ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರು-ಮಂಗಳೂರು ನಡುವೆ ಆ. 30ರ ತನಕ ವಿಶೇಷ ರೈಲು ಸೇವೆ ಆರಂಭ

Twitter
Facebook
LinkedIn
WhatsApp
ಬೆಂಗಳೂರು-ಮಂಗಳೂರು ನಡುವೆ ಆ. 30ರ ತನಕ ವಿಶೇಷ ರೈಲು ಸೇವೆ ಆರಂಭ

ಬೆಂಗಳೂರು: ಶಿರಾಡಿ ಘಾಟ್ ಬಂದ್ ಆದ ಬಳಿಕ ಬೆಂಗಳೂರು-ಮಂಗಳೂರು ನಡುವಿನ ಪ್ರಯಾಣಕ್ಕೆ ತೊಂದರೆ ಉಂಟಾಗಿದೆ. ಈ ಹಿನ್ನಲೆಯಲ್ಲಿ ಉಭಯ ನಗರಗಳ ನಡುವೆ ಹೆಚ್ಚುವರಿ ರೈಲನ್ನು ಓಡಿಸಬೇಕು ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದರು. ರೈಲ್ವೆ ಇಲಾಖೆ ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.ಜುಲೈ 26 ರಿಂದ ಆಗಸ್ಟ್ 30ರ ತನಕ ವಾರದಲ್ಲಿ ಮೂರು ದಿನ ವಿಶೇಷ ರೈಲುಗಳು ಸಂಚಾರ ನಡೆಸಲಿವೆ. ಇದರಿಂದಾಗಿ ಕರಾವಳಿ-ಬೆಂಗಳೂರು ನಡುವೆ ಸಂಚಾರ ನಡೆಸುವ ಜನರಿಗೆ ಅನುಕೂಲವಾಗಲಿದೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಮತ್ತು ಮಂಗಳೂರು ಸೆಂಟ್ರಲ್ ವಿಮಾನ ನಿಲ್ದಾಣಗಳ ನಡುವೆ ಈ ವಿಶೇಷ ರೈಲು ಸಂಚಾರ ನಡೆಸಲಿದೆ. ಸುಮಾರು ಒಂದು ತಿಂಗಳ ಕಾಲ ರೈಲು ಸಂಚಾರ ನಡೆಸಲಿದ್ದು, ಬಳಿಕ ಅದನ್ನು ಮುಂದುವರೆಸುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ.

ಬೆಂಗಳೂರು-ಮಂಗಳೂರು ನಡುವೆ 06547/ 06548 ಸಂಖ್ಯೆಯ ರೈಲುಗಳು ಸಂಚಾರ ನಡೆಸಲಿವೆ. ವಾರದಲ್ಲಿ ಮೂರು ದಿನಗಳ ಕಾಲ ಈ ವಿಶೇಷ ರೈಲುಗಳು ಸಂಚಾರ ನಡೆಸಲಿವೆ ಎಂದು ರೈಲ್ವೆ ಇಲಾಖೆ ಹೇಳಿದೆ.

ರೈಲು ಸಂಖ್ಯೆ 06547 ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಭಾನುವಾರ, ಮಂಗಳವಾರ ಮತ್ತು ಗುರುವಾರ ಸಂಚಾರ ನಡೆಸಲಿದೆ. ಮಂಗಳೂರು ಜಂಕ್ಷನ್‌ನಿಂದ ಸೋಮವಾರ, ಬುಧವಾರ ಮತ್ತು ಶುಕ್ರವಾರ 06548 ಸಂಖ್ಯೆಯ ರೈಲು ಸಂಚಾರ ನಡೆಸಲಿದೆ. ಕಳೆದ ವಾರ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ರೈಲ್ವೆ ಸಚಿವರನ್ನು ಭೇಟಿ ಮಾಡಿ, ಬೆಂಗಳೂರು-ಮಂಗಳೂರು ನಡುವೆ ಹೆಚ್ಚುವರಿ ರೈಲುಗಳನ್ನು ಓಡಿಸಬೇಕು ಎಂದು ಮನವಿ ಮಾಡಿದ್ದರು.

ಸಂಸದರು ನೀಡಿದ ಮನವಿಗೆ ರೈಲ್ವೆ ಸಚಿವರು ಸ್ಪಂದಿಸಿದ್ದರು. “ನನ್ನ ಮನವಿಗೆ ಸ್ಪಂದಿಸಿದ ರೈಲ್ವೆ ಸಚಿವರು, ಈ ಕುರಿತು ಕ್ರಮ ಕೈಗೊಳ್ಳುತ್ತೇವೆ” ಎಂದು ಭರವಸೆ ನೀಡಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದರು. ಭಾರೀ ಮಳೆಯ ಕಾರಣ ದೋಣಿಗಲ್‌ನಲ್ಲಿ ಭೂ ಕುಸಿತ ಉಂಟಾಗಿತ್ತು. ಆದ್ದರಿಂದ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಇದರಿಂದಾಗಿ ಸಂಪಾಜೆ ಮತ್ತು ಚಾರ್ಮಾಡಿ ಘಾಟ್‌ಗಳ ಮೇಲೆ ಒತ್ತಡ ಹೆಚ್ಚಾಗಿದೆ. ಶಿರಾಡಿ ಘಾಟ್ ಮಂಗಳೂರು-ಬೆಂಗಳೂರು ಸಂಪರ್ಕಿಸುವ ಮುಖ್ಯ ರಸ್ತೆಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ