ಶನಿವಾರ, ಮೇ 4, 2024
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಾರ್ಡರ್‌-ಗವಾಸ್ಕರ್ ಸರಣಿ ಗೆದ್ದ ಭಾರತ; ಡಬ್ಲ್ಯುಟಿಸಿ ಫೈನಲ್​ಗೆ ಲಗ್ಗೆ

Twitter
Facebook
LinkedIn
WhatsApp
ಬಾರ್ಡರ್‌-ಗವಾಸ್ಕರ್ ಸರಣಿ ಗೆದ್ದ ಭಾರತ; ಡಬ್ಲ್ಯುಟಿಸಿ ಫೈನಲ್​ಗೆ ಲಗ್ಗೆ

ಅಹಮದಾಬಾದ್(ಮಾ.13): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಅಹಮದಾಬಾದ್‌ ಟೆಸ್ಟ್‌ ಪಂದ್ಯವು ನೀರಸ ಡ್ರಾನಲ್ಲಿ ಅಂತ್ಯವಾಗಿದೆ. ಇದೀಗ ಬಾರ್ಡರ್‌-ಗವಾಸ್ಕರ್ ಟೆಸ್ಟ್ ಸರಣಿಯನ್ನು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 2-1 ಅಂತರದಲ್ಲಿ ಜಯಿಸಿದೆ. ಮೊದಲೆರಡು ಟೆಸ್ಟ್‌ ಪಂದ್ಯವನ್ನು ಟೀಂ ಇಂಡಿಯಾ ಜಯಿಸಿತ್ತು. ಇದಾದ ಬಳಿಕ ಇಂದೋರ್‌ನಲ್ಲಿ ನಡೆದ ಮೂರನೇ ಟೆಸ್ಟ್‌ ಪಂದ್ಯವನ್ನು ಆಸ್ಟ್ರೇಲಿಯಾ 9 ವಿಕೆಟ್ ಜಯ ಸಾಧಿಸಿತ್ತು. ಇದೀಗ ಕೊನೆಯ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ.

ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ನಾಲ್ಕನೇ ಹಾಗೂ ಕೊನೆಯ ಟೆಸ್ಟ್‌ ಪಂದ್ಯದಲ್ಲಿ 88 ರನ್‌ಗಳ ಇನಿಂಗ್ಸ್‌ ಹಿನ್ನಡೆಯೊಂದಿಗೆ 5ನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯಾ ತಂಡವು ಆರಂಭದಲ್ಲೇ ನೈಟ್‌ ವಾಚ್‌ಮನ್ ಮ್ಯಾಥ್ಯೂ ಕುಹ್ನೆಮನ್‌ ವಿಕೆಟ್ ಕಳೆದುಕೊಂಡಿತು. ಇದಾದ ಬಳಿಕ ಎರಡನೇ ವಿಕೆಟ್‌ಗೆ ಮಾರ್ನಸ್ ಲಬುಶೇನ್ ಹಾಗೂ ಟ್ರಾವಿಸ್ ಹೆಡ್‌ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಇನಿಂಗ್ಸ್‌ ಮುನ್ನಡೆ ಒದಗಿಸಿಕೊಡಲು ನೆರವಾದರು. ಎರಡನೇ ವಿಕೆಟ್‌ಗೆ ಈ ಜೋಡಿ 292 ಎಸೆತಗಳನ್ನು ಎದುರಿಸಿ 139 ರನ್‌ಗಳ ಜತೆಯಾಟವಾಡಿತು.

ಶತಕದ ಹೊಸ್ತಿಲಲ್ಲಿ ಮುಗ್ಗರಿಸಿದ ಟ್ರಾವಿಸ್‌ ಹೆಡ್‌: ಆಸ್ಟ್ರೇಲಿಯಾ ಪರ ಸ್ಥಿರ ಪ್ರದರ್ಶನದ ಮೂಲಕ ಗಮನ ಸೆಳೆದಿರುವ ಆರಂಭಿಕ ಬ್ಯಾಟರ್ ಟ್ರಾವಿಸ್ ಹೆಡ್‌ ಮತ್ತೊಮ್ಮೆ ಆಕರ್ಷಕ ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾದರು. ಆದರೆ ಕೇವಲ 10 ರನ್ ಅಂತರದಲ್ಲಿ ಶತಕ ಸಿಡಿಸುವ ಅವಕಾಶವನ್ನು ಕೈಚೆಲ್ಲಿದರು. ಭಾರತೀಯ ಬೌಲರ್‌ಗಳನ್ನು ದಿಟ್ಟವಾಗಿಯೇ ಎದುರಿಸಿದ ಟ್ರಾವಿಸ್ ಹೆಡ್ 163 ಎಸೆತಗಳನ್ನು ಎದುರಿಸಿ 10 ಬೌಂಡರಿ ಹಾಗೂ ಎರಡು ಸಿಕ್ಸರ್ ಸಹಿತ 90 ರನ್ ಬಾರಿಸಿ ಅಕ್ಷರ್‌ ಪಟೇಲ್‌ಗೆ ವಿಕೆಟ್ ಒಪ್ಪಿಸಿದರು. 

ಇನ್ನು ಮತ್ತೊಂದು ತುದಿಯಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ನಂ.1 ಟೆಸ್ಟ್‌ ಬ್ಯಾಟರ್ ಮಾರ್ನಸ್ ಲಬುಶೇನ್‌ 213 ಎಸೆತಗಳನ್ನು ಎದುರಿಸಿ 7 ಬೌಂಡರಿ ಸಹಿತ 63 ರನ್‌ ಬಾರಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ನಾಯಕ ಸ್ಟೀವ್ ಸ್ಮಿತ್ 10 ರನ್‌ ಗಳಿಸಿದರು. ಆಸ್ಟ್ರೇಲಿಯಾ ತಂಡವು 78.1 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 175 ರನ್‌ ಗಳಿಸಿತ್ತು. ಈ ಸಂದರ್ಭದಲ್ಲಿ ಪಂದ್ಯವನ್ನು ಡ್ರಾ ಎಂದು ಘೋಷಿಸಲಾಯಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ