ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿ ಸರ್ಕಾರದ ಹಗರಣ ಸದನದಲ್ಲಿ ಬಿಚ್ಚಿಡುತ್ತೇನೆ: ಕುಮಾರಸ್ವಾಮಿ

Twitter
Facebook
LinkedIn
WhatsApp
ಬಿಜೆಪಿ ಸರ್ಕಾರದ ಹಗರಣ ಸದನದಲ್ಲಿ ಬಿಚ್ಚಿಡುತ್ತೇನೆ: ಕುಮಾರಸ್ವಾಮಿ

ಬೆಂಗಳೂರು: ಸಾವಿರಾರು ಕೋಟಿ ರೂ. ಬೆಲೆ ಬಾಳುವ ಸರ್ಕಾರದ ಆಸ್ತಿಯನ್ನು ನುಂಗುವ ಮಹಾ ಹುನ್ನಾರವನ್ನು ಬಿಜೆಪಿ ಮಾಡುತ್ತಿದೆ. ಸದನಲ್ಲಿ ಹಗರಣ ಬಿಚ್ಚಿಡುತ್ತೇನೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಭ್ರಷ್ಟಾಚಾರದ ಬಗ್ಗೆ ದಾಖಲೆಗಳನ್ನು ಕೊಡಿ ಎಂದು ಪದೇಪದೇ ನನ್ನನ್ನು ಕೆಣಕಿದ್ದಾರೆ. ಸಾವಿರಾರು ಕೋಟಿ ರೂ. ಬೆಲೆ ಬಾಳುವ ಸರ್ಕಾರಿ ಆಸ್ತಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ಹೊರಟ ಅತಿದೊಡ್ಡ ಅಕ್ರಮದ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ತಿಳಿಸಿದರು.

ಸದನದಲ್ಲಿ ಈ ವಿಚಾರದ ಬಗ್ಗೆ ಚರ್ಚೆ ಮಾಡಲು ಕಾಂಗ್ರೆಸ್ ಪಕ್ಷ ಸಹಕರಿಸಬೇಕು. ಈ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜನರಿಗೆ ಗೊತ್ತಾಗಬೇಕು. ನಾನು ಈ ದಾಖಲೆಗಳನ್ನು ಬಿಡುಗಡೆ ಮಾಡುತ್ತಿರುವುದು ಈ ಸರ್ಕಾರದ ಹಗರಣಗಳ ಒಂದು ಸ್ಯಾಂಪಲ್ ಮಾತ್ರ. ಇದನ್ನು ಬಿಜೆಪಿಯವರು ಅರಗಿಸಿಕೊಳ್ಳಲಿ ಸಾಕು ಎಂದು ಕುಮಾರಸ್ವಾಮಿ ಗುಡುಗಿದರು. 
ಇತ್ತೀಚೆಗೆ ನಾನು ಸದನದ ಕಲಾಪದಲ್ಲಿ ದೊಡ್ಡ ಮಟ್ಟದ ಚರ್ಚೆಯಲ್ಲಿ ಪಾಲ್ಗೊಂಡಿಲ್ಲ. ಯಾವುದಾದರೂ ಮುಖ್ಯ ವಿಚಾರ ಇದ್ದಾಗ ಭಾಗಿಯಾಗಿದ್ದೇನೆ. ನಾನು ಭಾಗಿಯಾದಾಗ ದಾಖಲೆ ಸಮೇತ ಮಾತನಾಡಿದ್ದೇನೆ. ಒಂದಿಷ್ಟು ಜನ ಹೇಳುತ್ತಿದ್ದಾರೆ. ಸದನದಲ್ಲಿ ಕುಮಾರಸ್ವಾಮಿ ಏನು ಮಾತಾಡಿ ಬಿಟ್ಟಾರು ಅಂತ. ಸುಖಾಸುಮ್ಮನೆ ಯಾರದೋ ಬಳಿ ನಾನು ಪಾಠ ಹೇಳಿಸಿಕೊಳ್ಳಬೇಕಿದೆ. ಒಂದಿಷ್ಟು ದಾಖಲೆಗಳನ್ನು ನಾನು ಸ್ಯಾಂಪಲ್ ಆಗಿ ಬಹಿರಂಗ ಮಾಡುತ್ತೇನೆ. ಇದನ್ನು ಒಂದು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇನೆ. ಸಾರ್ವಜನಿಕ ಆಸ್ತಿಯನ್ನು ಹಣಕ್ಕೋಸ್ಕರ ಮಾರಾಟಕ್ಕೆ ಇಡುತ್ತಿದ್ದಾರೆ. ಇದಕ್ಕೆ ತಡೆ ಹಾಕಬೇಕಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಭ್ರಷ್ಟಾಚಾರ ಯಾವ ರೀತಿ ಇದೆ ಎನ್ನುವುದು ನಾಡಿನ ಜನತೆಗೆ ಹಾಗೂ ಪ್ರಧಾನಿ ಮೋದಿ ಅವರಿಗೂ ಗೊತ್ತಾಗಲಿ. ಅದಕ್ಕೇ ಎಲ್ಲದಕ್ಕೂ ದಾಖಲೆ ಇಟ್ಟು ಮಾತನಾಡುತ್ತೇನೆ. ಇದು ಭಾರೀ ಹಗರಣ. ಸರ್ಕಾರಕ್ಕೆ ಬರಬೇಕಾದ 8-10 ಸಾವಿರ ಕೋಟಿ ರೂ. ಕಬಳಿಸುವ ಹುನ್ನಾರ ನಡೆದಿದೆ. 1957ನೇ ಇಸವಿಯಿಂದ ವಿಷಯ ಇದೆ. ಈ ಸರ್ಕಾರಿ ಆಸ್ತಿಗೆ 2008-09ರಲ್ಲೇ 5 ಸಾವಿರ ಕೋಟಿ ಅಂತ ಅಂದಾಜು ಕಟ್ಟಿದ್ದರು. ಆದರೆ, ಈ ಬಗ್ಗೆ ಸರ್ಕಾರ ಮಾಡಿರುವ ಆದೇಶ ದಿಗ್ಭ್ರಮೆ ಉಂಟು ಮಾಡುವ ರೀತಿಯಲ್ಲಿದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ