ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

Twitter
Facebook
LinkedIn
WhatsApp
5

ಬೆಂಗಳೂರು: ಲಗ್ಗೆರೆ ಬಳಿಕ ಚೌಡೇಶ್ವರಿನಗರದ ಹಳ್ಳಿರುಚಿ ಹೋಟೆಲ್ ಬಳಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆಯಾಗಿದೆ(Congress Worker Murder). ನಿನ್ನೆ ರಾತ್ರಿ ಕಾಂಗ್ರೆಸ್ ಕಾರ್ಯಕರ್ತ ರವಿ ಅಲಿಯಾಸ್ ಮತ್ತಿರವಿ(42) ಎಂಬುವವರನ್ನು ಬೈಕ್​ಗಳಲ್ಲಿ ಬಂದ ಐದಾರು ದುಷ್ಕರ್ಮಿಗಳು ಹತ್ಯೆ ಮಾಡಿ ಎಸ್ಕೇಪ್ ಅಗಿದ್ದಾರೆ. CMH​ ಬಾರ್ ಬಳಿಯಿಂದ ರವಿಯನ್ನು ಅಟ್ಟಾಡಿಸಿಕೊಂಡು ಹಳ್ಳಿರುಚಿ ಹೊಟೇಲ್ ಮುಂಭಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಬಳಿಕ ತಲೆ ಮೇಲೆ ಕಲ್ಲು ಎತ್ತಿಹಾಕಲಾಗಿದೆ(Murder).

ರವಿ ಕೊಲೆ ಮಾಡಿದ ಹಂತಕರು ಕೊಲೆಗೂ ಮುನ್ನ ಏರಿಯಾದಲ್ಲಿ ಹಾಕಿದ್ದ ರವಿಕುಮಾರ್ ಅವರ ಫ್ಲೆಕ್ಸ್ ಹರಿದು ಹಾಕಿದ್ದಾರೆ. ಬಳಿಕ ರವಿ ಮನೆ ಮುಂದೆ ಬಂದು ಕಾದು ಕುಳಿತಿದ್ದರು. ಮೇ 24ರಂದು ಕಾಂಗ್ರೆಸ್ ಮುಖಂಡ ಹಾಗೂ ಫೈನಾನ್ಷಿಯರ್ ಕೃಷ್ಣ ಮೂರ್ತಿ ಹುಟ್ಟುಹಬ್ಬ ಇತ್ತು. ಈ ಹಿನ್ನೆಲೆ ಕಾರ್ಯಕ್ರಮಕ್ಕೆ ನೂರಾರು ಕಾರ್ಯಕರ್ತರು ಆಗಮಿಸಿದ್ದರು. ಇದೇ ಹುಟ್ಟುಹಬ್ಬಕ್ಕೆ ಹಾಜರಾಗಲು ರವಿ ಖುಷಿ ಖುಷಿಯಿಂದ ಮನೆಯಿಂದ ಆಚೆ ಬಂದಾಗ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ. ತಪ್ಪಿಸಿಕೊಳ್ಳೋ ಭರದಲ್ಲಿ ಓಡಿದ ರವಿಯನ್ನ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದಾರೆ. ಕೊಚ್ಚಿ ಕೊಲೆ ಮಾಡಿ ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದಾರೆ. 

ಇನ್ನು ಕುರಿ, ಮೇಕೆ ಸಾಕಾಣಿಕೆ ಮಾಡಿಕೊಂಡಿದ್ದ ರವಿ ಮೇಲೆ ಈ ಹಿಂದೆಯೂ ಕೂಡ ಹಲವು ಕೇಸ್ ಗಳಿವೆ ಎಂದು ತಿಳಿದುಬಂದಿದೆ. ಸದ್ಯ ಸ್ಥಳಕ್ಕೆ ನಂದಿನಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡು ಹಂಕತರ ಪತ್ತೆಗೆ ಬಲೆ ಬೀಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ