿವ ಜಮೀರ್ ಅಹ್ಮದ್ (Zameer Ahmed) ನಿವಾಸಕ್ಕೆ ತೆರಳಿ ಮಹತ್ವದ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮಾತಾಡಿದ ನಾಗೇಂದ್ರ, ಕೇಂದ್ರ ಸರ್ಕಾರ ಮತ್ತು ಇಡಿ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದರು.
ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಇಡಿ ಮೂಲಕ ಕೇಂದ್ರ ಸರ್ಕಾರ ಯತ್ನಿಸಿದೆ. ಸಿಎಂ-ಡಿಸಿಎಂ ಹೆಸರು ಹೇಳುವಂತೆ ಇಡಿ ಅಧಿಕಾರಿಗಳು ನನ್ನ ಮೇಲೆ ಒತ್ತಡ ಹೇರಿದ್ರು ಎಂದು ಆಪಾದಿಸಿ ಸಂಡೂರು ಉಪಚುನಾವಣೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.