ಬಿ.ಸಿ.ರೋಡ್ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದ ಬಳಿಯಲ್ಲಿ ಬೆಂಕಿ ಬಿ.ಸಿ.ರೋಡ್ -ನಂದಾವರ ರಸ್ತೆ ತಾತ್ಕಾಲಿಕ ಬಂದ್
Twitter
Facebook
LinkedIn
WhatsApp
ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದ ಬಳಿ ರೈಲ್ವೆ ಹಳಿಯ ಸಮೀಪ ಹಾಗೂ ಅದರ ಎದುರು ಬದಿಯ ಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಕೆಲ ಹೊತ್ತು ಬಿಸಿರೋಡಿನಿಂದ ನಂದಾವರಕ್ಕೆ ತೆರಳುವ ರಸ್ತೆ ಬಂದ್ ಆಗಿತ್ತು.
ರಸ್ತೆ ತುಂಬಾ ಹೊಗೆ ತುಂಬಿದ್ದು, ಬೆಂಕಿಯ ಜ್ವಾಲೆ ವಿಪರೀತವಾಗಿ ಹರಡಿತ್ತು. ರಸ್ತೆಯ ಎರಡೂ ಬಾಗದಲ್ಲಿ ಕಸದ ರಾಶಿ ಬಿದ್ದಿದ್ದು ಕಸದ ರಾಶಿಗೆ ಯಾರೋ ಬೆಂಕಿ ಹಾಕಿರಬೇಕು ಎಂದು ಹೇಳಲಾಗುತ್ತಿದೆಯಾದರೂ ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ.
ಬಿಸಿರೋಡು ಮುಖ್ಯ ಪೇಟೆ ಹಾಗೂ ರೈಲ್ವೆ ನಿಲ್ದಾಣದ ಬಳಿ ರಸ್ತೆಯ ಇಕ್ಕೆಲಗಳಲ್ಲಿ ಬೆಂಕಿ ಬಿದ್ದ ಕಾರಣ ಕೆಲ ಹೊತ್ತು ಆತಂಕದ ವಾತವರಣ ನಿರ್ಮಾಣ ವಾಗಿತ್ತು.
ಇನ್ನು ಬಂಟ್ವಾಳ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ನೀರು ಹಾಯಿಸಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ.
ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದು, ಜನರನ್ನು ಚದುರಿಸಲು ಬಂಟ್ವಾಳ ನಗರ ಠಾಣಾ ಎಸ್ ಐ ರಾಮಕೃಷ್ಣ ಮತ್ತು ತಂಡದವರು ಹರಸಾಹಸ ಪಟ್ಟರು.