ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಾರ್ಡರ್‌-ಗವಾಸ್ಕರ್ ಟೆಸ್ಟ್: ಟಾಸ್ ಗೆದ್ದ ಆಸೀಸ್ ಬ್ಯಾಟಿಂಗ್ ಆಯ್ಕೆ, ಭಾರತದ ಪರ ಇಬ್ಬರು ಪಾದಾರ್ಪಣೆ..!

Twitter
Facebook
LinkedIn
WhatsApp
ಭಾರತಕ್ಕೆ ಇಂದಿನಿಂದ ಆಸ್ಟ್ರೇಲಿಯಾ 'ಟೆಸ್ಟ್'..!

ಬಾರ್ಡರ್-ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯಕ್ಕೆ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಸಜ್ಜಾಗಿ ನಿಂತಿದೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಪೈಕಿ ಇಂದು ಮೊದಲ ಟೆಸ್ಟ್ ಪಂದ್ಯ ಆರಂಭವಾಗಿದೆ. ಈಗಾಗಲೇ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಉಭಯ ತಂಡಗಳು ಬಲಷ್ಠ ಪ್ಲೇಯಿಂಗ್ ಇಲೆವೆನ್ ಅನ್ನೇ ಕಣಕ್ಕಿಳಿಸಿದೆ. ಅಂದುಕೊಂಡಂತೆ ಟೀಮ್ ಇಂಡಿಯಾದ  ಆಡುವ ಬಳಗಕ್ಕೆ ಮೂವರು ಸ್ಪಿನ್ನರ್​ಗಳನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ಭಾರತ ಪರ ಇಬ್ಬರು ಆಟಗಾರರು ಹಾಗೂ ಆಸೀಸ್ ಪರ ಟಾಡ್ ಮರ್ಫಿ ಪದಾರ್ಪಣೆ ಮಾಡಿದ್ದಾರೆ

ಭಾರತ ಪರ ಓಪನರ್ ಆಗಿ ನಾಯಕ ರೋಹಿತ್ ಶರ್ಮಾ ಹಾಗೂ ಉಪ ನಾಯಕ ಕೆಎಲ್ ರಾಹುಲ್ ಕಣಕ್ಕಿಳಿಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಚೇತೇಶ್ವರ್ ಪೂಜಾರ ಆಡಲಿದ್ದು ನಂತರದ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದಾರೆ. ಭಾರೀ ಕುತೂಹಲ ಕೆರಳಿಸಿದ್ದ ನಾಲ್ಕನೇ ಕ್ರಮಾಂಕಕ್ಕೆ ಸೂರ್ಯಕುಉಮಾರ್ ಯಾದವ್ ಆಯ್ಕೆ ಆಗಿದ್ದಾರೆ. ಈ ಮೂಲಕ ಸೂರ್ಯ ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದಾರೆ.

ಐದನೇ ಕ್ರಮಾಂಕದಲ್ಲಿ ಕೆಎಸ್ ಭರತ್ ಆಡುತ್ತಿದ್ದು ವಿಕೆಟ್ ಕೀಪರ್ ಜವಾಬ್ದಾರಿ ನೀಡಲಾಗಿದೆ. ಇವರು ಕೂಡ ಟೆಸ್ಟ್ ಕ್ರಿಕೆಟ್​ಗೆ ಕಾಲಿಟ್ಟಿದ್ದು ಚೊಚ್ಚಲ ಅಂತರರಾಷ್ಟ್ರೀಯ ಪಂದ್ಯವನ್ನು ಆಡುತ್ತಿದ್ದಾರೆ. ಸೂರ್ಯ ಹಾಗೂ ಭರತ್​ಗೆ ಟೀಮ್ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಟೆಸ್ಟ್ ಕ್ಯಾಪ್ ನೀಡಿದರು. ಇನ್ನು ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಸ್ಪಿನ್- ಆಲ್ರೌಂಡರ್​ಗಳಾಗಿದ್ದಾರೆ. ಮೂರನೇ ಸ್ಪಿನ್ನರ್ ಆಗಿ ಅಕ್ಷರ್ ಪಟೇಲ್ ಕೂಡ ಕಣಕ್ಕಿಳಿಯಲಿದ್ದಾರೆ. ವೇಗಿಗಳಾಗಿ ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಭಾರತ ಪ್ಲೇಯಿಂಗ್ XI: ರೋಹಿತ್ ಶರರ್ಮಾ, ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್/ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.

ಇತ್ತ ಆಸ್ಟ್ರೇಲಿಯಾ ತಂಡ ಕೂಡ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನು ಆಯ್ಕೆ ಮಾಡಿದೆ. ಸ್ಪಿನ್ನರ್ ಟಾಡ್ ಮರ್ಫಿ ಪದಾರ್ಪಣೆ ಮಾಡಿದ್ದಾರೆ. ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖ್ವಾಜಾ ಓಪನರ್​ಗಳಾದರೆ ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್ ಪೀಟರ್ ಹ್ಯಾಂಡ್ಸ್​ಕಾಂಬ್ ಮತ್ತು ಮ್ಯಾಟ್ ರೆನ್ಶಾ ಮಧ್ಯಮ ಕ್ರಮಾಂಕದಲ್ಲಿದ್ದಾರೆ. ಅಲೆಕ್ಸ್ ಕ್ಯಾರಿ ವಿಕೆಟ್ ಕೀಪರ್ ಜವಾಬ್ದಾರಿ ವಹಿಸಲಿದ್ದಾರೆ. ಹೀಗೆ ಆಸೀಸ್ ಬ್ಯಾಟಿಂಗ್ ಕ್ರಮಾಂಕ ದೊಡ್ಡದಿದೆ. ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್​ನಲ್ಲೂ ಕೊಡುಗೆ ನೀಡಬಲ್ಲರು. ಸ್ಕಾಟ್ ಬೊಲಂಡ್, ಟಾಡ್ ಮರ್ಫಿ ಹಾಗೂ ನೇಥನ್ ಲ್ಯಾನ್ ಬೌಲರ್​ಗಳಾಗಿದ್ದಾರೆ.

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಪೀಟರ್ ಹ್ಯಾಂಡ್ಸ್​ಕಾಂಬ್, ಮ್ಯಾಟ್ ರೆನ್ಶಾ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಸ್ಕಾಟ್ ಬೊಲಂಡ್, ಟಾಡ್ ಮರ್ಫಿ, ನೇಥನ್ ಲ್ಯಾನ್.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ