ಮಂಗಳವಾರ, ಏಪ್ರಿಲ್ 30, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಟ್‌ ಕಾಯಿನ್‌‌ ದಂಧೆ ಬಗ್ಗೆ ಹಂತಹಂತವಾಗಿ ದಾಖಲೆ ಬಿಡುಗಡೆ ಮಾಡಿ- ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ

Twitter
Facebook
LinkedIn
WhatsApp
ಬಿಟ್‌ ಕಾಯಿನ್‌‌ ದಂಧೆ ಬಗ್ಗೆ ಹಂತಹಂತವಾಗಿ ದಾಖಲೆ ಬಿಡುಗಡೆ ಮಾಡಿ- ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ

ಬೆಂಗಳೂರು: ಬಿಟ್‌ ಕಾಯಿನ್‌‌ ಹಗರಣದ ಬಗ್ಗೆ ತಾರ್ಕಿಕ ಅಂತ್ಯ ಕಾಣುವವರೆಗೂ ಬಿಡಬೇಡಿ. ದಾಖಲೆಗಳನ್ನು ಹಂತಹಂತವಾಗಿ ಬಿಡುಗಡೆ ಮಾಡಿ, ಈ ಬಗ್ಗೆ ಜನರಿಗೆ ಸಂಪೂರ್ಣವಾದ ಮಾಹಿತಿ ನೀಡಿ” ಎಂದು ಹೈಕಮಾಂಡ್‌ ಸೂಚನೆ ನೀಡಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಹಾಗೂ ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್‍ಸಿಂಗ್ ಸುರ್ಜೆವಾಲಾ ಅವರು ಸದಸ್ಯತ್ವ ನೋಂದಣಿ ಅಭಿಯಾನದ ಬಳಿಕ ರಾಜ್ಯ ನಾಯಕರೊಂದಿಗೆ ಪ್ರತ್ಯೇಕವಾದ ಸಭೆ ನಡೆಸಿದ್ದು, ಬಿಟ್‌ ಕಾಯಿನ್‌ ದಂಧೆ ಕುರಿತು ಮಾಹಿತಿ ವಿನಿಮಯ ಮಾಡಿಕೊಂಡಿದ್ದಾರೆ.
“ಬಿಟ್‌ ಕಾಯಿನ್‌ ಕುರಿತು ರಾಜ್ಯದಲ್ಲಿ ಕೆಪಿಸಿಸಿಯಿಂದ ಪ್ರಾರಂಭಿಸಲಾಗಿರುವ ನೂತನ ಸಂಶೋಧನಾ ಕೇಂದ್ರ, ಕಾನೂನು ಹಾಗೂ ಐಟಿ ಘಟಕಗಳು ಹೆಚ್ಚಿನ ಮಾಹಿತಿಗಳನ್ನು ಕಲೆಹಾಕಬೇಕು” ಎಂದು ಸೂಚನೆ ನೀಡಿದೆ.

“ಮುಂದಿನ ವರ್ಷ ನಡೆಯಲಿರುವ ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‌, ಬಿಟ್‌ ಕಾಯಿನ್‌ ಹ್ಯಾಕಿಂಗ್‌‌ ಹಗರಣವನ್ನೇ ಪ್ರಮುಖ ಅಸ್ತ್ರವನ್ನಾಗಿ ಬಳಸಲಿದೆ. ಇದಕ್ಕೂ ಮುನ್ನ ಇಲ್ಲಿಯರೆಗೂ ಅಕ್ರಮವಾಗಿ ನಡೆದಿರುವ ವ್ಯವಹಾರಗಳ ಕುರಿತು ಜನರಿಗೆ ಸಂಪೂರ್ಣವಾದ ಮಾಹಿತಿ ನೀಡಿ” ಎಂದು ಹೈಕಮಾಂಡ್‌ ತಿಳಿಸಿದೆ.
ಬಿಟ್‌ ಕಾಯಿನ್‌ ದಂಧೆ ಬಗ್ಗೆ ಸಾಕಷ್ಟು ಗೊಂದಲಗಳಿವೆ. ಈ ವ್ಯವಹಾರ ಹೇಗೆ ನಡೆದಿದೆ. ಇದರಿಂದ ಜನಸಾಮಾನ್ಯರಿಗಾದ ನಷ್ಟವೇನು?. ಹೇಗೆ ಸರ್ಕಾರಕ್ಕೆ ತೆರಿಗೆ ವಂಚನೆಯಾಗಿದೆ ಎನ್ನುವ ಬಗ್ಗೆ ಗೊಂದಲಗಳಿವೆ. ಈ ಗೊಂದಲಗಳನ್ನು ಬಗೆಹರಿಸಿ ಬಿಟ್‌ಕಾಯಿನ್‌ ವ್ಯವಹಾರಕ್ಕೆ ಹಗರಣದ ಸ್ಪಷ್ಟ ರೂಪ ನೀಡಲು ಕಾಂಗ್ರೆಸ್‌ ಯತ್ನಿಸುತ್ತಿದೆ.
ದೆಹಲಿಯಲ್ಲಿ ರಣದೀಪ್‌ಸಿಂಗ್‌ ಸುರ್ಜೇವಾಲಾ ಅವರು ಪತ್ರಿಕಾಗೋಷ್ಟಿ ನಡೆಸುವ ಮುಖೇನ ಬಿಟ್‌ ಕಾಯಿನ್‌ ಹಗರಣಕ್ಕೆ ರಾಷ್ಟ್ರೀಯ ಸ್ವರೂಪ ನೀಡಿದರು. ಕಾಂಗ್ರೆಸ್‌ ಕಲೆ ಹಾಕುತ್ತಿರುವ ಮಾಹಿತಿಯ ಪ್ರಕಾರ, ಅಂತರಾಷ್ಟ್ರೀಯ ಮಟ್ಟದಲ್ಲಿ ಇದು 50 ಸಾವಿರ ಕೋಟಿ ರೂ. ಗೂ ಅಧಿಕ ಮಟ್ಟದ ಬೃಹತ್‌ ಹಗರಣ ಎಂದು ಹೇಳಲಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು