ಬುಧವಾರ, ಮೇ 15, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ 5 ದಿನ ಮಳೆ ಸಾಧ್ಯತೆ

Twitter
Facebook
LinkedIn
WhatsApp
Rain Report1583178931

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮಳೆ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ(Bengaluru Rain). ನಗರದಲ್ಲಿಂದು ಮೋಡಕವಿದ ವಾತಾವರಣ ಇರಲಿದ್ದು ಮಧ್ಯಾಹ್ನದ ನಂತರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ದಿನಗಳ ಕಾಲ ಮಳೆಯಾಗಲಿದ್ದು ದಕ್ಷಿಣ ಒಳನಾಡಿನಲ್ಲಿ ಇಂದು, ನಾಳೆ ಮಳೆಯಾಗುವ ಸಾಧ್ಯತೆ ಇದೆ ಇಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನು ಮತ್ತೊಂದೆಡೆ ಇಂದು ಕರ್ನಾಟಕ ಸಿಎಂ ಆಗಿ ಸಿದ್ದರಾಮಯ್ಯ(Siddaramaiah), ಡಿಸಿಎಂ ಆಗಿ ಡಿಕೆ ಶಿವಕುಮಾರ್(DK Shivakumar) ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ.

ಇಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ. ಮೇ 22ರ ನಂತರ ಮಳೆಯ ತೀವ್ರತೆ ಹೆಚ್ಚಲಿದೆ. ಮೇ 23ರ ವೇಳೆಗೆ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಮಂಡ್ಯ, ಮೈಸೂರು, ಹಾಸನ, ರಾಮನಗರ, ಚಿಕ್ಕಿಬಳ್ಳಾಪುರ, ಕೋಲಾರ, ಚಾಮರಾಜನಗರ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಮೊದಲ ಮೂರು ದಿನ ಸಾಧಾರಣ ಮಳೆ ಆರಂಭವಾಗಲಿದೆ. ಮುಂದಿನ ಐದು ದಿನಗಳ ಪೈಕಿ ಕೊನೆಯ ಎರಡು ದಿನ ಈ ಒಳನಾಡಿನ ಜಿಲ್ಲೆಗಳಿಗೆ ಕೊನೆಯ ಎರಡು ದಿನ ವ್ಯಾಪಕ ಮಳೆ ಬರುವ ಸಾಧ್ಯತೆ ಇದೆ. ಈ ವೇಳೆ ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗದ ಜಿಲ್ಲೆಗಳಲ್ಲಿ ಮಳೆ ಸುರಿಸುವ ಮಾರುತಗಳು ಸಕ್ರಿಯವಾಗಿರಲಿವೆ.

ಗರಿಷ್ಠ ತಾಪಮಾನ: ಬೆಂಗಳೂರು ಹವಾಮಾನ ವರದಿ ಇದೀಗ ಮಳೆಯ ಕಾರಣಕ್ಕೆ ಇನ್ನೆರಡು ದಿನಗಳಲ್ಲಿ ತಾಪಮಾನ ಹಂತ ಹಂತವಾಗಿ ಕಡಿಮೆಯಾಗಲಿದೆ. ಉತ್ತರ ಕರ್ನಾಟಕದ ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಗಡಿ ಮುಟ್ಟಿದೆ. ಇತ್ತ ರಾಜಧಾನಿ ಬೆಂಗಳೂರಿನಲ್ಲಿ ಸಹ ಗರಿಷ್ಠ ತಾಪಮಾನ 30.5 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದೆ.
ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ನಂತರ ಮೂರು ದಿನ ಅಂದರೆ ಮೇ 21ರಿಂದ ಮೇ 23ರವರೆಗೆ ಮೂರು ದಿನ ಜೋರು ಮಳೆಯ ಆಗಮನವಾಗಲಿದೆ. ಈ ವೇಳೆ ವಾತಾವರಣದಲ್ಲಿ ತಾಪಮಾನ ತುಸು ಇಳಿಕೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ