ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿ ಸಭೆಗೆ ಬಂದ ಸುಮಲತಾಗೆ ಕೇಸರಿ ಶಾಲು ನೀಡಿ ಸ್ವಾಗತ

Twitter
Facebook
LinkedIn
WhatsApp
MV5BZTMxMzkyZTItODc3ZS00MDU4LTliOWUtMDI2YThlOGRjOTQ4XkEyXkFqcGdeQXVyMjkxNzQ1NDI@. V1 FMjpg UX1000

ಮಂಡ್ಯ(ಮಾ.04):  ಬಿಜೆಪಿ ಪಾಳಯದಲ್ಲಿ ಸಂಸದೆ ಸುಮಲತಾ ಪ್ರತ್ಯಕ್ಷ, ಕೇಸರಿ ಶಾಲು ನೀಡಿ ಸ್ವಾಭಿಮಾನಿ ಸಂಸದೆಗೆ ಕೇಸರಿ ನಾಯಕರಿಂದ ಸ್ವಾಗತ, ಕೇಸರಿ ಶಾಲು ಧರಿಸದೆ ಕೈಯಲ್ಲಿ ಹಿಡಿದ ಸಂಸದೆ, ಮೋದಿ ಭೇಟಿ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನಡೆಸಿದ ಪೂರ್ವಭಾವಿ ಸಭೆಯಲ್ಲಿ ಭಾಗಿ..!

ಮಾ.12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆಗೆ ಮಂಡ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಿದ್ಧತೆಗಳ ಪರಿಶೀಲನೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಶುಕ್ರವಾರ ಮಂಡ್ಯಕ್ಕೆ ಆಗಮಿಸಿದ್ದರು. ಸಚಿವರಾದ ಕೆ.ಸಿ.ನಾರಾಯಣಗೌಡ, ಕೆ.ಗೋಪಾಲಯ್ಯ, ಸಂಸದೆ ಸುಮಲತಾ, ಮೈಸೂರು ಸಂಸದ ಪ್ರತಾಪ್‌ಸಿಂಹ ಸಾಥ್‌ ನೀಡಿದ್ದರು.

 

ಪಕ್ಷ ಸೇರ್ಪಡೆ ಬಗ್ಗೆ ಜನಾಭಿಪ್ರಾಯ ಕೇಳುತ್ತೇನೆ. ಯಾವ ಪಕ್ಷ ಸೇರಬೇಕೆಂಬ ಬಗ್ಗೆ ನಂತರ ನಿರ್ಧರಿಸುತ್ತೇನೆ ಎಂದು ಹೇಳುವ ಸಂಸದೆ ಸುಮಲತಾ ಅಂಬರೀಶ್‌ ಶುಕ್ರವಾರ ಕೇಸರಿ ನಾಯಕರೊಂದಿಗೆ ಕಾಣಿಸಿಕೊಳ್ಳುವುದರೊಂದಿಗೆ ಎಲ್ಲರಲ್ಲೂ ಕುತೂಹಲ ಮೂಡುವಂತೆ ಮಾಡಿದರು.

ಕಾರ್ಯಕ್ರಮ ಕುರಿತು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ನಡೆಸಿದ ಅಧಿಕಾರಿಗಳ ಸಭೆ, ಕಾರ್ಯಕರ್ತರ ಸಭೆಯಲ್ಲೂ ಸಂಸದೆ ಸುಮಲತಾ ಭಾಗವಹಿಸಿದ್ದು ವಿಶೇಷವಾಗಿತ್ತು. ಬಿಜೆಪಿ ಸಭೆಯಲ್ಲಿ ಭಾಗಿಯಾದ ಸಂಸದೆ ಸುಮಲತಾ ಅವರಿಗೆ ಕಾರ್ಯಕರ್ತರು ಕೇಸರಿ ಟವಲ್‌ ನೀಡಿ ಸ್ವಾಗತಿಸಿದರು. ಟವಲ್‌ನ್ನು ಮೈಮೇಲೆ ಧರಿಸದೆ ಕೈಯಲ್ಲೇ ಹಿಡಿದು ಕುಳಿತರು. ಪಕ್ಷೇತರ ಸಂಸದೆಯಾಗಿರುವ ಸುಮಲತಾ ಬಿಜೆಪಿ ಸೇರುವ ಬಗ್ಗೆ ಗುಸು ಗುಸು ಚರ್ಚೆಗೆ ಇಂದಿನ ಅವರ ನಡೆ ಸಾಕಷ್ಟು ಪುಷ್ಠಿಯನ್ನು ನೀಡುವಂತೆ ಮಾಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ