ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನಲ್ಲಿ ಹಣದ ಮಳೆ ಸುರಿದ ಅಸಾಮಿ

Twitter
Facebook
LinkedIn
WhatsApp
2 1674544668

ಬೆಂಗಳೂರು: ನಗರದ ಮಾರ್ಕೆಟ್​ ಫ್ಲೈ ಓವರ್​​ ನಲ್ಲಿ ಓರ್ವ ವ್ಯಕ್ತಿ ಹಣದ ಮಳೆಯನ್ನೇ ಸುರಿಸಿದ್ದಾರೆ. ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ. ಫ್ಲೈ ಓವರ್‌ ಮೇಲೆ ವ್ಯಕ್ತಿಯೋರ್ವ ಬಂದಿದ್ದು ತನ್ನ ಕೈಯಲ್ಲಿದ್ದ ಚೀಲದಿಂದ ಹಣವನ್ನು ತೆಗೆದು ಜನರು ಮೇಲೆ ಎಸೆಯುತ್ತಾ ಹೋಗಿದ್ದಾನೆ. ಅಂದ ಹಾಗೆ ಈ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು ಜನ ಹಣ ಸುರಿಯುತ್ತಿರುವ ಹಣದ ಮಳೆಯನ್ನು ಹಿಡಿಯಲು ನಾ ಮುಂದು ತಾ ಮುಂದು ಎಂದು ಮುಗಿಬಿದ್ದಿದ್ದರು. ಕೆಲವೊಂದು ಜನ ಈತನ ವರ್ತನೆಯಿಂದ ಗಾಬರಿಗೊಂಡಿದ್ದೂ ಇದೆ

ಕೆಲವರು ಎಸೆಯಬೇಡಿ ನಮಗೆ ಕೊಡಿ ಎನ್ನುತ್ತಿದ್ದರೆ, ಇನ್ನು ಕೆಲವರು ಈತ ಈ ರೀತಿ ಯಾಕೆ ಮಾಡುತ್ತಿದ್ದಾನೆ ಎಂದು ನೋಡುತ್ತಾ ನಿಂತಿದ್ದರು. ಈತ ತನ್ನ ಹಣ ಎಸೆಯುವ ಕೆಲಸ ಮುಗಿದ ಮೇಲೆ ಆ ಜಾಗದಿಂದ ಕಾಲ್ಕಿತ್ತಿದ್ದಾನೆ.ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ್ ನಿಂಬರಗಿ, ಕೆಆರ್ ಮಾರ್ಕೆಟ್ ಫ್ಲೈ ಓವರ್​​ ಮೇಲೆ ನಿಂತು ಹಣ ಎಸೆದು ವ್ಯಕ್ತಿ ಹೋಗಿದ್ದಾನೆ.

ಹತ್ತು ರೂಪಾಯಿ ನೋಟುಗಳನ್ನ ವ್ಯಕ್ತಿ ಎಸೆದು ಹೋಗಿದ್ದು, ಆದರೆ ಎಷ್ಟು ನೋಟು ಎಸೆದಿದ್ದಾರೆ ಅನ್ನೋ ಬಗ್ಗೆ ಮಾಹಿತಿ ಇಲ್ಲ. ಸ್ಥಳಕ್ಕೆ ಸಿಟಿ ಮಾರ್ಕೆಟ್​ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಣ ಎಸೆದು ಹೋದ ವ್ಯಕ್ತಿ ಪತ್ತೆ ಮಾಡಲು ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ