ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಸತತವಾಗಿ ಸುಮಾರು ಒಂದು ವರ್ಷ ಕಾಲ ಅತ್ಯಾಚಾರ ಎಸಗಿದವನ ಮೇಲಿನ ಆರೋಪ ಮಂಗಳೂರಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹಾಗೂ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಆರೋಪಿಗೆ 10 ವರ್ಷ ಕಠಿನ ಜೈಲು ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಲಾಗಿದೆ.
ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಬೊಳ್ಳರ ಮಜಲು ಮನೆಯ ಪ್ರಸಾದ್ (31) ಶಿಕ್ಷೆಗೊಳಗಾದ ಆರೋಪಿ.
ಇನ್‌ಸ್ಪೆಕ್ಟರ್‌ಗಳಾದ ಮಂಜುನಾಥ್ ಡಿ. ಮತ್ತು ನಾಗೇಶ್ ಕೆ. ಅವರು ತನಿಖೆಯನ್ನು ಪೂರ್ಣಗೊಳಿಸಿ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹಾಗೂ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ.ಕೆ. ರಾಧಾಕೃಷ್ಣ ಅವರು ಆರೋಪ ಸಾಬೀತಾಗಿದೆ ಎನ್ನುವ ತೀರ್ಮಾನಕ್ಕೆ ಬಂದು ಮಾ. 22ರಂದು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಶಿಕ್ಷೆಯ ವಿವರ
ಪೋಕ್ಸೋ ಕಾಯ್ದೆಯ ಕಲಂ 6ರನ್ವಯ ಆರೋಪಿಗೆ 10 ವರ್ಷ ಕಠಿನ ಜೈಲು ಶಿಕ್ಷೆ ಮತ್ತು 25,000 ರೂ. ದಂಡ ಹಾಗೂ ದಂಡ ತೆರಲು ತಪ್ಪಿದರೆ ಮತ್ತೆ 2 ತಿಂಗಳ ಸಜೆ, ಐಪಿಸಿ ಸೆ. 506 (ಕೊಲೆ ಬೆದರಿಕೆ) ಅನ್ವಯ 1 ವರ್ಷ ಸಜೆ, ಐಪಿಸಿ ಸೆಕ್ಷನ್ 323 (ಹಲ್ಲೆ) ಅನ್ವಯ 6 ತಿಂಗಳ ಸಜೆಯನ್ನು ವಿಧಿಸಲಾಗಿದೆ. ಈ ಮೂರೂ ಶಿಕ್ಷೆಗಳನ್ನು ಏಕಕಾಲದಲ್ಲಿ ಅನುಭವಿಸಬೇಕಾಗಿದೆ.
4 ಲಕ್ಷ ರೂ. ಪರಿಹಾರಕ್ಕೆ ಆದೇಶ
ಸಂತ್ರಸ್ತ ಬಾಲಕಿಗೆ ಸರಕಾರದ ವತಿಯಿಂದ 4 ಲಕ್ಷ ರೂ. ಪರಿಹಾರವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ದೊರಕಿಸಿ ಕೊಡುವಂತೆ ನ್ಯಾಯಾಧೀಶರು ನಿರ್ದೇಶನ ನೀಡಿದ್ದಾರೆ. ಈ ಪ್ರಕರಣದಲ್ಲಿ ಸರಕಾರದ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸಿ. ವೆಂಕಟರಮಣ ಸ್ವಾಮಿ ಅವರು ವಾದಿಸಿದ್ದರು. 16 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿದ್ದು, 19 ದಾಖಲೆಗಳನ್ನು ಪರಿಶೀಲಿಸಲಾಗಿತ್ತು.
ಹೊಸ ನ್ಯಾಯಾಲಯದಲ್ಲಿ ಮೊದಲ ಪ್ರಕರಣ
ಅತ್ಯಾಚಾರ ಮತ್ತು ಪೋಕೊÕ ಸಂಬಂಧಿತ ಪ್ರಕರಣಗಳ ತ್ವರಿತ ವಿಲೇವಾರಿಗಾಗಿ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯವನ್ನು ಮಂಗಳೂರಿನಲ್ಲಿ ಒಂದು ತಿಂಗಳ ಹಿಂದೆ ಆರಂಭಿಸಲಾಗಿದ್ದು, ಈ ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿ ಆರೋಪಿಗೆ ಶಿಕ್ಷೆಯಾದ ಮೊದಲ ಪ್ರಕರಣ ಇದಾಗಿದೆ.
ಪ್ರಕರಣದ ವಿವರ
ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಪ್ರಸಾದ್ ಮನೆಗೆ ಆತನ ಸಂಬಂಧಿಕಳೇ ಆಗಿದ್ದ 17 ವರ್ಷದ ಬಾಲಕಿ ಮನೆ ಕೆಲಸಕ್ಕಾಗಿ ಆಗಿಂದಾಗ್ಗೆ ಬರುತ್ತಿದ್ದು, 2018 ಜು. 28ರಂದು ಆಕೆ ಮನೆಗೆ ಬಂದಾಗ ಆಕೆಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ. ಆ ಬಳಿಕ ಪದೇ ಪದೆ ಆತ ಅತ್ಯಾಚಾರ ಮಾಡಿದ್ದ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಒಮ್ಮೆ ಆಕೆ ಪ್ರತಿಭಟಿಸಿದಾಗ ಆತ ಆಕೆಯ ಮೇಲೆ ಹಲ್ಲೆ ನಡೆಸಿದ್ದ. ಇದರಿಂದ ಬಾಲಕಿಯ ತಾಯಿ ಮತ್ತು ಅಣ್ಣನಿಗೆ ವಿಷಯ ಗೊತ್ತಾಗಿತ್ತು. ಬಳಿಕ ಮನೆಮಂದಿಯ ಸಲಹೆಯಂತೆ ಬಾಲಕಿ 2019ರ ಜೂ. 13ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಳು. ಪೊಲೀಸರು ಆರೋಪಿ ಪ್ರಸಾದ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist