ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರು: ಮೈಮರೆತ ಪ್ರೇಮಿಗಳು; ರಸ್ತೆ ಬ್ಲಾಕ್‍ - ಲಾಠಿಚಾರ್ಜ್?

Twitter
Facebook
LinkedIn
WhatsApp
KORAMANGALA 780x450 1

ಬೆಂಗಳೂರು: ಹೊಸ ವರ್ಷಾಚರಣೆ  ಹಿನ್ನೆಲೆ ನಿನ್ನೆ ಮಧ್ಯರಾತ್ರಿ ಕೋರಮಂಗಲದ (Kormangala) ಮುಖ್ಯ ರಸ್ತೆಯಲ್ಲಿ 40 ಸಾವಿರಕ್ಕೂ ಅಧಿಕ ಜನ ಒಂದೇ ಜಾಗದಲ್ಲಿ ಸೇರಿದ್ರು. 100ಕ್ಕೂ ಹೆಚ್ಚು ಬಾರ್, ಪಬ್, ರೆಸ್ಟೋರೆಂಟ್‍ಗಳು ಕಿಕ್ಕಿರಿದಿದ್ದವು. ಖಾಸಗಿ ಪಬ್ ಕಾರಿಡರ್‌ನಲ್ಲಿ ಪ್ರೇಮಿಗಳು ಮೈಮರೆತು ಅಸಭ್ಯವಾಗಿ ವರ್ತಿಸ್ತಿದ್ರು. ಇದನ್ನು ನೋಡ್ಕೊಂಡು ರಸ್ತೆ ಬ್ಲಾಕ್‍ಮಾಡಿ ನಿಂತಿದ್ದವರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದರು.

ಪಬ್‍ಗಳೆಲ್ಲವೂ ಹೌಸ್ ಫುಲ್ ಆಗಿದ್ದವು. 12 ಗಂಟೆಯ ನಂತರ ಪಬ್‍ಗಳಿಂದ ಹೊರ ಬಂದ ನೂರಾರು ಯುವತಿಯರು, ಕುಡಿದು ಅಮಲು ಹೆಚ್ಚಾಗಿ ಬೀದಿ ಬೀದಿಗಳಲ್ಲಿ ಬಿದ್ದಿದ್ರು. ರಾಣಿ ಚೆನ್ನಮ್ಮ ಪಡೆ, ಮಹಿಳಾ ಪೊಲೀಸರು ಕುಡಿದು ಪ್ರಜ್ಞೆ ತಪ್ಪಿ ಬಿದ್ದ ಯುವತಿಯರನ್ನು ಪೊಲೀಸ್ ಚೌಕಿಗಳಲ್ಲಿ ಬಿಟ್ಟು ಕಂಟ್ರೋಲ್ ಮಾಡಿದ್ರು. ಇನ್ನೊಂದೆಡೆ ಯುವತಿಯನ್ನು ಚುಡಾಯಿಸಿದ್ದಕ್ಕೆ ಗಲಾಟೆ ನಡೀತು. ಬಳಿಕ ಪೊಲೀಸರು ಜನಜಂಗುಳಿಯನ್ನು ಚದುರಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಈ ನಡುವೆ ನಗರದಲ್ಲಿ ನಡೆದ ನ್ಯೂ ಇಯರ್ ಸೆಲೆಬ್ರೇಷನ್ (New Year Celebration) ದೊಡ್ಡ ದಾಖಲೆ ಎಂದೇ ಹೇಳಬಹುದು. ಯಾಕಂದ್ರೆ ಪೊಲೀಸರು (Police) ನಿರೀಕ್ಷೆ ಮಾಡಿದ್ದಕ್ಕಿಂತ ಎರಡು ಪಟ್ಟು ಜನ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಬ್ರಿಗೇಡ್ ರೋಡ್ (Brigade Road), ಚರ್ಚ್ ಸ್ಟ್ರೀಟ್, ಎಂ.ಜಿ ರಸ್ತೆಯಲ್ಲಿ (MG Road) ಸಂಭ್ರಮಾಚರಣೆಗೆ ಬಂದ ಜನರ ಸಂಖ್ಯೆ ಸುಮಾರು 3 ಲಕ್ಷಕ್ಕೂ ಅಧಿಕ ಎಂದು ಅಂದಾಜಿಸಲಾಗಿದೆ.

ಒಂದೆರಡು ಕಡೆ ಸಣ್ಣಪುಟ್ಟ ಗಲಾಟೆಗಳು ಹೊರತುಪಡಿಸಿ, ಉಳಿದಂತೆ ಸಿಲಿಕಾನ್ ಸಿಟಿಯಲ್ಲಿ ನ್ಯೂ ಇಯರ್ ಸಂಭ್ರಮಾಚರಣೆ ಯಶಸ್ವಿಯಾಗಿ ನಡೆದಿದೆ. 8,500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಸಿಸಿಟಿವಿ ಕಣ್ಗಾವಲಿನಲ್ಲಿ ಭದ್ರತೆ ಕಲ್ಪಿಸಲಾಗಿತ್ತು. ಹಾಗಾಗಿ ಕೊರೊನಾ ರೂಪಾಂತರಿ ಆತಂಕದ ಮಧ್ಯೆ ಜನ ಸಂಭ್ರಮದಲ್ಲಿ ಮಿಂದೆದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ