ಬುಧವಾರ, ಮೇ 1, 2024
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಲ್ಲಿ ಸಿಗರೇಟ್‌ ವಿಚಾರಕ್ಕೆ ನಡೆದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯ

Twitter
Facebook
LinkedIn
WhatsApp
suicide16709127311678050822 19

ಬೆಂಗಳೂರು: ಸಿಗರೇಟ್ ವಿಚಾರಕ್ಕೆ ಮೂವರ ನಡುವೆ ಜಗಳ ಶುರುವಾಗಿ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ (Bengaluru) ಉಪ್ಪಾರಪೇಟೆಯಲ್ಲಿ ನಡೆದಿದೆ.

ಕಲಬುರಗಿ ಮೂಲದ ಮಲ್ಲಿನಾಥ್ ಬಿರಾದರ್ (33), ಗಣೇಶ್ ಹಾಗೂ ಮತ್ತೋರ್ವ ಮೂವರು ಅಡುಗೆ ಕೆಲಸ ಮಾಡಿಕೊಂಡಿದ್ದರು. ಪ್ರತಿದಿನ ಬೆಂಗಳೂರಿನ ಬೇರೆ ಬೇರೆ ಕಡೆ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಉಪ್ಪಾರಪೇಟೆಯ ಭಾಗ್ಯ ವಿನಾಯಕ ದೇವಸ್ಥಾನದ ಪಕ್ಕದಲ್ಲಿ ಬಂದು ಮೂವರು ಕೂತಿದ್ದಾರೆ. ಹೀಗೆ ಕುಳಿತಿದ್ದವರ ಮಧ್ಯೆ ಸಿಗರೇಟ್ ವಿಚಾರಕ್ಕೆ ಕಿರಿಕ್ ಆಗಿದೆ. ನೋಡ ನೋಡ್ತಿದ್ದಂತೆ ಆರೋಪಿ ಗಣೇಶ್, ಮಲ್ಲಿನಾಥ್ ಬಿರಾದರ್ ಮತ್ತು ಮತ್ತೋರ್ವನ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಘಟನೆಯಲ್ಲಿ ಗಣೇಶ್‌ಗೂ ಗಾಯವಾಗಿದ್ದು, ಸ್ಥಳೀಯರ ಸಹಾಯದಿಂದ ಮೂವರನ್ನು ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರಲ್ಲಿ ಮಲ್ಲಿನಾಥ್ ಬಿರಾದರ್ ಸಾವನ್ನಪ್ಪಿದ್ದಾನೆ. ಮತ್ತೋರ್ವನ ಮರ್ಮಾಂಗಕ್ಕೆ ಚಾಕು ಇರಿತವಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಆರೋಪಿ ಗಣೇಶ್‌ಗೂ ಗಾಯಗಳಾಗಿವೆ. ಮೇಲ್ನೋಟಕ್ಕೆ ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆ ಎನ್ನಲಾಗುತ್ತಿದೆ. ಸದ್ಯ ಯಾರು ಹೇಳಿಕೆ ಕೊಡುವ ಸ್ಥಿತಿಯಲ್ಲಿ ಇಲ್ಲ. ಹಾಗಾಗಿ ನಿಖರ ಕಾರಣ ಇನ್ನಷ್ಟೇ ಗೊತ್ತಾಗಬೇಕಿದೆ.

ಘಟನೆ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ