ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಕಿ ಅವಘಡ – ಮಕ್ಕಳು, ಮಹಿಳೆಯರು ಸೇರಿ 14 ಮಂದಿ ಸಜೀವದಹನ

Twitter
Facebook
LinkedIn
WhatsApp
C2C28174 FCE2 4CDF 9679 C92DCE9D474A 1

ರಾಂಚಿ: ಬಹುಮಹಡಿ ಕಟ್ಟಡದಲ್ಲಿ (Multi-Storey Building) ಸಂಭವಿಸಿದ ಬೆಂಕಿ (Fire) ಅವಘಡದಲ್ಲಿ 14 ಮಂದಿ ಸಾವನ್ನಪ್ಪಿದ ಘಟನೆ ಜಾರ್ಖಂಡ್‍ನಲ್ಲಿ (Jharkhand) ನಡೆದಿದೆ.

ಜಾರ್ಖಂಡ್‍ನ ಧನ್‍ಬಾದ್‍ನ (Dhanbad) ಜೋರಾಫಟಕ್‍ನಲ್ಲಿರುವ 13 ಅಂತಸ್ತಿನ ಕಟ್ಟಡವೊಂದರಲ್ಲಿ ಈ ಘಟನೆ ನಡೆದಿದೆ. ಘಟನೆ ವೇಳೆ 10 ಮಹಿಳೆಯರು ಹಾಗೂ ಮೂವರು ಮಕ್ಕಳು ಸೇರಿದಂತೆ 14 ಮಂದಿ ಸಾವನ್ನಪ್ಪಿದ್ದು, 11 ಜನರು ಗಾಯಗೊಂಡಿದ್ದಾರೆ. ಅವರನ್ನೆಲ್ಲರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

 

 

ಬೆಂಕಿ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಂಕಿ ನಂದಿಸಲು 40 ಅಗ್ನಿಶಾಮಕ ಟೆಂಡರ್‌ಗಳು ನೆರೆದಿತ್ತು. ಘಟನೆಗೆ ಸಂಬಂಧಿಸಿ ನರೇಂದ್ರ ಮೋದಿ (Narendra Modi) ಹಾಗೂ ಜಾರ್ಖಂಡ್‍ನ ಮುಖ್ಯಮಂತ್ರಿ ಹೇಮಂತ್ ಸೋರೆನ್ (Hemant Soren) ಟ್ವೀಟ್ ಮಾಡಿ ಮೃತರ ಕುಟುಂಬಗಳಿಗೆ ಸಂತಾಪವನ್ನು ಸೂಚಿಸಿದರು. 

 

ಟ್ವೀಟ್‍ನಲ್ಲಿ ಏನಿದೆ?: ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ಧನ್‍ಬಾದ್‍ನಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಸಾವನ್ನಪ್ಪಿರುವ ವಿಷಯ ಕೇಳಿ ತೀವ್ರ ದುಃಖವಾಗಿದೆ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು. ಹಾಗೂ ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂ. ಹಾಗೂ ಗಾಯಳುಗಳಿಗೆ 50,000ರೂ. ಪರಿಹಾರವನ್ನು ಘೋಷಿಸಿದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ