ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಎಸ್ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ: ಮೂವರ ಬಂಧನ

Twitter
Facebook
LinkedIn
WhatsApp
All about coconut tree 12

ಶಿವಮೊಗ್ಗ: ಪರಿಶಿಷ್ಟ ಜಾತಿಗೆ ಒಳಮೀಸಲಾತಿಯನ್ನು ವಿರೋಧಿಸಿ ಬಂಜಾರ ಸಮುದಾಯದವರು ಸೋಮವಾರ ನಡೆಸಿದ ಪ್ರತಿಭಟನೆ ವೇಳೆ, ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಂಗಳವಾರ ನಾಲ್ಕು ಎಫ್‌ಐಆರ್‌ಗಳನ್ನು ದಾಖಲಿಸಿ ಮೂವರನ್ನು ಬಂಧಿಸಿದ್ದಾರೆ.
ಬಂಧಿತರಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡ ರಾಘವೇಂದ್ರ ನಾಯ್ಕ ಕೂಡ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಈ ನಡುವೆ ರಾಜ್ಯ ಸರ್ಕಾರ ಒಳಮೀಸಲಾತಿ ನಿರ್ಧಾರ ಹಿಂಪಡೆಯಬೇಕು ಎಂದು ಆಗ್ರಹಿಸಿ ಬಂಜಾರ ಸಮುದಾಯದವರು ಮಂಗಳವಾರ ಕುಂಚೇನಹಳ್ಳಿ ಬಳಿ ಶಿವಮೊಗ್ಗ-ಶಿಕಾರಿಪುರ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ತೆಂಗಿನ ಕಾಯಿ ಸುಟ್ಟಿದ್ದರಿಂದ ಕೆಲಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತು.

ಸೋಮವಾರ ಪ್ರತಿಭಟನೆ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಮನೆಯ ಸುತ್ತ ಬಿಗಿ ಭದ್ರತೆ ಒದಗಿಸಲಾಗಿದೆ. ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಸೋಮವಾರದ ಘಟನೆ ದುರದೃಷ್ಟಕರ ಎಂದು ಬಣ್ಣಿಸಿದ್ದು, ಕೆಲವರ ತಪ್ಪು ತಿಳುವಳಿಕೆ ಮತ್ತು ಪ್ರಚೋದನೆಯಿಂದ ಇದು ಸಂಭವಿಸಿದೆ. ಯಡಿಯೂರಪ್ಪ ಅವರಿಗೆ ಬಂಜಾರರ ಬಗ್ಗೆ ವಿಶೇಷ ಪ್ರೀತಿ ಇದೆ. ಅವರ ಹಲವು ಬೇಡಿಕೆಗಳನ್ನು ಈಡೇರಿಸಿದ್ದಾರೆ ಎಂದರು.

 

ಸಂತ ಸೇವಾಲಾಲರ ಜನ್ಮಸ್ಥಳವಾದ ಸೂರಗೊಂಡನಕೊಪ್ಪದ ಅಭಿವೃದ್ಧಿಯಲ್ಲಿ ಯಡಿಯೂರಪ್ಪ ಅವರ ಪಾತ್ರ ದೊಡ್ಡದು. ಆದರೆ, ಸೋಮವಾರ ಕೆಲ ಪ್ರತಿಭಟನಾಕಾರರು ಯಡಿಯೂರಪ್ಪ ಅವರ ಮನೆಗೆ ಕಲ್ಲು ತೂರಿದರು. ಯಡಿಯೂರಪ್ಪ ಪ್ರತಿಭಟನಾಕಾರರ ವಿರುದ್ಧ ಕ್ರಮ ಕೈಗೊಳ್ಳದಂತೆ ಮನವಿ ಮಾಡಿದ್ದು,

ಸಮಾಜದ ಮುಖಂಡರ ಜತೆ ಮಾತನಾಡುವುದಾಗಿ ಹೇಳಿದರು. ಆದರೆ, ಪ್ರತಿಭಟನೆ ವೇಳೆ ಪೊಲೀಸರ ಮೇಲೆ ನಡೆದ ಹಲ್ಲೆಯಿಂದ ನನಗೆ ನೋವಾಗಿದೆ. ಜನರು ಕಾನೂನನ್ನು ಕೈಗೆ ತೆಗೆದುಕೊಂಡರು’ ಎಂದು ಜ್ಞಾನೇಂದ್ರ ಸುದ್ದಿಗಾರರಿಗೆ ತಿಳಿಸಿದರು.

ಈ ಹಿಂದೆ ನಾಲ್ಕೈದು ಪ್ರಕರಣಗಳಿರುವ ಕೆಲವರು ಈ ಘರ್ಷಣೆಯಲ್ಲಿ ಭಾಗಿಯಾಗಿ ಪ್ರತಿಭಟನಾಕಾರರನ್ನು ಪ್ರಚೋದಿಸಿದ್ದಾರೆ ಎಂದು ಆರೋಪಿಸಿದರು. 

ಸೋಮವಾರದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಎಸ್ಪಿ ಮಿಥುನ್ ಕುಮಾರ್ ಜಿಕೆ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ