ಬಾಲಿವುಡ್‌ನಿಂದ ಬಂತು ಬಿಗ್ ಆಫರ್: ಬನ್ಸಾಲಿ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ
ಲಕ್ಕಿ ನಟಿ ರಶ್ಮಿಕಾ ಮಂದಣ್ಣ (Rashmika Mandanna), ಬಾಲಿವುಡ್ ಸಿನಿಮಾರಂಗದಲ್ಲಿ ಆಕ್ಟೀವ್ ಆಗ್ತಿದ್ದಾರೆ. `ಗುಡ್ ಬೈ’ (Good Bye) ಸಿನಿಮಾದ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಇದೀಗ ಬಂಪರ್ ಅವಕಾಶವೊಂದನ್ನ ಗಿಟ್ಟಿಸಿಕೊಂಡಿದ್ದಾರೆ. ಹಿಂದಿ ಚಿತ್ರರಂಗದ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಕಡೆಯಿಂದ ಸಿನಿಮಾ ಆಫರ್ ಅರಸಿ ಬಂದಿದೆ.
ಕೊಡಗಿನ ಬ್ಯೂಟಿ ರಶ್ಮಿಕಾ ಮಂದಣ್ಣ (Rashmika Mandanna) ಇದೀಗ ಬಾಲಿವುಡ್‌ನಲ್ಲಿ (Bollywood) ಕಮಾಲ್ ಮಾಡಲು ಮುಂದಾಗಿದ್ದಾರೆ. `ಗುಡ್ ಬೈ’ ಸಿನಿಮಾ ಹೀನಾಯ ಸೋಲಿನ ನಂತರವೂ ಕಿರಿಕ್ ಬ್ಯೂಟಿಗೆ ಡಿಮ್ಯಾಂಡ್ ಏನು ಕಮ್ಮಿಯಾಗಿಲ್ಲ. ಸಾಲು ಸಾಲು ಸಿನಿಮಾಗಳ ಗೆಲುವಿನ ಸರದಾರ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ (Sanjay Leela Bansali) ಸಿನಿಮಾಗೆ ರಶ್ಮು ಸೆಲೆಕ್ಟ್ ಆಗಿದ್ದಾರೆ.
ಇತ್ತೀಚೆಗಷ್ಟೇ ಸಂಜಯ್ ಲೀಲಾ ಬನ್ಸಾಲಿ ಅವರ ಕಚೇರಿಗೆ ರಶ್ಮಿಕಾ ಭೇಟಿ ಕೊಟ್ಟಿದ್ದಾರೆ. ಸಿನಿಮಾ ಕುರಿತು ಈಗಾಗಲೇ ಒಂದು ಸುತ್ತಿನ ಮಾತುಕತೆ ಕೂಡ ಆಗಿದೆ. ಎಲ್ಲಾ ಓಕೆ ಆದರೆ ಸಿನಿಮಾ ಶುರುವಾಗೋದು ಪಕ್ಕಾ ಅಂತಿದ್ದಾರೆ ಬಾಲಿವುಡ್‌ನ ಸಿನಿಪಂಡಿತರು.
ಬಾಲಿವುಡ್‌ನ `ಮಿಷನ್ ಮಜ್ನು’ ಸಿನಿಮಾ ರಿಲೀಸ್ ಬೆನ್ನಲ್ಲೇ ರಶ್ಮಿಕಾ ಹೊಸ ಸಿನಿಮಾದ ಗುಡ್ ನ್ಯೂಸ್ ಕೇಳಿ ಫ್ಯಾನ್ಸ್ ಕೂಡ ಖುಷಿಪಟ್ಟಿದ್ದಾರೆ.