ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿಗೆ ಮತ್ತೆ ಅಧಿಕಾರ – ಬಿ.ಎಸ್ ಯಡಿಯೂರಪ್ಪ ವಿಶ್ವಾಸ

Twitter
Facebook
LinkedIn
WhatsApp
ಬಿಜೆಪಿಗೆ ಮತ್ತೆ ಅಧಿಕಾರ – ಬಿ.ಎಸ್ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಜನರ ಒಲವು ಬಿಜೆಪಿ (BJP) ಕಡೆಗಿದೆ. ಬಿಜೆಪಿ ಮತ್ತೆ ಅಧಿಕಾರ ಪಡೆಯುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್ ಯಡಿಯೂರಪ್ಪ (BS Yediyurappa) ಅವರು ವಿಶ್ವಾಸದಿಂದ ನುಡಿದಿದ್ದಾರೆ.

ನಗರದ ದಿ ಕ್ಯಾಪಿಟಲ್ ಹೋಟೆಲ್‌ನಲ್ಲಿ ಬುಧವಾರ ಮಂಡಲ ಪ್ರಭಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಶ್ರೇಷ್ಠ ನಾಯಕತ್ವ ನಮ್ಮ ಜೊತೆಗಿದೆ. ಎಂಕ, ನಾಣಿ ನಾಯಕತ್ವವು ಜೊತೆಗಿರುವ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯ ಇಲ್ಲ ಎಂದು ತಿಳಿಸಿದರು.

ವಿಶ್ವಾಸಾರ್ಹ ಮತ್ತು ಕ್ರಿಯಾಶೀಲ ಕಾರ್ಯಕರ್ತರ ದೊಡ್ಡ ಪಡೆ ನಮ್ಮ ಪಕ್ಷದ ಜೊತೆ ಇದೆ. ನಮ್ಮದು ಕಾರ್ಯಕರ್ತರ ಪಕ್ಷ. ಮೋದಿಜಿ ಸರ್ಕಾರದ 8-9 ವರ್ಷಗಳ ಸಾಧನೆ, ಜನಪರ ಆಡಳಿತವನ್ನು ಜನರಿಗೆ ತಿಳಿಸಬೇಕು. ಮೋದಿಜಿ ನಮ್ಮ ಪಕ್ಷದ ಪ್ರಮುಖ ಆಸ್ತಿ ಎಂದು ವಿವರಿಸಿದರು.

ಜನ್ ಧನ್, ಆಯುಷ್ಮಾನ್, ಶೌಚಾಲಯ ನಿರ್ಮಾಣ, ಮನೆಮನೆಗೆ ನಳ್ಳಿನೀರು ಸೇರಿ ಹಲವು ಯೋಜನೆ ಜಾರಿಯನ್ನು ಉಲ್ಲೇಖಿಸಿ, ಪ್ರತಿ ಮನೆಯಲ್ಲೂ ಒಂದಿಲ್ಲೊಂದು ಫಲಾನುಭವಿ ಇದ್ದಾರೆ. ಅಂತಹ ಫಲಾನುಭವಿಗಳನ್ನು ಗುರುತಿಸಿ ತಲುಪುವ ಕಾರ್ಯ ನಮ್ಮಿಂದ ಆಗಬೇಕು. ಪಕ್ಷದ ಬೆನ್ನೆಲುಬಿನಂತೆ ಕೆಲಸ ಮಾಡಬೇಕು. ಸೀಟ್ ಹಂಚಿಕೆ ಬಳಿಕ ಸಣ್ಣಪುಟ್ಟ ಅಸಮಾಧಾನ ಇದ್ದರೆ ಅದನ್ನು ಶಮನಗೊಳಿಸಬೇಕೆಂದು ತಿಳಿಸಿದರು.

ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್‌ನವರು ತಿರುಕನ ಕನಸು ಕಾಣುತ್ತಿದ್ದಾರೆ. ನಾಯಕತ್ವ ಇಲ್ಲದೆ ಪರದಾಡುವ ಕಾಂಗ್ರೆಸ್‌ಗೆ ಭವಿಷ್ಯ ಇಲ್ಲ ಎಂದು ಟೀಕಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಮೋದಿ ಮತ್ತು ಅವರ ಜನಪರ ಯೋಜನೆಗಳ ಕುರಿತು ಮಾತನಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ಪ್ರಮುಖರು ಭಾಗವಹಿಸಿದ್ದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ