ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಎಸ್ ಯಡಿಯೂರಪ್ಪ ರವರು ಜೈಲಿಗೆ ಹೋಗಲು ವಿಜಯೇಂದ್ರ ಅವರೇ ಕಾರಣ; ಪ್ರದೀಪ್ ಈಶ್ವರ್

Twitter
Facebook
LinkedIn
WhatsApp
ಬಿಎಸ್ ಯಡಿಯೂರಪ್ಪ ರವರು ಜೈಲಿಗೆ ಹೋಗಲು ವಿಜಯೇಂದ್ರ ಅವರೇ ಕಾರಣ; ಪ್ರದೀಪ್ ಈಶ್ವರ್

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೇರ್ ಸ್ಟೈಲ್ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿರುವ ವಿವಾದ ಸದ್ಯದಲ್ಲೇ ಶಮನವಾಗುವ ಸಾಧ್ಯತೆ ಇಲ್ಲ ಎಂದು ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಬುಧವಾರ ಹೇಳಿದ್ದಾರೆ.

30-40 ವರ್ಷಗಳ ಕಾಲ ಪಕ್ಷ ಕಟ್ಟಿದ ನಾಯಕರನ್ನು ಮೂಲೆಗುಂಪು ಮಾಡಿದ್ದೀರಿ. ಕೆಎಸ್ ಈಶ್ವರಪ್ಪ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮಕೈಗೊಳ್ಳುವ ಧೈರ್ಯ ನಿಮಗಿಲ್ಲ. ಬಿಎಸ್‌ವೈ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ, ಯಾರೋ ತಮ್ಮ ‘ಚೋಟಾ ಸಹಿ’ಯನ್ನು ನಕಲು ಮಾಡಿದ್ದಕ್ಕಾಗಿ ಅವರು ಜೈಲಿಗೆ ಹೋಗಬೇಕಾಯಿತು. ಆ ಚೋಟಾ ಸಹಿಯನ್ನು ಮಾಡಿದವರು ಯಾರು’ ಎಂದು ಪ್ರಶ್ನಿಸಿದರು.

ಮಧು ಅವರನ್ನು ಸಮರ್ಥಿಸಿಕೊಂಡ ಅವರು, ಸಚಿವರ ಹೇರ್ ಸ್ಟೈಲ್ ಅವರ ಆಯ್ಕೆಯಾಗಿದೆ. ಮಧು ಅವರು 12,000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ತೆಗೆದುಕೊಂಡಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಿದರು ಮತ್ತು ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಸುಧಾರಿಸಲು ಮೂರು ಪರೀಕ್ಷೆ ನಡೆಸುವ ಪ್ರಯತ್ನ ಮಾಡಿದ್ದಾರೆ ಎಂದು ಅವರು ಹೇಳಿದರು.

ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಸೋತರೆ, ಬಿಜೆಪಿಯ ಡಾ. ಕೆ ಸುಧಾಕರ್ ಒಂದೇ ಒಂದು ಮತವನ್ನು ಜಾಸ್ತಿ ಪಡೆದರೂ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದರು.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ರಕ್ಷಾ ರಾಮಯ್ಯ ವಿರುದ್ಧ ಸುಧಾಕರ್ ಕಣಕ್ಕಿಳಿದಿದ್ದಾರೆ. ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸುಧಾಕರ್ ಅವರನ್ನು ಪ್ರದೀಪ್ ಈಶ್ವರ್ ಸೋಲಿಸಿದ್ದರು.

ಚಿಕ್ಕಬಳ್ಳಾಪುರದಲ್ಲಿ ಪ್ರದೀಪ್ ಶೈಕ್ಷಣಿಕ ವಾತಾವರಣವನ್ನು ಹಾಳು ಮಾಡಿದ್ದಾರೆ ಎಂಬ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನಕಲಿ ಪ್ರಮಾಣಪತ್ರಗಳೊಂದಿಗೆ ಎಂಬಿಬಿಎಸ್ ಮುಗಿಸಿದವರು ನನ್ನ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು. ಕರ್ನಾಟಕದಲ್ಲಿ ಕಾಂಗ್ರೆಸ್ 19-21 ಲೋಕಸಭಾ ಸ್ಥಾನಗಳನ್ನು ಗೆಲ್ಲಲಿದೆ ಮತ್ತು ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಅವರು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist