ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರು, ಕರಾವಳಿಯಲ್ಲಿ 3 ದಿನ ಭಾರಿ ಮಳೆ ಸಾಧ್ಯತೆ

Twitter
Facebook
LinkedIn
WhatsApp
ವಾಯುಭಾರ ಕುಸಿತ. ಕರಾವಳಿ ಸೇರಿದಂತೆ ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ.

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ  ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಸುರಿಯಲಿದೆ. ಸಿಲಿಕಾನ್‌ ಸಿಟಿ ಬೆಂಗಳೂರು, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಮಲೆನಾಡಿನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. ಅಲ್ಲದೇ ದಕ್ಷಿಣ ಒಳನಾಡಿನಲ್ಲಿಯೂ ಸಾಧಾರಣ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮಾಹಿತಿಯನ್ನು ನೀಡಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಸುರಿಯಲಿದೆ. ಕಳೆದ ಹಲವು ದಿನಗಳ ಹಿಂದೆಯಷ್ಟೇ ಭಾರಿ ಅವಾಂತರವನ್ನು ಸೃಷ್ಟಿಸಿದ್ದ ಮಳೆ ಮತ್ತೆ ಆರ್ಭಟಿಸಲಿದೆ. ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡಿನ ಶಿವಮೊಗ್ಗ, ಕೊಡಗು, ಹಾನಸ, ಕೊಡಗು, ಮಂಡ್ಯ, ಹಾಸನ, ರಾಮನಗರ, ಚಾಮರಾಜ ನಗರಗಳಲ್ಲಿ ನವೆಂಬರ್‌ 13ರ ವರೆಗೆ ಭಾರಿ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಎಚ್ಚರಿಕೆಯನ್ನು ನೀಡಲಾಗಿದೆ.

ಈ ಬಾರಿ ಅಕಾಲಿಕ ಮಳೆಯಿಂದಾಗಿ ರಾಜ್ಯದ ರೈತರು ತತ್ತರಿಸಿ ಹೋಗಿದ್ದಾರೆ. ಕರಾವಳಿ ಭಾಗದಲ್ಲಿ ಭತ್ತದ ಕಟಾವು ಕಾರ್ಯ ನಡೆಯುತ್ತಿದ್ದು, ಎರಡು ದಿನಗಳ ಕಾಲ ಮಳೆಯಾಗುವ ಭೀತಿಯಿಂದಾಗಿ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೈರುತ್ಯ ಮುಂಗಾರು ಬಂಗಾಳಕೊಲ್ಲಿಯಿಂದ ಹಾದು ತಮಿಳುನಾಡು ಕರಾವಳಿಯನ್ನು ಸಮೀಪಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು