ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಬಿಎಂಪಿ ಚುನಾವಣೆ ಇನ್ನೂ 4 ತಿಂಗಳು ಇಲ್ಲ, ಸರ್ಕಾರ ನಿರಾಳ

Twitter
Facebook
LinkedIn
WhatsApp
ಬಿಬಿಎಂಪಿ ಚುನಾವಣೆ ಇನ್ನೂ 4 ತಿಂಗಳು ಇಲ್ಲ, ಸರ್ಕಾರ ನಿರಾಳ

ನವದೆಹಲಿ (ಡಿ.16): ಬಿಬಿಎಂಪಿ ಸೇರಿ ಸ್ಥಳೀಯ ಸಂಸ್ಥೆಗಳಿಗೆ ನಡೆಯಬೇಕಿದ್ದ ಚುನಾವಣೆ ವಿಚಾರದಲ್ಲಿ ಸರ್ಕಾರಕ್ಕೆ ದೊಡ್ಡ ರಿಲೀಫ್‌ ಸಿಕ್ಕಿದೆ. ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ನ್ಯಾಯಾಲಯದಿಂದ ಮತ್ತಷ್ಟು ದಿನಗಳ ಅವಕಾಶ ಸಿಕ್ಕಿದೆ. ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ನೀಡಬೇಕಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್‌ ಮಾ.31ರ ತನಕ ಗಡುವು ನೀಡಿದೆ. ನ್ಯಾಯಮೂರ್ತಿ ಅಬ್ದುಲ್‌ ನಾಸೀರ್‌ ಹಾಗೂ ನ್ಯಾ.ಹಿಮಾಕೊಹ್ಲಿ ಅವರಿದ್ದ ದ್ವಿಸದಸ್ಯ ಪೀಠದ ಮುಂದೆ ಗುರುವಾರ ಸ್ಥಳೀಯ ಸಂಸ್ಥೆಗಳಿಗೆ ಇನ್ನೂ ಚುನಾವಣೆ ನಡೆಸದಿರುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಬಂದಿತ್ತು. 

ಈ ವೇಳೆ ಕರ್ನಾಟಕ ಸರ್ಕಾರದ ಪರ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ವಾದ ಮಂಡಿಸಿದರು. ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ನೀಡಬೇಕಿದೆ. ಇದಕ್ಕಾಗಿ ನ್ಯಾ.ಭಕ್ತವತ್ಸಲಂ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿ ಮಾಹಿತಿ ಮತ್ತು ಅಂಕಿ-ಅಂಶಗಳನ್ನು ಸಂಗ್ರಹಿಸುತ್ತಿದೆ. ಮೀಸಲಾತಿ ಬಗ್ಗೆ ವರದಿ ನೀಡಲು ಮತ್ತಷ್ಟು ಸಮಯ ಬೇಕು ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯ ಚುನಾವಣಾ ಆಯೋಗದ ವಕೀಲರು, ಸಕಾಲಕ್ಕೆ ನಡೆಯಬೇಕಿದ್ದ ಚುನಾವಣೆ ನಡೆದಿಲ್ಲ. ಇದರಿಂದ ತುಂಬ ವಿಳಂಬವಾಗುತ್ತಿದೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ