ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿಗೆ ಮನೆ ಬಾಗಿಲು ಮುಚ್ಚಿದ ರೈತರು: ಅಖಿಲೇಶ್

Twitter
Facebook
LinkedIn
WhatsApp
ಬಿಜೆಪಿಗೆ ಮನೆ ಬಾಗಿಲು ಮುಚ್ಚಿದ ರೈತರು: ಅಖಿಲೇಶ್

ಲಖನೌ: ಉತ್ತರ ಪ್ರದೇಶದಲ್ಲಿ ಚುನಾವಣಾ ಕಾವು ದಿನ ದಿನಕ್ಕೆ ರಂಗು ಪಡೆಯುತ್ತಿದ್ದು, ರಾಜಕೀಯ ನಾಯಕರ ವಾಕ್ಸಮರ ಕೂಡ ಹೊಸ ಹೊಸ ರೂಪದಲ್ಲಿ ವ್ಯಕ್ತವಾಗುತ್ತಿದೆ. ಸಮಾಜವಾದಿ ಪಕ್ಷದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಬಿಜೆಪಿ ವಿರುದ್ಧ ಹೊಸದಾಗಿ ಟೀಕಾಪ್ರಹಾರ ಮಾಡಿದ್ದಾರೆ. ರೈತರು ಬಿಜೆಪಿಗೆ ಮನೆ ಬಾಗಿಲನ್ನು ಮುಚ್ಚಿದ್ದಾರೆ. ತಮ್ಮ ಹೆಲಿಕಾಪ್ಟರ್ ಹಾರಾಟಕ್ಕೆ ಅನುಮತಿ ನೀಡದೆ ಪ್ರಚಾರ ಕಾರ್ಯಕ್ಕೆ ಬಿಜೆಪಿ ಸರ್ಕಾರ ತಡೆಯುಂಟು ಮಾಡಿದೆ ಎಂದು ಅಖಿಲೇಶ್ ಶುಕ್ರವಾರ ಆರೋಪಿಸಿದ್ದರು.
ರೈತರ ಆದಾಯವನ್ನು ದ್ವಿಗುಣಗೊಳಿಸುವ ಭವರಸೆಯನ್ನು ಬಿಜೆಪಿ ಮರೆತಿದೆ. ಯುವಕರಿಗೆ ಉದ್ಯೋಗಾವಕಾಶದ ಸುರಿಮಳೆಯನ್ನೆ ಸೃಷ್ಟಿಸುವುದಾಗಿ ಹೇಳಿತ್ತು. ಎಷ್ಟು ಜನರಿಗೆ ಉದ್ಯೋಗ ಸಿಕ್ಕಿದೆ ಎಂದು ಪ್ರಶ್ನಿಸಿದ್ದಾರೆ.
ಉತ್ತರ ಪ್ರದೇಶದ ಪಶ್ಚಿಮ ಭಾಗದ ಮುಜಾಫರ್‌ನಗರದಲ್ಲಿ ಬಸ್ ಯಾತ್ರೆ ನಡೆಸಿದ ಅವರು, ಹಿಂದಿನ ಸರ್ಕಾರದಲ್ಲಿ ಕಾನೂನು-ಸುವ್ಯವಸ್ಥೆ ಮುರಿದು ಬಿದ್ದಿತ್ತು ಎಂದು ಬಿಜೆಪಿಯವರು ಟೀಕಿಸುತ್ತಾರೆ. ಆದರೆ, ರೈತರ ಮೇಲೆ ಕಾರು ಹರಿಸಲಾಗುತ್ತದೆಂದು ಯಾರಾದರೂ ಭಾವಿಸಿದ್ದರೆ ಎಂದು ಅಖಿಲೇಶ್ ಮರುಪ್ರಶ್ನೆ ಹಾಕಿದ್ದಾರೆ.
ಸಮಾಜವಾದಿ ಪಕ್ಷ ಅಧಿಕಾರದಲ್ಲಿದ್ದಾಗ ಪೊಲೀಸ್ ವ್ಯವಸ್ಥೆ ಅಚ್ಚುಕಟ್ಟಾಗಿತ್ತು. ನೊಂದವರಿಗೆ ತಕ್ಷಣ ಸ್ಪಂದನೆ ಸಿಗುತ್ತಿತ್ತು. ಯಾವ ಪಕ್ಷದ ಸರ್ಕಾರದಲ್ಲಿ ಪೊಲೀಸರಿಗೆ ಹೆಚ್ಚು ಸ್ವಾತಂತ್ರ್ಯ ಇತ್ತು ಎಂಬುದನ್ನು ಹಿರಿಯ ಅಧಿಕಾರಿಗಳನ್ನು ಕೇಳಿ ನೋಡಲಿ. ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದ ಪೊಲೀಸ್ ವ್ಯವಸ್ಥೆ, ಕಾನೂನು ಸುವ್ಯವಸ್ಥೆ ಸುಧಾರಣೆಗೆ ಜನರಿಂದ ಸಲಹೆ ಪಡೆಯಲಾಗುವುದು ಎಂದಿದ್ದಾರೆ.
ಯೋಗಿ ಆದಿತ್ಯನಾಥ್ ಆಡಳಿತದಲ್ಲಿ ಹಥರಾಸ್ನಲ್ಲಿ ಅತ್ಯಾಚಾರ, ಗೋರಖಪುರದಲ್ಲಿ ಉದ್ಯಮಿಯ ಕೊಲೆ, ಪ್ರಯಾಗ್‌ರಾಜ್ ನಲ್ಲಿ ರೈತರು, ಯುವಕರ ಮೇಲೆ ಸುಳ್ಳು ಕೇಸ್ ದಾಖಲು ಹೀಗೆ ಅನೇಕ ಪ್ರಕರಣಗಳು ನಡೆದಿವೆ ಎಂದು ದೂರಿದ್ದಾರೆ.
ಸಮಾಜವಾದಿ ಪಕ್ಷದಲ್ಲಿ ಎರಡೂವರೆ ಜನರು ಸರ್ಕಾರ ನಡೆಸುತ್ತಾರೆಂಬ ಬಿಜೆಪಿ ಆರೋಪವನ್ನು ಬಾಲಿಶವೆಂದು ತಳ್ಳಿಹಾಕಿದ ಅವರು, ಬಿಜೆಪಿ ರಾಜಕೀಯ ವಿರೋಧಿಗಳನ್ನು ಮುಗಿಸಲು ಅನೇಕ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದೆ ಎಂದು ಅಖಿಲೇಶ್ ಯಾದವ್ ಆಪಾದಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು