ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರು-ಮಂಗಳೂರು ಆಕರ್ಷಕ ವಿಸ್ಟಾಡೋಮ್‌ ಬೋಗಿಯ ರೈಲು ಸಂಚಾರಕ್ಕೆ ಚಾಲನೆ

Twitter
Facebook
LinkedIn
WhatsApp
ಬೆಂಗಳೂರು-ಮಂಗಳೂರು ಆಕರ್ಷಕ ವಿಸ್ಟಾಡೋಮ್‌ ಬೋಗಿಯ ರೈಲು ಸಂಚಾರಕ್ಕೆ ಚಾಲನೆ

ಮಂಗಳೂರು: ರಾಜ್ಯದ ಪ್ರವಾಸೋದ್ಯಮದ ಸಾಧ್ಯತೆಗಳನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮಂಗಳೂರು ಬೆಂಗಳೂರು ನಡುವಣ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಅನುಕೂಲವುಳ್ಳ ವಿಸ್ಟಾಡೋಮ್‌ ರೈಲು ಸಂಚಾರಕ್ಕೆ ರವಿವಾರ ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಲಾಗಿದೆ.

ರೈಲು ಸಂಖ್ಯೆ 06540/06539 ಮಂಗಳೂರು ಜಂಕ್ಷನ್‌ ಯಶವಂತಪುರ ಎಕ್ಸ್‌ ಪ್ರಸ್‌ ರೈಲಿಗೆ ಎರಡು ವಿಸ್ಟಾಡೋಮ್‌ ಬೋಗಿಗಳನ್ನು ಜೋಡಿಸಲಾಗಿದೆ. ಮಂಗಳೂರು-ಯಶವಂತಪುರ ನಡುವೆ ಹಗಲು ಸಂಚರಿಸುವ ರೈಲಿಗೆ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ‘ವಿಸ್ಟಾಡೋಮ್’ ಬೋಗಿಗಳನ್ನು ಸೇರ್ಪಡಿಸಿಕೊಂಡು ಸಂಚಾರ ಸೇವೆಗೆ ರವಿವಾರ ಬೆಳಗ್ಗೆ 9 ಗಂಟೆಗೆ ಮಂಗಳೂರು ಜಂಕ್ಷನ್ (ಪಡೀಲ್) ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.

ಬೆಂಗಳೂರು-ಮಂಗಳೂರು ಆಕರ್ಷಕ ವಿಸ್ಟಾಡೋಮ್‌ ಬೋಗಿಯ ರೈಲು ಸಂಚಾರಕ್ಕೆ ಚಾಲನೆ

ಸಂಸದ ನಳಿನ್ ಕುಮಾರ್ ಕಟೀಲ್‌ರ ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ರೈಲ್ವೆ ಇಲಾಖೆಯು ಹೆಚ್ಚು ಮುತುವರ್ಜಿ ವಹಿಸಿ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಪ್ರಯತ್ನ ಮಾಡಿದೆ. ಸಾರ್ವಜನಿಕರು ಅನೇಕ ಬೇಡಿಕೆಗಳನ್ಬು ಮುಂದಿಟ್ಟಿದ್ದು, ಒಂದೊಂದೇ ಬೇಡಿಕೆಗಳನ್ನು ಈಡೇರಿಸುತ್ತಾ ಬಂದಿದೆ. 2014ರವರೆಗೆ ಆಮೆಗತಿಯಲ್ಲಿ ಸಾಗುತ್ತಿದ್ದ ಅಭಿವೃದ್ಧಿ ಕಾಮಗಾರಿಯು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಬಂದ ಬಳಿಕ ಸಾಕಷ್ಟು ತ್ವರಿತವಾಗಿ ನಡೆಯುತ್ತಿದೆ ಎಂದು ಹೇಳಿದರು.
ಅಂದಹಾಗೆ, ಪ್ರತೀ ವಿಸ್ಟಾಡೋಮ ಬೋಗಿಯಲ್ಲಿ 44 ಮಂದಿ ಪ್ರಯಾಣಿಸಬಹುದಾಗಿದೆ. ಎರಡು ಬೋಗಿಯಲ್ಲಿ 88 ಮಂದಿ ಯಾಣಿಸಬಹುದಾಗಿದೆ. ಈ ವಿಶೇಷ ಬೋಗಿಯು ಪಶ್ಚಿಮ ಘಟ್ಟದ ನಡುವೆ ಸಂಚರಿಸುವ ಸಂದರ್ಭ ರೈಲು ಪ್ರಯಾಣಿಕರಿಗೆ ಪ್ರಕೃತಿಯ ರಮಣೀಯ ಸೌಂದರ್ಯವನ್ನು ಕಣ್ತುಂಬಿಸುವ ಅವಕಾಶ ಸಿಗಲಿವೆ.

ಪಶ್ಚಿಮಘಟ್ಟ ಮತ್ತು ಕರಾವಳಿ ಭಾಗದಲ್ಲಿ ಸಂಚರಿಸುವ ಮೂರು ರೈಲುಗಳ ದ್ವಿತೀಯ ದರ್ಜೆಯ ಒಂದು ಸಾಮಾನ್ಯ ಬೋಗಿಯನ್ನು ತೆಗೆದು ತಲಾ ಎರಡು ವಿಸ್ಟಾಡೋಮ್ ಕೋಚ್‌ಗಳನ್ನು ಜೋಡಿಸಲಾಗಿದೆ. ಬೆಂಗಳೂರು-ಮಂಗಳೂರು ನಡುವೆ ಸಕಲೇಶಪುರದಿಂದ ಸುಬ್ರಹ್ಮಣ್ಯದವರೆಗೆ ಹಾದುಹೋಗುವ 55 ಕಿ.ಮೀ. ರೈಲು ಮಾರ್ಗ ಪ್ರಯಾಣಿಕರು ಪ್ರಕೃತಿಯ ಸೊಬಗಿನ ದರ್ಶನವನ್ನು ಪಡೆಯಲಿದ್ದಾರೆ.
ಕಳೆದ ಹಲವು ವರ್ಷಗಳಿಂದ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳಿಗೆ ಗಾಜಿನ ಛಾವಣಿ, ಕಿಟಕಿಗಳನ್ನು ಅಳವಡಿಸುವಂತೆ ಸಾರ್ವಜನಿಕರು ಮನವಿ ಮಾಡಿದ ಮೇರೆಗೆ ವಿಸ್ಟಾಡೋಮ್ ರೈಲು ಸಂಚಾರ ಆರಂಭಗೊಂಡಿದೆ. ಪಶ್ಚಿಮ ಘಟ್ಟದ ನಡುವೆ ಹಾದುಹೋಗುವ ಈ ರೈಲುಮಾರ್ಗದಲ್ಲಿ ಸಂಚರಿಸುವವರಿಗೆ ಶಿರಾಡಿ ಘಾಟಿಯ ಸೌಂದರ್ಯವನ್ನು ರೈಲಿನೊಳಗೆ ಕುಳಿತು ಸವಿಯಲು ಸಿದ್ಧರಾಗಿದ್ದಾರೆ. ಮಾರ್ಗ ಮಧ್ಯದಲ್ಲಿ ಅರಣ್ಯ, ಜಲಪಾತ, ಸುರಂಗ, ಸೇತುವೆಗಳ ರಮಣೀಯ ನೋಟವನ್ನು ಪ್ರಯಾಣಿಕರು ಆಸ್ವಾದಿಸಲಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು