ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಾಂಗ್ಲಾದ ನಾಯಕ-ಭಾರತದ ಬೌಲರ್ – ಏಕದಿನ ಸರಣಿ ಆರಂಭಕ್ಕೂ ಮುನ್ನ ಔಟ್

Twitter
Facebook
LinkedIn
WhatsApp
ಬಾಂಗ್ಲಾದ ನಾಯಕ-ಭಾರತದ ಬೌಲರ್ – ಏಕದಿನ ಸರಣಿ ಆರಂಭಕ್ಕೂ ಮುನ್ನ ಔಟ್

ಢಾಕಾ: ಭಾರತ (India) ಹಾಗೂ ಬಾಂಗ್ಲಾದೇಶ (Bangladesh) ನಡುವಿನ ಏಕದಿನ ಸರಣಿ ಆರಂಭಕ್ಕೂ ಮುನ್ನ ಬಾಂಗ್ಲಾದ ನಾಯಕ ತಮೀಮ್ ಇಕ್ಬಾಲ್ (Tamim Iqbal) ಮತ್ತು ಭಾರತದ ಬೌಲರ್ ಮೊಹಮ್ಮದ್ ಶಮಿ (Mohammed Shami) ಗಾಯಗೊಂಡು ಸರಣಿಯಿಂದ ಹೊರಬಿದ್ದಿದ್ದಾರೆ.

ತಮೀಮ್ ಇಕ್ಬಾಲ್ ಬಾಂಗ್ಲಾದೇಶದ ನಾಯಕರಾಗಿದ್ದೂ ಸರಣಿ ಆರಂಭಕ್ಕೂ ಮುನ್ನ ಅಭ್ಯಾಸದ ವೇಳೆ ಗಾಯಗೊಂಡು ಸರಣಿಯಿಂದ ಹೊರಬಿದ್ದಿದ್ದಾರೆ. ಟೆಸ್ಟ್ (Test) ಸರಣಿ ವೇಳೆ ತಂಡದೊಂದಿಗೆ ಸೇರಿಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದೆ. 

 

ತಮೀಮ್ ಇಕ್ಬಾಲ್ ಹೊರಬಿದ್ದ ಬಳಿಕ ಇದೀಗ ಭಾರತಕ್ಕೂ ಗಾಯ ಸಮಸ್ಯೆ ಕಾಡುತ್ತಿದ್ದು, ವೇಗಿ ಮೊಹಮ್ಮದ್ ಶಮಿ ಕೈಗೆ ಗಾಯಮಾಡಿಕೊಂಡು ಸರಣಿಯಿಂದ ಹೊರಗುಳಿದಿದ್ದಾರೆ. ಶಮಿ ಟಿ20 ವಿಶ್ವಕಪ್ (T20 World Cup) ವೇಳೆ ಗಾಯದಿಂದ ಚೇತರಿಕೆ ಕಂಡು ತಂಡ ಸೇರಿಕೊಂಡಿದ್ದರು. ಇದೀಗ ಮತ್ತೆ ಗಾಯಗೊಂಡು ಹೊರನಡೆದಿದ್ದಾರೆ. ಏಕದಿನ ಸರಣಿ (ODI) ಜೊತೆ ಟೆಸ್ಟ್ ಸರಣಿಯಿಂದಲು ಶಮಿ ಹೊರಬೀಳುವ ಸಾಧ್ಯತೆ ಇದೆ. ಈಗಾಗಲೇ ಪುನರ್‌ಶ್ಚೇತನ ಶಿಬಿರಕ್ಕಾಗಿ ಬೆಂಗಳೂರಿಗೆ ಎನ್‍ಸಿಎಗೆ ಕಳುಹಿಸಲು ಟೀಂ ಮ್ಯಾನೇಚ್‍ಮೆಂಟ್ ಪ್ಲಾನ್ ಹಾಕಿಕೊಂಡಿದೆ ಎಂದು ವರದಿಯಾಗಿದೆ. ಶಮಿ ಬದಲು ಉಮ್ರಾನ್‌ ಮಲಿಕ್‌ರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. 

ಬಾಂಗ್ಲಾದೇಶ ಮತ್ತು ಭಾರತ ನಡುವೆ 3 ಏಕದಿನ ಪಂದ್ಯ ಮತ್ತು 2 ಟೆಸ್ಟ್ ಪಂದ್ಯಗಳ ಸರಣಿ ನಡೆಯಲಿದೆ. ಡಿ.4 ರಿಂದ ಏಕದಿನ ಸರಣಿ ಆರಂಭವಾಗುತ್ತಿದೆ. ಡಿ.14 ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ