ಮಂಗಳವಾರ, ಮೇ 7, 2024
ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಎಸ್‍ವೈಗೆ ಸುಪ್ರೀಂಕೋರ್ಟ್‍ನಿಂದ ತಾತ್ಕಾಲಿಕ ರಿಲೀಫ್ – ವಿಜಯೇಂದ್ರಗೆ ಸಂಕಷ್ಟ

Twitter
Facebook
LinkedIn
WhatsApp
ಬಿಎಸ್‍ವೈಗೆ ಸುಪ್ರೀಂಕೋರ್ಟ್‍ನಿಂದ ತಾತ್ಕಾಲಿಕ ರಿಲೀಫ್ – ವಿಜಯೇಂದ್ರಗೆ ಸಂಕಷ್ಟ

ನವದೆಹಲಿ: ಕೊನದಾಸಪುರದಲ್ಲಿ ಬಿಡಿಎ ಫ್ಲಾಟ್‍ಗಳ (BDA Flat) ನಿರ್ಮಾಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (B. S. Yediyurappa) ವಿರುದ್ಧದ ತನಿಖೆಗೆ ಸುಪ್ರೀಂಕೋರ್ಟ್ (Supreme Court) ಮಧ್ಯಂತರ ತಡೆ ನೀಡಿದೆ. ಬಿ.ಎಸ್ ಯಡಿಯೂರಪ್ಪ ಜನಪ್ರತಿನಿಧಿಯಾಗಿರುವ ಹಿನ್ನೆಲೆಯಲ್ಲಿ ತಡೆ ನೀಡಲಾಗಿದೆ.

ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರ (Governer) ಪೂರ್ವಾನುಮತಿ ಇಲ್ಲದಿದ್ದರೂ ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ (Karnataka High Court) ಆದೇಶ ಮಾಡಿದೆ, ಈ ಆದೇಶಕ್ಕೆ ತಡೆ ನೀಡುವಂತೆ ಕೋರಿ ಬಿ.ಎಸ್ ಯಡಿಯೂರಪ್ಪ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು. ಇಂದು ನ್ಯಾ.ಡಿ.ವೈ ಚಂದ್ರಚೂಡ್ (Dhananjaya Yeshwant Chandrachud)ನೇತೃತ್ವದ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಬಿ.ಎಸ್ ಯಡಿಯೂರಪ್ಪ ಪರ ವಾದ ಮಂಡಿಸಿದ ಹಿರಿಯ ಮುಕುಲ್ ರೊಹಟಗಿ, ಜನಪ್ರತಿನಿಧಿಗಳ ವಿಷಯದಲ್ಲಿ ತನಿಖೆಗೆ ರಾಜ್ಯಪಾಲರ ಪೂರ್ವಾನುಮತಿ ಕಡ್ಡಾಯ, ಹೀಗಿದ್ದರು ಹೈಕೋರ್ಟ್ ತನಿಖೆಗೆ ಸೂಚಿಸಿದೆ ಎಂದು ವಾದಿಸಿದರು. ವಾದ ಆಲಿಸಿದ ಬಳಿಕ ಯಡಿಯೂರಪ್ಪ ವಿರುದ್ಧ ತನಿಖೆಗೆ ಪೀಠ ತಡೆ ನೀಡಿ, ಪ್ರತಿವಾದಿಗಳಿಗೆ ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ನೋಟಿಸ್ ಜಾರಿ ಮಾಡಿತು.

ಸಚಿವ ಎಸ್.ಟಿ. ಸೋಮಶೇಖರ್ (S.T. Somashekar) ಬಿಡಿಎ ಅಧ್ಯಕ್ಷ ಆಗಿದ್ದ ವೇಳೆ ಅಕ್ರಮ ನಡೆದಿದೆ ಎನ್ನಲಾಗಿದ್ದು, ಬಿಎಸ್‍ವೈ ಪುತ್ರ ಬಿ.ವೈ. ವಿಜಯೇಂದ್ರ (B. Y. Vijayendra) ಸೇರಿ ಒಟ್ಟು ಒಂಬತ್ತು ಮಂದಿ ಆರೋಪಿಗಳಾಗಿದ್ದಾರೆ. ಬಿಎಸ್‍ವೈ ಬಿಟ್ಟು ಉಳಿದವರ ವಿರುದ್ಧ ತನಿಖೆ ಮುಂದುವರಿಸಲು ಸುಪ್ರೀಂಕೋರ್ಟ್ ಸೂಚಿಸಿದೆ.

ಅಕ್ರಮಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಬಳಿಕ ತನಿಖೆಗೆ ಸೂಚಿಸಲು ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಬಳಿಕ ಹೈಕೋರ್ಟ್ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಸೂಚಿಸಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ