ಶನಿವಾರ, ಏಪ್ರಿಲ್ 20, 2024
ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಸ್ ನಿಲ್ದಾಣದಲ್ಲಿ ಗುಂಬಜ್ ಮಾದರಿಯ ರಚನೆ ತೆರವು: ಧನ್ಯವಾದ ಹೇಳಿದ ಸಂಸದ ಪ್ರತಾಪ್ ಸಿಂಹ..!

Twitter
Facebook
LinkedIn
WhatsApp
ಬಸ್ ನಿಲ್ದಾಣದಲ್ಲಿ ಗುಂಬಜ್ ಮಾದರಿಯ ರಚನೆ ತೆರವು: ಧನ್ಯವಾದ ಹೇಳಿದ ಸಂಸದ ಪ್ರತಾಪ್ ಸಿಂಹ..!

ಮೈಸೂರು: ಮೈಸೂರಿನಲ್ಲಿ ರಾಜಕಾರಣಿಗಳ ಮಧ್ಯೆ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಗುಂಬಜ್ ಮಾದರಿಯ ಬಸ್ ನಿಲ್ದಾಣಕ್ಕೆ ತಾರ್ಕಿಕ ಅಂತ್ಯ ಸಿಕ್ಕಿದೆ. ಶಾಸಕ ರಾಮದಾಸ್ ನಿಲ್ದಾಣದ ಮೇಲಿದ್ದ ಮೂರು ಗುಂಬಜ್​ಗಳ ಪೈಕಿ ಅಕ್ಕಪಕ್ಕದ ಎರಡು ಚಿಕ್ಕ  ಗುಂಬಜ್ ನ್ನು ತೆರವುಗೊಳಿಸಿದ್ದಾರೆ.

ಬಸ್ ನಿಲ್ದಾಣದ ಮೇಲಿನ ಗುಂಬಜ್ ನಿರ್ಮಾಣ ವಿಷಯ ರಾಮದಾಸ್ ಮತ್ತು ಸಂಸದ ಪ್ರತಾಪ್ ಸಿಂಹ ಅವರ ನಡುವೆ ಶೀತಲ ಸಮರಕ್ಕೆ ಕಾರಣವಾಗಿತ್ತು. ಇದೀಗ ಗುಂಬಜ್ ತೆರವು ಬಳಿಕ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮೂಲಕ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಎರಡು ಗುಂಬಜ್ ತೆರವುಗೊಳಿಸಿದ ಬಳಿಕ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದ ಶಾಸಕ ರಾಮದಾಸ್, ಹಲವು ವಿಷಯಗಳನ್ನು ಹಂಚಿಕೊಂಡಿದ್ದರು. ತಮ್ಮ ಮೂವತ್ತು ವರ್ಷದ ರಾಜಕಾರಣದಲ್ಲಿ ಈ ರೀತಿಯ ವಿವಾದ ಎಂದೂ ಸಹ ನಡೆದಿರಲಿಲ್ಲ. ಅನಾವಶ್ಯಕವಾಗಿ ಧರ್ಮದ ಲೇಪನ ಮಾಡುವ ಯತ್ನಗಳು ನಡೆದಿದ್ದವೂ ಎಂಬ ಆರೋಪವನ್ನು ತಮ್ಮ ಪ್ರಕಟಣೆಯಲ್ಲಿ ಮಾಡಿದ್ದರು. 

ಟ್ವಿಟ್ಟರ್​ನಲ್ಲಿ ಫೋಟೋ ಹಂಚಿಕೊಂಡಿರುವ ಸಂಸದ ಪ್ರತಾಪ್ ಸಿಂಹ, ಮಧ್ಯದಲ್ಲೊಂದು ದೊಡ್ಡ ಗುಂಬಜ್, ಅಕ್ಕಪಕ್ಕ ಎರಡು ಚಿಕ್ಕ ಗುಂಬಜ್ ಇದ್ದರೆ ಅದು ಮಸೀದೀನೇ, ಅದನ್ನು ತೆರವು ಮಾಡಿಸುತ್ತೇನೆ ಎಂದಿದ್ದೆ ಮತ್ತು ಅದರಂತೆ  ನಡೆದುಕೊಂಡಿದ್ದೇನೆ. ಕಾಲಾವಕಾಶ ಕೇಳಿ ಮಾತಿನಂತೆ ನಡೆದುಕೊಂಡ ಜಿಲ್ಲಾಧಿಕಾರಿಗಳಿಗೆ ಹಾಗು ವಾಸ್ತವ ಅರಿತು ಜನಾಭಿಪ್ರಾಯಕ್ಕೆ ತಲೆಬಾಗಿದ ರಾಮದಾಸ್ ಜಿ ಅವರಿಗೂ ಧನ್ಯವಾದಗಳು ಎಂದು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.

ಬಸ್ ನಿಲ್ದಾಣದಲ್ಲಿ ಗುಂಬಜ್ ಮಾದರಿಯ ರಚನೆ ತೆರವು: ಧನ್ಯವಾದ ಹೇಳಿದ ಸಂಸದ ಪ್ರತಾಪ್ ಸಿಂಹ..!

ಅವರು ಜನಾಭಿಪ್ರಾಯಕ್ಕೆ ತಲೆಬಾಗಿದ ರಾಮದಾಸ್ ಅವರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಪ್ರತಾಪ್ ಸಿಂಹ ಒಟ್ಟು ಮೂರು ಫೋಟೋಗಳನ್ನು ಹಂಚಿಕೊಂಡಿದ್ದು, ಒಂದು ಮಸೀದಿಯ ಮಾದರಿ ನಕ್ಷೆ. ಮತ್ತೊಂದು ಬಸ್ ನಿಲ್ದಾಣದ ಮೇಲೆ ನಿರ್ಮಾಣ ಮಾಡಲಾಗಿದ್ದ ಮೂರು ಗುಂಬಜ್ ಇರುವ ಫೋಟೋ, ಕೊನೆಯದ್ದು ಒಂದೇ ಗುಂಬಜ್ ಇರುವ ಚಿತ್ರವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ