ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿಗೆ ಗುಡ್ ಬೈ ಹೇಳಿ ಜನಾರ್ದನ ರೆಡ್ಡಿ ಪಕ್ಷ ಸೇರಿದ ಜಿಲ್ಲಾ ಉಪಾಧ್ಯಕ್ಷ!

Twitter
Facebook
LinkedIn
WhatsApp
dammuru shekhar 1

ಬಳ್ಳಾರಿ: ಮೊನ್ನೆಯಷ್ಟೇ ಅಂದ್ರೆ ಇದೇ ಡಿಸೆಂಬರ್ 25, 2022ರಂದು ಬಳ್ಳಾರಿ ಗಣಿ ಧಣಿ ಗಾಲಿ ಜನಾರ್ದನ ರೆಡ್ಡಿ ಅವರು ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಹೊಸ ಪಕ್ಷವನ್ನು ಸ್ಥಾಪನೆ ಮಾಡಿ, ಎಲ್ಲರ ಗಮನ ಸೆಳೆದಿದ್ದಾರೆ.  ಈಮೂಲಕ ರಾಜ್ಯ ಬಿಜೆಪಿಗೆ ಠಕ್ಕರ್ ಕೊಟ್ಟಿದ್ದಾರೆ. ಇದು ರಾಜ್ಯ ಬಿಜೆಪಿಗೆ ಶಾಕ್ ಕೊಟ್ಟಿದ್ದಕ್ಕಿಂತ ಕಡಿಮೆಯೇನಿಲ್ಲ. ಗಣಿ ಧಣಿ ಗಾಲಿ ಜನಾರ್ದನ ರೆಡ್ಡಿ, ಬಿಜೆಪಿಯಲ್ಲಿ ದುಡಿದವರು. ಆದರೆ ನಂತರದ ದಿನಗಳಲ್ಲಿ ನಡೆದ ಬೆಳವಣಿಗೆಗಳಿಂದಾಗಿ ಗಣಿ ಧಣಿ ಗಾಲಿ ಜನಾರ್ದನ ರೆಡ್ಡಿ ಬಿಜೆಪಿಗೆ ಗುಡ್ ಬೈ ಹೇಳಿದ್ದರು. ಗಾಲಿ ಜನಾರ್ದನ ರೆಡ್ಡಿ ಬಿಜೆಪಿ ತೊರೆದದ್ದು ಸಾಕಷ್ಟು ಸದ್ದು ಮಾಡಿತ್ತು.


ಬಿಜೆಪಿಗೆ ಗುಡ್ ಬೈ ಹೇಳಿದ ಗಾಲಿ ಜನಾರ್ದನ ರೆಡ್ಡಿ ಕಟ್ಟಾ ಬೆಂಬಲಿಗ ದಮ್ಮೂರು ಶೇಖರ್

ಈಗ ಹೊಸ ಪಕ್ಷ ಸ್ಥಾಪನೆ ಮಾಡಿರುವ ಗಾಲಿ ಜನಾರ್ದನ ರೆಡ್ಡಿ ಬಿಜೆಪಿಗೆ ಮತ್ತೊಂದು ಶಾಕ್ ಕೊಟ್ಟಿದ್ದಾರೆ. ಗಾಲಿ ಜನಾರ್ದನ ರೆಡ್ಡಿ ಅವರ ಕಟ್ಟಾ ಬೆಂಬಲಿಗರಾಗಿರುವ ದಮ್ಮೂರು ಶೇಖರ್ ಅವರು ಬಿಜೆಪಿ ತೊರೆದಿದ್ದಾರೆ.

ಬಳ್ಳಾರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ದಮ್ಮೂರು ಶೇಖರ್ ರಾಜೀನಾಮೆ

 

ಗಾಲಿ ಜನಾರ್ದನ ರೆಡ್ಡಿ ಅವರು ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಘೋಷಣೆ ನಂತರ ಬಿಜೆಪಿಯ ಮೊದಲ ವಿಕೆಟ್ ಪತನವಾಗಿದೆ. ಗಾಲಿ ಜನಾರ್ದನ ರೆಡ್ಡಿ ಅವರ ಕಟ್ಟಾ ಬೆಂಬಲಿಗ ದಮ್ಮೂರು ಶೇಖರ್, ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ದಮ್ಮೂರು ಶೇಖರ್ ಅವರು ಬಳ್ಳಾರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿದ್ದರು. ಈಗ ಬಿಜೆಪಿ ಪಕ್ಷ ತೊರೆಯುವ ಮೂಲಕ ದಮ್ಮೂರು ಶೇಖರ್, ರಾಜೀನಾಮೆ ನೀಡಿದ್ದು, ಸಾಕಷ್ಟು ಕುತೂಹಲ ಕೆರಳಿಸಿದೆ. ಗಾಲಿ ಜನಾರ್ದನ ರೆಡ್ಡಿ ಅವರ ಹೊಸ ಪಕ್ಷ ಸ್ಥಾಪನೆಯಾಗುತ್ತಿದ್ದಂತೆ ರಾಜಕೀಯದಲ್ಲಿ ಬಿರುಗಾಳಿ ಅಲೆ ಏಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.


ಅದರ ಮೊದಲು ಎಂಬಂತೆ ಈಗ ದಮ್ಮೂರು ಶೇಖರ್, ಬಿಜೆಪಿ ಪ್ರಾಥಮಿಕ ಸದಸ್ಯ ಸ್ಥಾನಕ್ಕೂ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಇವರು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರೂ ಸಹ ಆಗಿದ್ದರು.


ಈ ಬಗ್ಗೆ ದಮ್ಮೂರು ಶೇಖರ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಅನೇಕ ವರ್ಷಗಳಿಂದ ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಜವಾಬ್ದಾರಿ ಚೆನ್ನಾಗಿ ನಿಭಾಯಿಸಿದ್ದೇನೆ. ಪಕ್ಷ ಕಟ್ಟುವಲ್ಲಿ ಅಳಿಲು ಸೇವೆ ಸಲ್ಲಿಸಿದ್ದೇನೆ. ಇಷ್ಟು ವರ್ಷ ಪಕ್ಷದ ಸೇವೆಗೆ ಅವಕಾಶ ಮಾಡಿ ಕೊಟ್ಟಿದ್ದಕ್ಕೆ ಧನ್ಯವಾದ ಎಂದಿದ್ದಾರೆ.


ಗಾಲಿ ಜನಾರ್ದನ ರೆಡ್ಡಿ ಅವರನ್ನ ಬಿಜೆಪಿ ನಡೆಸಿಕೊಂಡ ರೀತಿ ಸರಿಯಿಲ್ಲ- ದಮ್ಮೂರು ಶೇಖರ್


ದಕ್ಷಿಣ ಭಾರತದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಗಾಲಿ ಜನಾರ್ದನ ರೆಡ್ಡಿ ಅವರು ಸಾಕಷ್ಟು ಶ್ರಮ ವಹಿಸಿದ್ದರು. ಬಿಜೆಪಿ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿಯಲು ಗಾಲಿ ಜನಾರ್ದನ ರೆಡ್ಡಿ ಅವರ ಪಾತ್ರ ಪ್ರಮುಖವಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಬಿಜೆಪಿ ಜನಾರ್ದನ ರೆಡ್ಡಿ ಅವರನ್ನ ನಡೆಸಿಕೊಂಡ ರೀತಿ ಸ್ವಲ್ಪವೂ ಸರಿಯಿಲ್ಲ.

ಹಾಗಾಗಿ ಇದೇ ಕಾರಣದಿಂದ ತಾವು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದು, ಪಕ್ಷವನ್ನು ತೊರೆಯುತ್ತಿರುವುದಾಗಿ ದಮ್ಮೂರು ಶೇಖರ್ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ರಾಜೀನಾಮೆ ಪತ್ರವನ್ನು ಈಗಾಗಲೇ ಬಳ್ಳಾರಿ ಜಿಲ್ಲಾಧ್ಯಕ್ಷರಿಗೆ ಸಲ್ಲಿಕೆ ಮಾಡಿದ್ದಾರೆ.

ಮೊಟ್ಟ ಮೊದಲ ಬಾರಿಗೆ ಕುರುಬ ಸಮಾಜಕ್ಕಾಗಿ ಹೋರಾಡಿ ನನ್ನನ್ನು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ (ಬುಡಾ) ಅಧ್ಯಕ್ಷನನ್ನಾಗಿಸಿ ಸೇವೆ ಮಾಡಲು ಅವಕಾಶ ಕಲ್ಪಿಸಿದ್ದ ಜನಾರ್ದನ ರೆಡ್ಡಿ ಅವರನ್ನು ಕೃತಜ್ಞತಾ ಭಾವದಿಂದ ಸ್ಮರಿಸುತ್ತೇನೆ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ