ಮಂಗಳವಾರ, ಮೇ 21, 2024
2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!-ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ; ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.!-ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!-ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಎಸ್ ವೈ ರಾಜೀನಾಮೆ ಖಚಿತ?

Twitter
Facebook
LinkedIn
WhatsApp
ರಾಜ್ಯದ ಸಿಎಂ ಆಗ್ತಾರಾ ಸಿ.ಟಿ.ರವಿ ..?

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಜುಲೈ 25ರಂದು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದು ಬಹುತೇಕ ಖಚಿತವಾಗಿದೆ ಎನ್ನಲಾಗಿದೆ.ಈ ಬಗ್ಗೆ ಬಿರುಸಿನ ಮಾತುಕತೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಈಗಾಗಲೇ ಹಲವು ಮಠಾಧೀಶರು ಸಿಎಂ ಯಡಿಯೂರಪ್ಪನವರ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಅದರ ಬೆನ್ನಲ್ಲೇ ವಲಸಿಗ ಸಚಿವರಿಂದಲೂ ಈಗ ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ಹೆಚ್ಚಾಗಿದೆ.

ಒಂದೊಮ್ಮೆ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದರೆ ತಾವೂ ಕೂಡ ಸಚಿವ ಸ್ಥಾನ ಕಳೆದುಕೊಳ್ಳುವ ಆತಂಕ ಎದುರಾಗಿದ್ದು, ಈ ನಿಟ್ಟಿನಲ್ಲಿ ವಿಧಾನಸೌಧದಲ್ಲಿ ಸಚಿವ ಭೈರತಿ ಬಸವರಾಜ್ ಕೊಠಡಿಯಲ್ಲಿ ಪ್ರತ್ಯೇಕ ಸಭೆ ನಡೆಸಿದ 6 ವಲಸಿಗ ಸಚಿವರು, ರಾಜೀನಾಮೆ ಬಗ್ಗೆ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಸಭೆ ಬಳಿಕ ಸಚಿವರಾದ ಕೆ.ಸುಧಾಕರ್, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ಗೋಪಾಲಯ್ಯ, ಭೈರತಿ ಬಸವರಾಜ್, ಶಿವರಾಮ್ ಹೆಬ್ಬಾರ್ ಪ್ರತ್ಯೇಕವಾಗಿ ಏಕಮಾದರಿ ಪತ್ರಗಳನ್ನು ಹಿಡಿದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.

ಯಡಿಯೂರಪ್ಪನವರ ಮಾತನ್ನು ನಂಬಿ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ತೊರೆದು ಬಂದಿರುವ ವಲಸಿಗ ಸಚಿವರನ್ನು ಮುಂದಿಟ್ಟುಕೊಂಡು ಸಿಎಂ ಯಡಿಯೂರಪ್ಪ ಹೈಕಮಾಂಡ್ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಒಂದುವೇಳೆ ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ, ಬೇರೆಯವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ ವಲಸಿಗ ಸಚಿವರು ರಾಜೀನಾಮೆ ನೀಡುವ ಸಾಧ್ಯತೆಯೂ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಸಿಎಂ ರಾಜೀನಾಮೆ ಸುದ್ದಿ ವಿಚಾರದ ಬೆನ್ನಲ್ಲೇ ವಲಸಿಗ ಸಚಿವರ ನಡೆ ಇದೀಗ ಕುತೂಹಲ ಮೂಡಿಸಿದೆ.

ರಾಜ್ಯ ರಾಜಕೀಯದ ಈ ಬೆಳವಣಿಗೆ ಮಧ್ಯೆ ಕಾಂಗ್ರೆಸ್-ಜೆಡಿಎಸ್ ಕೂಡ ವಿವಿಧ ಚರ್ಚೆಗಳನ್ನು ನಡೆಸುತ್ತದೆ ಎಂದು ತಿಳಿದುಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು