ಕುಂದಾಪುರ : ಕರಾವಳಿ ಜಿಲ್ಲೆಯ ರಾಜಕಾರಣದಲ್ಲಿ ಅಪರೂಪದ ರಾಜಕೀಯ ಚಾಣಾಕ್ಷ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ (ಎ.ಜಿ. ಕೊಡ್ಗಿ) ಅವರು ಅಸೌಖ್ಯದಿಂದ ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ತಾಲೂಕಿನ ಕೃಷಿಕ ಕುಟುಂಬದಲ್ಲಿ 1929ರ ಅ.1ರಂದು ಜನಿಸಿದ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ ಅವರು ಸ್ವಾತಂತ್ರ್ಯ ಹೋರಾಟದ ಛಾಯೆಯಲ್ಲಿ ಬೆಳೆದವರು. ತಂದೆ ಕೃಷ್ಣರಾಯ ಕೊಡ್ಗಿ ಸ್ವಾತಂತ್ರ್ಯ ಹೋರಾಟಗಾರರು. ಕಾನೂನು ಪದವಿ ಪಡೆದ ಕೊಡ್ಗಿ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನಿಟ್ಟೂರು ಶ್ರೀನಿವಾಸ ರಾವ್ ಅವರೊಂದಿಗೆ ಸ್ವಲ್ಪ ಸಮಯ ವಕೀಲರಾಗಿ ಕೆಲಸ ನಿರ್ವಹಿಸಿದರು. ಬಳಿಕ ಕೃಷಿಯಲ್ಲಿಯೇ ತಮ್ಮನ್ನು ಪರಿಪೂರ್ಣವಾಗಿ ತೊಡಗಿಸಿಕೊಂಡವರು. ಸಹಕಾರಿ, ಕೃಷಿ, ರಾಜಕಾರಣದಲ್ಲಿ ಗುರುತಿಸಿಕೊಂಡ ಕೊಡ್ಗಿ ಒಂದೊಂದೇ ಮೆಟ್ಟಿಲೇರಿದರು.
ತಾಲೂಕು ಬೋರ್ಡ್ ಅಧ್ಯಕ್ಷ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು ಎಂಟು ವರ್ಷ ತಾಲೂಕು ಬೋರ್ಡ್ ಸದಸ್ಯರಾಗಿದ್ದರು. ಮಂಗಳೂರು ಜಿಲ್ಲಾ ಪರಿಷತ್ ಸದಸ್ಯ, ಆರ್ಥಿಕ ಸಮಿತಿ ಸದಸ್ಯ, 1972-83ರ ತನಕ ಬೈಂದೂರು ಶಾಸಕ, 2006-08ರ ತನಕ ರಾಜ್ಯ ಮೂರನೇ ಹಣಕಾಸು ಆಯೋಗ ಅಧ್ಯಕ್ಷ, ಬಳಿಕ ಅದರ ಕಾರ್ಯಪಡೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಛಾತಿ ಮೂಡಿಸಿರುವ ಕೊಡ್ಗಿ, ಶಂಕರನಾರಾಯಣ ಸಿಎ ಬ್ಯಾಂಕ್ ಅಧ್ಯಕ್ಷ, ಎಪಿಎಂಪಿ ಅಧ್ಯಕ್ಷ, ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಸ್ಕ್ಯಾಮ್ಸ್ ನಿರ್ದೇಶಕ, ಮಂಗಳೂರು ಎಪಿಎಂಸಿ ಅಧ್ಯಕ್ಷ ಅಲ್ಲದೆ ರಾಜ್ಯ ಮಾರ್ಕೆಟಿಂಗ್ ಬೋರ್ಡ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. 1982-1990ರ ತನಕ ಕರ್ಣಾಟಕ ಬ್ಯಾಂಕ್ ನಿರ್ದೇಶಕರಾಗಿ ಸೇವೆ ನೀಡಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist