
ಬೆಂಗಳೂರು: ವಿಧಾನ ಪರಿಷತ್ ಸ್ಥಾನಕ್ಕೆ ನಮ್ಮ ಪಕ್ಷದಲ್ಲಿ ಬಹಳಷ್ಟು ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದರು. ಅವರಿಗೆ ಮುಂದಿನ ದಿನಗಳಲ್ಲಿ ನ್ಯಾಯ ಒದಗಿಸಿ ಕೊಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.
ನಾಮಪತ್ರ ಸಲ್ಲಿಕೆ ನಂತರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿಕ್ರಿಯೆ ನೀಡಿದ ಅವರು, ಪರಿಷತ್ ಚುನಾವಣೆ ಟಿಕೆಟ್ ಹಂಚಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಎಸ್.ಆರ್. ಪಾಟೀಲ್ ಅವರು ಪಕ್ಷದ ಹಿರಿಯ ನಾಯಕರಿದ್ದು, ಹೈಕಮಾಂಡ್ ಅವರ ವಿಚಾರವನ್ನು ಗಮನಿಸಿದೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಈ ಬಾರಿ ಕೇವಲ 2 ಸ್ಥಾನಗಳಿಗೆ ಮಾತ್ರ ಅವಕಾಶವಿದ್ದು, ಹಿಂದೆ ಹೆಚ್ಚು ಪ್ರಾತಿನಿಧ್ಯ ನೀಡದವರಿಗೆ ಆದ್ಯತೆ ನೀಡಲಾಗಿದೆ. ಮಹಿಳೆಯರಿಗೂ ಆದ್ಯತೆ ನೀಡಲು ಚಿಂತನೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಸರಿ ಮಾಡುತ್ತೇವೆ ಎಂದರು.
ಕೋವಿಡ್ ನಿಯಮಾವಳಿ ಉಲ್ಲಂಘನೆ ವಿಚಾರವಾಗಿ ನಮ್ಮೆಲ್ಲ ನಾಯಕರಿಗೆ ಸಮನ್ಸ್ ಬಂದಿದ್ದು, ಬಿಜೆಪಿ ಸರ್ಕಾರ ಸಂವಿಧಾನ ಬಾಹಿರವಾಗಿ ಕೇವಲ ಕಾಂಗ್ರೆಸ್ ಪಕ್ಷದವರ ವಿರುದ್ಧ ಮಾತ್ರ ಪ್ರಕರಣ ದಾಖಲಿಸಿದೆ. ಬಿಜೆಪಿ ನಾಯಕರು ಹಾಗೂ ಸಚಿವರು ಹಲವು ಬಾರಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದರೂ, ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿಲ್ಲ. ಆ ಮೂಲಕ ಬಿಜೆಪಿ ಸರ್ಕಾರ ದ್ವೇಷ ಸಾಧಿಸುತ್ತಿದೆ. ನಾವು ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ ಎಂದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist