ಬಾತ್ ರೂಂನಲ್ಲಿ ಶವವಾಗಿ ಪತ್ತೆಯಾದ ನಟ ಆದಿತ್ಯ ಸಿಂಗ್ ರಜಪೂತ್
Twitter
Facebook
LinkedIn
WhatsApp

ಮುಂಬೈ: ಬಾಲಿವುಡ್ ನಟ ಹಾಗೂ ರೂಪದರ್ಶಿ ಆದಿತ್ಯ ಸಿಂಗ್ ರಜಪೂತ್, ಸೋಮವಾರ ಮುಂಬೈನ ಅಂಧೇರಿಯಲ್ಲಿರುವ ತಮ್ಮ ಮನೆಯ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತನ ಸಾವಿನ ಕಾರಣ ಇನ್ನು ನಿಗೂಢವಾಗಿಯೇ ಉಳಿದಿದೆ.
ಆದಿತ್ಯ ಸಿಂಗ್ ವಾಸಿಸುತ್ತಿದ್ದ ಮುಂಬೈನ 11ನೇ ಮಹಡಿಯ ವಾಶ್ ರೂಂನಲ್ಲಿ ಆತನ ಶವವಾಗಿ ಪತ್ತೆಯಾಗಿದ್ದು, ಇಂದು ಮಧ್ಯಾಹ್ನ ಅವನ ಸ್ನೇಹಿತ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಆದಿತ್ಯನನ್ನು, ಸೆಕ್ಯೂರಿಟಿಯ ಸಹಾಯದಿಂದ ಆಸ್ಪತ್ರೆಗೆ ಕರೆದೊಯ್ದರೂ ಸಹ ಅಷ್ಟೋತ್ತಿಗೆ ಆತ ಮೃತಪಟ್ಟಿದ್ದ ಎಂದು ತಿಳಿಸಿದ್ದಾರೆ.
ಇನ್ನು, ನಟನ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ, ಮಿತಿಮೀರಿದ ಡ್ರಗ್ಸ್ ಸೇವನೆಯೆ ಇದಕ್ಕೆ ಕಾರಣ ಇರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಆದಿತ್ಯ ಸಾವಿನ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ