ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಜೆಪಿ ಮುಖಂಡನ ಪುತ್ರಿಯ ವಿವಾಹ ಮುಸ್ಲಿಂ ಯುವಕನ ಜೊತೆ : ವೈರಲ್ ಆದ ಆಮಂತ್ರಣ ಪತ್ರಿಕೆ!

Twitter
Facebook
LinkedIn
WhatsApp
indian wedding photography groom bride hands indian wedding photography groom bride hands 143247939

ಉತ್ತರಾಖಂಡ್:‌ ಬಿಜೆಪಿ ಮುಖಂಡರೊಬ್ಬರ ಪುತ್ರಿಯ ವಿವಾಹ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅದಕ್ಕೆ ಕಾರಣ ಉತ್ತರಾಖಂಡ್‌ ನ ಪೌರಿ ಪ್ರದೇಶದ ಬಿಜೆಪಿ ಮುಖಂಡ ಯಶ್‌ ಪಾಲ್‌ ಬೇನಾಮ್‌ ಪುತ್ರಿ ಮುಸ್ಲಿಂ ಯುವಕನ ಜೊತೆ ಹಸೆಮಣೆ ಏರಲು ಸಜ್ಜಾಗಿರುವುದು!‌

ಬೇನಾಮ್‌ ಪುತ್ರಿಯ ಮದುವೆ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದಿದ್ದು, ಬಿಜೆಪಿ ಬೆಂಬಲಿಗರು ಹಾಗೂ ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹಿಂದುತ್ವವಾದಿಗಳು ಮಾಜಿ ಶಾಸಕ ಬೇನಾಮ್‌ ಅವರ ಇಬ್ಬಗೆ ನೀತಿಯ ಕುರಿತು ಟ್ರೋಲ್‌ ಮಾಡಿದ್ದಾರೆ. ಬೇರೆಯವರು ಮುಸ್ಲಿಂ ಯುವಕನನ್ನು ವಿವಾಹವಾದರೆ ಲವ್‌ ಜಿಹಾದ್‌ ಎಂದು ಆರೋಪಿಸುತ್ತಿರುವ ಬಗ್ಗೆ ಜಾಲತಾಣದಲ್ಲಿ ಟೀಕೆಯನ್ನು ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

“ದ ಕೇರಳ ಸ್ಟೋರಿ” ಸಿನಿಮಾಕ್ಕೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತೆರಿಗೆ ವಿನಾಯ್ತಿ ನೀಡಲಾಗಿದ್ದು, ಇಲ್ಲಿ ಬಿಜೆಪಿ ಮುಖಂಡರೊಬ್ಬರ ಮಗಳು ಮುಸ್ಲಿಂ ಯುವಕನ ಜೊತೆ ವಿವಾಹವಾಗುತ್ತಿದ್ದಾರೆ. ಬಿಜೆಪಿಯ ಇಂತಹ ಇಬ್ಬಗೆಯ ನೀತಿಗಳು ಪಕ್ಷದ ಕಾರ್ಯಕರ್ತರ ನೈತಿಕ ಸ್ಥೈರ್ಯ ಕುಗ್ಗಿಸಲಿದೆ ಎಂದು ಫೇಸ್‌ ಬುಕ್‌ ಬಳಕೆದಾರರೊಬ್ಬರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಮುಸ್ಲಿಂ ಯುವಕರು ಹಿಂದೂ ಯುವತಿಯನ್ನು ವಿವಾಹವಾಗುವ ಮೂಲಕ ಮತಾಂತರಗೊಳಿಸುತ್ತಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಹಾಗೂ ಬಲ ಪಂಥೀಯ ಸಂಘಟನೆಯ ಕಾರ್ಯಕರ್ತರು ಇದೊಂದು ಲವ್‌ ಜಿಹಾದ್‌ ಎಂದು ಕರೆದಿದ್ದರು.

ಭಾರತದಲ್ಲಿ ಮತಾಂತರದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಆದರೆ ಬಿಜೆಪಿಯ ಮುಖಂಡರು ತಮ್ಮ ಮಗಳನ್ನು ಮುಸ್ಲಿಂ ಯುವಕನಿಗೆ ಧಾರೆ ಎರೆಯುತ್ತಿದ್ದಾರೆ. ಈ ಬಗ್ಗೆ ವಿಶ್ವ ಹಿಂದೂ ಪರಿಷತ್‌ , ಬಜರಂಗ ದಳ ವಿರೋಧಿಸಬೇಕಾಗಿದೆ ಎಂದು ಪೌರಿ ದೇವಾಲಯ ಆಡಳಿತ ಮಂಡಳಿಯ ಸದಸ್ಯರೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.

ಮೇ 28ರಂದು ಬೇನಾಮಿ ಪುತ್ರಿಯ ವಿವಾಹ ನಡೆಯಲಿದೆ. ಈ ಮದುವೆ ಕಾರ್ಯಕ್ರಮಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್‌ ಮುಖಂಡರನ್ನು ಆಹ್ವಾನಿಸಲಾಗಿದೆ ಎಂದು ವರದಿ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist