ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಡಿಎ ಅಧ್ಯಕ್ಷರ ಹುದ್ದೆಗೆ IAS ಅಧಿಕಾರಿಯನ್ನೇ ನೇಮಕ ಮಾಡಿದ ಸರ್ಕಾರ ; ಶಾಸಕರಿಗೆ ಬಿಗ್ ಶಾಕ್!

Twitter
Facebook
LinkedIn
WhatsApp
Untitled 21

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ ) ಅಧ್ಯಕ್ಷರನ್ನಾಗಿ ಐಎಎಸ್​ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಹಿನ್ನೆಲೆಯಲ್ಲಿ ಐಎಎಸ್​ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಶಾಸಕರಾದ ಟಿ.ಬಿ.ಜಯಚಂದ್ರ, ಹ್ಯಾರಿಸ್, ಎಂ.ಕೃಷ್ಣಪ್ಪ, ಪ್ರಿಯಾಕೃಷ್ಣ ಸೇರಿದಂತೆ ಹಲವರ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ರಾಜಕಾರಣಿಗಳಿಗೆ ಮಣೆಹಾಕದೆ ಬಿಡಿಎ ಅಧ್ಯಕ್ಷ(Bangalore Development Authority)  ಹುದ್ದೆಗೆ IAS ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​​ನ ಕೆಲ ಶಾಸಕರಿಗೆ ಭಾರೀ ನಿರಾಸೆಯಾಗಿದೆ.

ಬಿಡಿಎ ಸೇರಿದಂತೆ ರಾಮನಗರ ಹಾಗೂ ಗ್ರಾಮಾಂತರ ಮತ್ತು ಕರ್ನಾಟಕದ ಒಟ್ಟು 10 ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರಾಗಿ ರಾಖೇಶ್ ಸಿಂಗ್ ಅವರನ್ನು ನೇಮಕ ಮಾಡಿದ್ದು, ಇದು ಅಚ್ಚರಿಕೆ ಕಾರಣವಾಗಿದೆ. ಸಹಕವಾಗಿ ಬಿಡಿಎ ಹಾಗೂ ಇತರೆ ಯೋಜನಾ ಪ್ರಾಧಿಕಾರ ಅಧ್ಯಕ್ಷರ ಹುದ್ದೆಗೆ ಆಡಳಿತ ಪಕ್ಷದ ನಾಯಕರನ್ನು ನೇಮಕ ಮಾಡುವುದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಆದ್ರೆ, ಇದೀಗ ಅಚ್ಚರಿ ಎಂಬಂತೆ ಸರ್ಕಾರ ಪಕ್ಷದ ನಾಯಕರನ್ನು ಬಿಟ್ಟು ಐಎಎಸ್​ ಅಧಿಕಾರಿಯನ್ನು ನೇಮಕ ಮಾಡಿ ಅಚ್ಚರಿ ಮೂಡಿಸಿದೆ.

ಸಚಿವ ಸ್ಥಾನ ವಂಚಿತ ಶಾಸಕರು ಈಗ ಪ್ರಮುಖ ನಿಗಮ ಹಾಗೂ ಮಂಡಳಿಗಳ ಮೇಲೆ ಕಣ್ಣಿಟ್ಟಿದ್ದಾರೆ. ಅದರಲ್ಲೂ ಮುಖ್ಯವಾಗಿ ಬಿಡಿಎ ಚೇರ್ಮನ್ ಹುದ್ದೆಗೆ ಭಾರೀ ಪೈಪೋಟಿ ನಡೆದಿತ್ತು. ಟಿಬಿ ಜಯಚಂದ್ರ ಜೊತೆಗೆ ಬೆಂಗಳೂರಿನ ವಿಜಯನಗರ ಶಾಸಕ ಪ್ರಿಯಾಕೃಷ್ಣ ಹಾಗೂ ಶಾಂತಿನಗರ ಕ್ಷೇತ್ರದ ಶಾಸಕ ಎನ್​ಎ ಹ್ಯಾರಿಸ್ ಸಹ ಬಿಡಿಎ ಚೇರ್ಮನ್ ​ ಬೇಕೆಂದು ಪಟ್ಟು ಹಿಡಿದಿದ್ದರು. ಬಿಡಿಎ ಚೇರ್ಮನ್ ಹುದ್ದೆಯನ್ನು ಸ್ಥಳೀಯ ಶಾಸಕರಿಗೇ ನೀಡಿ ಎಂದು ಬೆಂಗಳೂರು ಶಾಸಕರು ಡಿಕೆಶಿವಕುಮಾರ್ ಮೇಲೆ ಒತ್ತಡ ಹಾಕಿದ್ದರು. ಆದ್ರೆ, ಅಂತಿಮವಾಗಿ ರಾಜ್ಯ ಸರ್ಕಾರ ರಾಜಕಾರಣಿಗಳನ್ನು ಬಿಟ್ಟು ಐಎಎಸ್ ಅಧಿಕಾರಿಯನ್ನು ನೇಮಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ