ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನಲ್ಲಿ ಬಿಜೆಪಿ 'ಪ್ರಣಾಳಿಕೆ ಸಲಹಾ ಸಂಗ್ರಹ ಅಭಿಯಾನ'ಕ್ಕೆ ಚಾಲನೆ

Twitter
Facebook
LinkedIn
WhatsApp
ಬೆಂಗಳೂರಿನಲ್ಲಿ ಬಿಜೆಪಿ 'ಪ್ರಣಾಳಿಕೆ ಸಲಹಾ ಸಂಗ್ರಹ ಅಭಿಯಾನ'ಕ್ಕೆ ಚಾಲನೆ

ಬೆಂಗಳೂರು: ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ ಜನಪರವಾಗಿ ಕೆಲಸ ಮಾಡುತ್ತಿದ್ದು, ಸಮೃದ್ಧ ಕರ್ನಾಟಕ ನಿರ್ಮಿಸಲು ಜನರ ಅಭಿಪ್ರಾಯದೊಂದಿಗೆ ಬಿಜೆಪಿ ಪ್ರಣಾಳಿಕೆ ತಯಾರಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರೊಂದಿಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಪ್ರಣಾಳಿಕೆ ತಯಾರಿಕೆ ಕುರಿತು ಮಾಹಿತಿ ಸಚಿವರು ಮಾಹಿತಿ ಹಂಚಿಕೊಂಡರು. ‘ಸಮೃದ್ಧ ಕರ್ನಾಟಕಕ್ಕೆ ಬಿಜೆಪಿಯೇ ಭರವಸೆ’ ಎಂಬ ಘೋಷಣೆಯಲ್ಲಿ ಜನರ ಬಳಿಗೆ ಹೋಗುತ್ತೇವೆ. ಕನಿಷ್ಠ 50 ಸೆಕ್ಟರ್ ಸಭೆಗಳನ್ನು ಮಾಡಲಿದ್ದೇವೆ. ಕೃಷಿ, ತೋಟಗಾರಿಕೆ, ರೇಷ್ಮೆ ಮೊದಲಾದ ಕ್ಷೇತ್ರಗಳಲ್ಲಿ ರೈತರೊಂದಿಗೆ ಸಭೆ ನಡೆಸಿ, ಸಲಹೆ ಪಡೆಯಲಾಗುವುದು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಯಲ್ಲೂ ಸಭೆ ನಡೆಸಿ ಸಂಘಟನೆಗಳ ಸಲಹೆ, ಸೂಚನೆ ಪಡೆಯಲಾಗುವುದು ಎಂದರು.

ವಾಟ್ಸಾಪ್ ನಂಬರ್ 8596158158 ಮತ್ತು ವೆಬ್ ಸೈಟ್ www.bjp4samruddhakarnataka.in ಮೂಲಕ ಜನರು ಸಲಹೆ ಕಳುಹಿಸಬಹುದು, ಕನಿಷ್ಠ 1 ಕೋಟಿ ಜನರನ್ನು ತಲುಪುವ ಗುರಿ ಇದೆ. ಮಾರ್ಚ್ 25 ರವರೆಗೆ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ನಿರಂತರ ಸಭೆ ಮಾಡಲಾಗುವುದು, ಕಲ್ಯಾಣ ಕರ್ನಾಟಕ, ಹಳೆ ಮೈಸೂರು, ಬೆಂಗಳೂರು ನಗರ ಮೊದಲಾದ ವಿಭಾಗಗಳಲ್ಲೂ ಸಲಹೆ ಪಡೆಯಲಾಗುವುದು, ಪ್ರಗತಿ ರಥಗಳಲ್ಲಿ ಸಲಹಾ ಪೆಟ್ಟಿಗೆ ಇಟ್ಟು ಅಲ್ಲಿಂದಲೂ ಸಲಹೆ ಪಡೆಯಲಾಗುವುದು ಎಂದು ಅವರು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ